ಇಂದು ಮತ್ತು ನಾಳೆ ನಗರದಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಮಳೆ ಹಾಗೂ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಅಷ್ಟೇ ಅಲ್ಲದೆ, ದಕ್ಷಿಣ ಕನ್ನಡ, ಉಡುಪಿ, ಪಶ್ಚಿಮ ಘಟ್ಟದ ಜಿಲ್ಲೆಗಳಿಗೆ ಭಾರೀ ಮಳೆಯ ಮುನ್ಸೂಚನೆ ಇದ್ದು, ಗುಡುಗು ಹಾಗೂ ಸಿಡಿಲಿನ ಮುನ್ನೆಚ್ಚರಿಕೆ ನೀಡಲಾಗಿದೆ.
ವಾತಾವರಣದಲ್ಲಿ 50 ವರ್ಷಗಳ ದಾಖಲೆಯ ಅತ್ಯಂತ ಕಡಿಮೆ ಉಷ್ಣಾಂಶ ಇದಾಗಿದೆ. 1972ರ ನಂತರ ಇದೇ ಮೊದಲು ಇಷ್ಟು ಪ್ರಮಾಣದ ಚಳಿ ವಾತಾವರಣ ಇದ್ದು, ಇದು ಸಾಮಾನ್ಯಕ್ಕಿಂತ 10 ಡಿಗ್ರಿ ಕಡಿಮೆ ಉಷ್ಣಾಂಶ ಎಂದು ಹವಾಮಾನ ಇಲಾಖೆಯ ತಜ್ಞರಾದ ಸದಾನಂದ ಅಡಿಗ ತಿಳಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ನಿನ್ನೆ ಭಾರೀ ಗಾಳಿ ಸಹಿತ ಮಳೆಯಾಗಿದೆ. ಈ ಸಂದರ್ಭದಲ್ಲಿ ಸ್ಕೂಟಿಯಲ್ಲಿ ಪ್ರಯಾಣ ಮಾಡುತ್ತಿದ್ದ ವಿದ್ಯಾರ್ಥಿನಿಯರು ಬಿರುಗಾಳಿಯ ಹೊಡೆತಕ್ಕೆ ಸಿಲುಕಿ ಪರದಾಡಿದ್ದಾರೆ. ಈ ರೀತಿ ವಿದ್ಯಾರ್ಥಿಗಳು ಗಾಳಿ ಮಳೆಗೆ ಸಿಲುಕಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
ಸಿಲಿಕಾನ್ ಸಿಟಿಯಲ್ಲಿ ಬಿರುಗಾಳಿ ಸಹಿತ ಸುರಿದ ಭಾರೀ ಮಳೆ ಆರ್ಭಟಕ್ಕೆ ನಗರದ ಹಲವೆಡೆ ಮರಗಳು ಧರೆಗುರುಳಿವೆ. ನಗರದ ಶ್ರೀರಾಂಪುರ, ಮಲ್ಲೇಶ್ವರಂ, ಗಾಂಧಿನಗರ, ಯಶವಂತಪುರ ಸೇರಿ ಹಲವೆಡೆ ಮರಗಳು ಧರೆಗುರುಳಿವೆ. ಪಶ್ಚಿಮ ವಲಯದಲ್ಲೇ ಅತಿ ಹೆಚ್ಚು ಮರ ಬಿದ್ದಿರೋ ಬಗ್ಗೆ ವರದಿ ಆಗಿದೆ.
ಹವಾಮಾನ ಕೇಂದ್ರ ಬೆಂಗಳೂರಿನ ತಜ್ಞರಾದ ಸದಾನಂದ ಅಡಿಗ ಮಾತನಾಡಿ, ಕರಾವಳಿಯ ಉಡುಪಿ ಹಾಗೂ ದ.ಕನ್ನಡ ಜಿಲ್ಲೆಗೆ ಮುಂದಿನ ಮೂರು ದಿನ ಭಾರೀ ಮಳೆಯಾಗಲಿದೆ (Heavy rain fall alert) ಎಂದು ಹೇಳಿದ್ದಾರೆ. ಎಪ್ರಿಲ್ 5 ಹಾಗೂ 6 ರಂದೂ ಕೂಡಾ ಹಲವೆಡೆ ಮಳೆ ಸಾಧ್ಯತೆ ಇದೆ, ಗುಡುಗು- ಸಿಡಿಲಿನ ಮುನ್ನೆಚ್ಚರಿಕೆ ನೀಡಲಾಗಿದೆ ಎಂದರು.
ನವೆಂಬರ್ 25, ಬುಧವಾರ ಮತ್ತು 26 ನವೆಂಬರ್, ಗುರುವಾರ, ಕರಾವಳಿ ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್ನಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ, ಇದಕ್ಕಾಗಿ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಎಚ್ಚರಿಕೆ ನೀಡಿದೆ.
Heavy Rain in Uttarakhand: ಭೂಕುಸಿತದಿಂದಾಗಿ, ನೈನಿತಾಲ್ಗೆ ಹೋಗುವ ಮೂರು ರಸ್ತೆಗಳ ಸಂಚಾರವು ಸಂಪೂರ್ಣವಾಗಿ ಸ್ಥಗಿತಗೊಂಡಿದೆ, ಈ ಕಾರಣದಿಂದಾಗಿ ಈ ಪ್ರವಾಸಿ ಸ್ಥಳವು ರಾಜ್ಯದ ಉಳಿದ ಭಾಗಗಳೊಂದಿಗೆ ಸಂಪರ್ಕವನ್ನು ಕಳೆದುಕೊಂಡಿದೆ.
Cyclone Shaheen: ಗುಜರಾತ್ನಲ್ಲಿ 3 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಹವಾಮಾನ ಇಲಾಖೆಯ ಪ್ರಕಾರ, ಗಾಳಿಯು ಗುಜರಾತಿನ ಕರಾವಳಿ ಪ್ರದೇಶಗಳಲ್ಲಿ ಗಂಟೆಗೆ 60-150 ಕಿಮೀ ವೇಗದಲ್ಲಿ ಚಲಿಸಬಹುದು.
Maharashtra Flooding: ಮಹಾರಾಷ್ಟ್ರದಲ್ಲಿ ಉಂಟಾದ ನೆರೆಯ ಪರಿಸ್ಥಿತಿಯ ಕಾರಣ 11 ರೋಗಿಗಳು ಮೃತಪಟ್ಟಿರುವ ಘಟನೆ ವರದಿಯಾಗಿದೆ. ಈ ಎಲ್ಲಾ ರೋಗಿಗಳು ರಾಯಗಡ್ ಜಿಲ್ಲೆಯ ಆಸ್ಪತ್ರೆಯಲ್ಲಿ ದಾಖಲಾಗಿದ್ದರು.
ರಾಜ್ಯದ ಆಗುಂಬೆಯಲ್ಲಿ ಅತಿ ಹೆಚ್ಚು ಮಳೆಯಾಗಿದೆ. ಇಲ್ಲಿ 15 ಸೆಂ.ಮಿ ಮಳೆ ದಾಖಲಾಗಿದೆ. ಕಾರ್ಕಳದಲ್ಲಿ 12 ಸೆಂ.ಮಿ, ಕೊಲ್ಲೂರು ಮತ್ತು ಮಂಕಿಯಲ್ಲಿ ತಲಾ 11 ಸೆ.ಮೀ, ಭಟ್ಕಳ, ಗೋಕರ್ಣ ಮತ್ತು ಮೂಡಬಿದಿರೆಯಲ್ಲಿ ತಲಾ 9 ಸೆಂ.ಮೀ ಮಳೆ ಸುರಿದಿದೆ.
ರಾಜ್ಯದಲ್ಲಿ ಇತ್ತೀಚಿಗೆ ಆರಂಭವಾಗಿ ಕೊಂಚ ಬಿಡುವು ಪಡೆದುಕೊಂಡಿದ್ದ ಮುಂಗಾರು (Mansoon) ರಾಜ್ಯದ ದಕ್ಷಿಣ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಮತ್ತೆ ಅಬ್ಬರಿಸಲಿದ್ದು ಗುಡುಗು-ಮಿಂಚಿನ ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೇ ಎನ್ನಲಾಗಿದೆ.