Karnataka Weather Update: ಕರ್ನಾಟಕದಲ್ಲಿ ವರುಣನ ಆರ್ಭಟ ಮುಂದುವರೆದಿದ್ದು ಮುಂದಿನ ವಾರದವರೆಗೂ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಯಾವ ಭಾಗಗಗಳಲ್ಲಿ ಅಧಿಕ ಮಳೆಯಾಗಲಿದೆ. ಎಲ್ಲೆಲ್ಲಿ ತುಂತುರು, ಸಾಧಾರಣ ಮಳೆಯಾಗಲಿದೆ ಎಂಬ ಮಾಹಿತಿ ಇಲ್ಲಿದೆ.
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮುಂಜಾನೆಯಿಂದಲೇ ಜಿಟಿಜಿಟಿ ಮಳೆ ಅವಾಂತರ ಸೃಷ್ಟಿಸಿದ್ದು ಮಳೆಯಿಂದ ವಾಹನ ಸವಾರರಿಗೆ ಕಿರಿಕಿರಿ ಉಂಟಾಗಿದೆ. ರಾತ್ರಿಯಿಂದ ಸುರಿಯುತ್ತಿರುವ ಜಡಿ ಮಳೆಯಿಂದ ಕಿರಿಕಿರಿ ಉಂಟಾಗುತ್ತಿದೆ. ರಾಜ್ಯದಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ ಇದೆ ಎಂದಿರುವ ಹವಾಮಾನ ಇಲಾಖೆ ರಾಜ್ಯದ 7 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ.
ಶ್ರೀರಂಗಪಟ್ಟಣ ತಾ. ರಾತ್ರಿ ಸುರಿದ ಧಾರಾಕಾರ ಮಳೆ
ಮಳೆಗೆ ದರಸಗುಪ್ಪೆ ಗ್ರಾಮದ ಬಳಿ ಒಡೆದ ಸಿಡಿಎಸ್ ನಾಲೆ ಏರಿ
ನಾಲೆ ಏರಿ ಒಡೆದು ರೈತರ ಜಮೀನಿಗೆ ನುಗ್ಗಿದ ನಾಲೆ ನೀರು
ಏಕಾಏಕಿ ನೀರು ಜಮೀನಿಗೆ ನುಗ್ಗಿದ್ದರಿಂದ ಕೊಚ್ಚಿ ಹೋದ ಬೆಳೆಗಳು
ಕಬ್ಬು, ಭತ್ತ, ರಾಗಿ , ಅಡಿಕೆ ಸೇರಿ ಹಲವು ಬೆಳೆಗಳ ನಾಶ
ಬೆಳೆ ನಷ್ಟದಿಂದ ರೈತರು ಕಂಗಾಲು, ಪರಿಹಾರಕ್ಕೆ ಆಗ್ರಹ
ಸೆ.27ರಿಂದ ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ, ಬಾಗಲಕೋಟೆ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.
Karnataka IMD Alert: ರಾಜ್ಯದಲ್ಲಿ ಮತ್ತೆ ಮಳೆ ಅಬ್ಬರ ಜೋರಾಗಿದ್ದು ಸೆಪ್ಟೆಂಬರ್ 23ರವರೆಗೆ ರಾಜ್ಯದ ವಿವಿಧ ಭಾಗಗಳಲ್ಲಿ ವರುಣಾರ್ಭಟ ಹೆಚ್ಚಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಜೊತೆಗೆ ಬೆಂಗಳೂರು ನಗರ ಸೇರಿದಂತೆ ರಾಜ್ಯದ ಎಂಟು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಅನ್ನು ಕೂಡ ಜಾರಿ ಮಾಡಿದೆ.
ಮಳೆ ಆವಾಂತರಕ್ಕೆ ಬೆಂಗಳೂರಿನಲ್ಲಿ ಇಬ್ಬರು ಬಲಿಯಾಗಿದ್ದಾರೆ. ಯಲಹಂಕ ಪೋಲೀಸ್ ಸ್ಟೇಶನ್ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಕಟ್ಟಡ ನಿರ್ಮಾಣಕ್ಕೆ ಮಣ್ಣು ಅಗೆಯುವ ವೇಳೆ ದುರ್ಘಟನೆ ಸಂಭವಿಸಿದೆ. ಜೆ ಶಿವಾ, ಮಧುಸೂದನ್ ರೆಡ್ಡಿ ಸಾವನ್ನಪ್ಪಿದವರು.
ಬಸವಸಾಗರ ಜಲಾಶಯದಲ್ಲಿ ನೀರಿನ ಮಟ್ಟ ಹೆಚ್ಚಾಗಿದೆ. ನಾರಾಯಣಪುರ ಡ್ಯಾಂ ನಿಂದ ಕೃಷ್ಣಾ ನದಿಗೆ ಅಪಾರ ಪ್ರಮಾಣದ ನೀರು ಬಿಡುಗಡೆ ಮಾಡಲಾಗಿದೆ. ಕೃಷ್ಣಾ ನದಿ ಪಾತ್ರದ ಜನರಿಗೆ ಎಚ್ಚರಿಕೆಯಿಂದ ಇರುವಂತೆ ಜಿಲ್ಲಾಡಳಿತ ಸೂಚನೆ ನೀಡಿದೆ.
ಹಾಸನ ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆ ಅಬ್ಬರ
ಮೂರು ತಾಲೂಕಿನಲ್ಲಿ ಅಂಗನವಾಡಿ-ಶಾಲೆಗಳಿಗೆ ರಜೆ
ಬೇಲೂರು, ಸಕಲೇಶಪುರ, ಅರಕಲಗೂಡಿನಲ್ಲಿ ರಜೆ
ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ
ಮುಂಜಾಗ್ರತಾ ಕ್ರಮವಾಗಿ ಡಿಸಿ ಲತಾಕುಮಾರಿ ಆದೇಶ
ಕಳೆದ ಮೂರು ದಿನಗಳಿಂದ ಹಾಸನದಲ್ಲಿ ಮಳೆ ಆರ್ಭಟ
ಧಾರವಾಡ ಜಿಲ್ಲೆಯಲ್ಲಿ ನಿಲ್ಲುತ್ತಿಲ್ಲ ಅಬ್ಬರ. ದುರಸ್ತಿಯಾದ ಒಂದೇ ತಿಂಗಳಿಗೆ ಕೊಚ್ಚಿ ಹೋದ ಸೇತುವೆ. ಧಾರವಾಡ ಜಿಲ್ಲೆಯ ತಡಹಾಳ ಗ್ರಾಮದ ಬಳಿಯ ಸೇತುವೆ. ನಾಲಗುಂದ ನರಗುಂದ ನಡುವೆ ಇರುವ ಸೇತುವೆ.
ಬಿಹಾರದಲ್ಲಿ ಹಲವು ಕಡೆ ಧಾರಾಕಾರ ಮಳೆಯಾಗುತ್ತಿದೆ. ಪಾಟ್ನಾದಲ್ಲಿ ವಸತಿ ಪ್ರದೇಶಗಳು ಸಂಪೂರ್ಣ ಜಲಾವೃತಗೊಂಡಿದೆ. ಮಳೆಗೆ ವಸತಿ ಪ್ರದೇಶ ಹಾಗೂ ರಸ್ತೆಗಳು ಮುಳುಗಡೆಯಾಗಿದೆ. ದಾನಾಪುರದಲ್ಲಿ ಮುಳುಗಿದ ರಸ್ತೆಗಳಲ್ಲೇ ಜನ ಸಂಚಾರ ಮಾಡುತ್ತಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.