ದಕ್ಷಿಣ ಕನ್ನಡ ಜಿಲ್ಲಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು, ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ವ್ಯಾಪ್ತಿಯಲ್ಲಿ ರಜೆ ಘೋಷಿಸಲಾಗಿದೆ. ಅಂಗನವಾಡಿ, ಪ್ರಾಥಮಿಕ ಶಾಲೆ, ಹೈಸ್ಕೂಲ್ಗಳಿಗೆ ರಜೆ ಘೋಷಣೆ ಮಾಡಿ ದಕ್ಷಿಣ ಕನ್ನಡ DC ರಾಜೇಂದ್ರ ಆದೇಶ ಮಾಡಿದ್ದಾರೆ..
ದಕ್ಷಿಣ ಕನ್ನಡ ಜಿಲ್ಲೆ ಕಲ್ಲುಗುಂಡಿ ಬಳಿಯ ಮಂಗಳೂರು - ಮಡಿಕೇರಿ ರಾಷ್ಟ್ರೀಯ ಹೆದ್ದಾರಿಗೆ ನೀರು ನುಗ್ಗಿದ್ದು ಪರಿಣಾಮ ಕೆಲಕಾಲ ಸಂಚಾರ ಸ್ಥಗಿತಗೊಂಡಿತ್ತು. ಇನ್ನು ಗುಡ್ಡ ಕುಸಿತಗೊಂಡು ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ.
ಕಲಬುರಗಿಯಲ್ಲೂ ಧಾರಾಕಾರ ಮಳೆಯಾಗುತ್ತಿದ್ದು, ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿದೆ. ಆಳಂದ ತಾಲೂಕಿನಲ್ಲಿ ಸುರಿದ ಭಾರಿ ಮಳೆಗೆ ನಿಂಬರಗ- ಸ್ಟೇಷನ್ ಗಾಣಗಾಪುರ ರಸ್ತೆ ಸಂಪರ್ಕ ಕಡಿತಗೊಂಡಿದೆ. ಇನ್ನು ಹಳ್ಳ ದಾಟಲು ಹೋದ ವ್ಯಕ್ತಿಯೋರ್ವ ನೀರಿನ ರಭಸಕ್ಕೆ ಸಿಲುಕಿ ಕೊಚ್ಚಿ ಹೋಗುತ್ತಿದ್ದ. ಆತನನ್ನು ಸ್ಥಳೀಯರು ರಕ್ಷಿಸಿದ್ದಾರೆ.
ಇಂದಿನಿಂದ ರಾಜಧಾನಿ ದೆಹಲಿ ಸೇರಿದಂತೆ ಇಡೀ ಉತ್ತರ ಭಾರತದಲ್ಲಿ ಮಳೆ ಚಟುವಟಿಕೆಗಳು ಹೆಚ್ಚಾಗಲಿವೆ. ದೆಹಲಿಯಲ್ಲಿ ಜುಲೈ 20ರಿಂದ 23ರವರೆಗೆ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. IMD ಎಚ್ಚರಿಕೆಯ ನಂತರ ಉತ್ತರಾಖಂಡದ ಡೆಹ್ರಾಡೂನ್ನಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ರಾಜ್ಯದಲ್ಲಿ ಅಬ್ಬರಿಸಿ ಬೊಬ್ಬಿರಿದ ವರುಣನ ಆರ್ಭಟ ಕೊಂಚ ತಣ್ಣಗಾಗಿದೆ. ಮುಂದಿನ 3 ದಿನಗಳಲ್ಲಿ ಮಳೆ ತಗ್ಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಆದ್ರೆ 20 ದಿನಗಳಿಂದ ಸುರಿದ ಭಾರೀ ಮಳೆಗೆ ನದಿಗಳು ಭೋರ್ಗರೆಯುತ್ತಿದ್ದು ಸಾಕಷ್ಟು ಅವಾಂತರ ಸೃಷ್ಟಿಸಿವೆ... ಸಾವಿರಾರು ಎಕರೆ ಜಮೀನು ನೀರುಪಾಲಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.
ರಾಜ್ಯದಲ್ಲಿ ಕಳೆದೊಂದು ವಾರದಿಂದ ವರುಣ ಅಬ್ಬರಿಸಿ ಬೊಬ್ಬರಿಯುತ್ತಿದ್ದಾನೆ. ಮಳೆಯ ಹೊಡೆತಕ್ಕೆ ಸಿಲುಕಿದ ಕರುನಾಡಿನ ಸೇತುವೆಗಳು ಜಲಾವೃತವಾಗಿದೆ.. ಸಂಚಾರ ಅಸ್ತವ್ಯಸ್ತವಾಗಿದೆ.. ನಿರಂತರ ಮಳೆಯಿಂದ ಜನರು ಹೈರಾಣರಾಗಿದ್ದಾರೆ.
ಮಹಾರಾಷ್ಟ್ರದ ಕೊಲ್ಹಾಪುರ ಜಿಲ್ಲೆಯ ನರಸಿಂಹವಾಡಿ. ಧಾರಾಕಾರ ಮಳೆಯಿಂದಾಗಿ ನರಸಿಂಹವಾಡಿಯ ದತ್ತಮಂದಿರಕ್ಕೆ ಕೃಷ್ಣಾ ನದಿ ನೀರು ಪ್ರವೇಶ ಮಾಡಿದೆ. ನರಸಿಂಹವಾಡಿ ದೂಧಗಂಗಾ ಹಾಗೂ ಕೃಷ್ಣಾ ನದಿಗಳ ಸಂಗಮ ಕ್ಷೇತ್ರ ಇದಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರಾತ್ರಿಯಿಂದ ಧಾರಾಕಾರ ಮಳೆ ಸುರಿಯುತ್ತಿದ್ದು ಜನಜೀವನ ಅಸ್ತವ್ಯಸ್ತವಾಗಿದೆ.. ಕಳೆದ ರಾತ್ರಿಯಿಂದ ಮಳೆ ಬಿರುಸುಗೊಂಡಿರುವ ಕಾರಣ ಜಿಲ್ಲೆಯ ಪದವಿ ಪೂರ್ವ ಮತ್ತು ಪದವಿ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಆದೇಶ ಹೊರಡಿಸಿದ್ದಾರೆ. ರಾಷ್ಟ್ರೀಯ ಹೆದ್ದಾರಿ ಮತ್ತು ಪ್ರಮುಖ ರಸ್ತೆಗಳಲ್ಲೇ ನೀರು ನಿಂತಿದ್ದು, ವಾಹನಗಳ ಸುಗಮ ಸಂಚಾರಕ್ಕೆ ಅಡ್ಡಿಯಾಗುತ್ತಿವೆ. ಭಾರೀ ಮಳೆಯ ಕಾರಣ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.