ದಕ್ಷಿಣ ಗುಜರಾತ್ ಮತ್ತು ಕೇರಳ ರಾಜ್ಯಗಳ ಕರಾವಳಿ ಸಮುದ್ರಗಳಲ್ಲಿ ಸರಾಸರಿ ಸಮುದ್ರಮಟ್ಟದಲ್ಲಿ ಉಂಟಾದ ಮೇಲುಬ್ಬರದ ಪರಿಣಾಮ ರಾಜ್ಯದ ಕರಾವಳಿ ಮತ್ತು ಪಶ್ಚಿಮಘಟ್ಟ ಪ್ರದೇಶಗಳಲ್ಲಿ ಇಂದು ಮತ್ತು ನಾಳೆ ವ್ಯಾಪಕವಾಗಿ ಹಗುರದಿಂದ ಸಾಧಾರಣ ಮಳೆಯಾಗಲಿದ್ದು, ಅಲ್ಲಲ್ಲಿ ಅತಿಭಾರಿ ಮಳೆ ಮಳೆಯಾಗುವ ಸಾಧ್ಯತೆಯಿದೆ. IMD ಯಿಂದ ಆರೆಂಜ್ಅಲರ್ಟ್ ನೀಡಲಾಗಿದೆ, ಇನ್ನುಳಿದ ದಿನಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ.
ತುರ್ತು ಸಂದರ್ಭದಲ್ಲಿ ಸಹಾಯಕ್ಕಾಗಿ ಸಹಾಯವಾಣಿ ಸ್ಥಾಪನೆ; ಜಿಲ್ಲಾಧಿಕಾರಿಗಳ ಕಚೇರಿ 08192-234034, 1077, ಎಸ್ಡಿಆರ್ಎಫ್ ಘಟಕ, ದೇವರಬೆಳೆಕೆರೆ 7411308591, ದಾವಣಗೆರೆ ಅಗ್ನಿಶಾಮಕ ಇಲಾಖೆ 08192-258101, 112, ದಾವಣಗೆರೆ ಮಹಾನಗರ ಪಾಲಿಕೆ 08192-234444, 8277234444, ದಾವಣಗೆರೆ ತಾ; ಕಚೇರಿ 9036396101, ಹರಿಹರ 08192-272959, ಜಗಳೂರು 08196-227242, ಹೊನ್ನಾಳಿ 08188-252108, ನ್ಯಾಮತಿ 8073951245, ಚನ್ನಗಿರಿ 7892481962 ದೂರವಾಣಿ, ಮೊಬೈಲ್ ಸಂಖ್ಯೆಗೆ ಕರೆ ಮಾಡಲು ಕೋರಲಾಗಿದೆ.
ಆಗಸ್ಟ್ 1 ರಂದು ಕರಾವಳಿ ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಿಗೆ ಅತಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. IMD ಯಿಂದ ಆರೆಂಜ್ಅಲರ್ಟ್ ನೀಡಲಾಗಿದೆ ಇನ್ನುಳಿದ ದಿನಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ.
ಜ್ವರವು ದೇಹದ ನೈಸರ್ಗಿಕ ಮಾರ್ಗವಾಗಿದೆ, ಅದರ ಮೂಲಕ ಸೋಂಕಿನ ವಿರುದ್ಧ ಹೋರಾಡುತ್ತದೆ.ಆದರೆ ಇದು ದೀರ್ಘಕಾಲದವರೆಗೆ ಇದ್ದರೆ ಸೋಂಕು ಗಂಭೀರವಾಗುತ್ತಿದೆ ಅಥವಾ ದೇಹದಲ್ಲಿ ಬೇರೆ ಯಾವುದಾದರೂ ಸಮಸ್ಯೆ ಇದೆ ಎಂದು ಅರ್ಥೈಸಬಹುದು. ಕೆಲವು ಸಂದರ್ಭಗಳಲ್ಲಿ, ದೀರ್ಘಕಾಲದ ಜ್ವರವು ದೇಹದ ಅಂಗಗಳಿಗೆ ಹಾನಿಯನ್ನುಂಟುಮಾಡುತ್ತದೆ.
ರಾಜ್ಯದ ಕರಾವಳಿ ಮತ್ತು ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಂತ ಮಲೆನಾಡು ಜಿಲ್ಲೆಗಳಲ್ಲಿ ಆರ್ದ್ರ ಹವಾಮಾನವು ಮುಂದುವರೆಯುವ ಸಾದ್ಯತೆಯಿದ್ದು, ಜುಲೈ 27ರವರೆಗೆ ವ್ಯಾಪಕವಾಗಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಭಾರಿ ಮತ್ತು ಅತಿ ಭಾರಿ ಮಳೆ, ನಂತರ ಮಳೆ ತೀವ್ರತೆ ಕಡಿಮೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ರಾಜ್ಯದ ಕರಾವಳಿ ಇಂದು ಜೋರಾದ ಗಾಳಿಯೊಂದಿಗೆ ಅತಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. IMD ಯಿಂದ ಆರೆಂಜ್ಅಲರ್ಟ್ ನೀಡಲಾಗಿದೆ ನಂತರ ಮಳೆ ತೀವ್ರತೆ ಕಡಿಮೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ರಸ್ತೆ ದುರಸ್ಥಿ, ಶಾಲೆ, ಅಂಗನವಾಡಿಗಳ ದುರಸ್ಥಿಗಾಗಿ ಪ್ರಕೃತಿ ವಿಕೋಪ ನಿಧಿಯಡಿ ಅನುದಾನವನ್ನು ಜಿಲ್ಲಾಧಿಕಾರಿಗಳಿಗೆ ಬಿಡುಗಡೆ ಮಾಡಲಾಗುತ್ತಿದ್ದು ಎಲ್ಲೆಲ್ಲಿ ರಸ್ತೆ ಗುಂಡಿ ಬಿದ್ದಿವೆ, ಅಂತಹ ಕಡೆ ಒಂದು ಅಡಿ ಆಳ ತೆಗೆದು ಅದಕ್ಕೆ ಜಲ್ಲಿಕಲ್ಲುಗಳು ಮತ್ತು ಸಿಮೆಂಟ್ ವೆಟ್ ಮಿಕ್ಸಿಂಗ್ ಹಾಕಿ ತಾತ್ಕಾಲಿಕವಾಗಿ ಸರಿಪಡಿಸಬೇಕು. ಶಾಲಾ, ಅಂಗನವಾಡಿಗಳಿದ್ದಲ್ಲಿ ಸೋರದಂತೆ ಹೊದಿಕೆ ಹಾಕಲು ಕ್ರಮ ವಹಿಸಲು ಸೂಚಿಸಿ ತುರ್ತು ಕಾಮಗಾರಿಗಳನ್ನು ಕೈಗೊಂಡು ಮುಂದಿನ 15 ದಿನಗಳಲ್ಲಿ ಬಿಲ್ ಪಾವತಿಸಲು ಸೂಚನೆ ನೀಡಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.