ಹವಾಮಾನ ಅಪ್ಡೇಟ್: ಕಳೆದ ಒಂದು ವಾರದಿಂದ ದೆಹಲಿ-ಎನ್ಸಿಆರ್ ಸೇರಿದಂತೆ ಉತ್ತರ ಭಾರತದಲ್ಲಿ ವರುಣನ ಅಬ್ಬರ ಜೋರಾಗಿದೆ. ಇಂದು ಕರ್ನಾಟಕದ ಹಲವು ಭಾಗಗಳಲ್ಲಿ ಯೆಲ್ಲೋ ಅಲರ್ಟ್ ನೀಡಿರುವ ಹವಾಮಾನ ಇಲಾಖೆ ದೇಶದ ವಿವಿಧ ಭಾಗಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ.
ರಾಯಚೂರು ಜಿಲ್ಲೆಯಲ್ಲಿ ವರುಣಾರ್ಭಟ ಮುಂದುವರೆದಿದೆ. ಮಸ್ಕಿಯ ಬೆಳ್ಳಿಗನೂರ ಗ್ರಾಮದಲ್ಲಿ ಜಲಾಸುರನ ಅಟ್ಟಹಾಸಕ್ಕೆ ಮನೆ ಕುಸಿತವಾಗಿದ್ದು ಬೆಳೆ ನಾಶವಾಗಿದೆ. ನಾಲ್ಕು ಮನೆಗಳು ಕುಸಿತವಾಗಿದ್ದು, ಒಂದು ಆಟೋ ಜಖಂಗೊಂಡಿದೆ.
ರಾಮನಗರ ಜಿಲ್ಲೆಯಲ್ಲಿ ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಮೈಸೂರು-ಬೆಂಗಳೂರು ಹೆದ್ದಾರಿ ಸಂಚಾರ ಡೈವರ್ಟ್ ಮಾಡಲಾಗಿದೆ. ಟ್ರಾಫಿಕ್ ಪೊಲೀಸ್ ಮದ್ದೂರಿನಲ್ಲಿ ಮಾರ್ಗ ಬದಲಿಸಿದ್ದಾರೆ. ಕುಣಿಗಲ್ ಮಾರ್ಗವಾಗಿ ಬೆಂಗಳೂರಿಗೆ ಪ್ರಯಾಣಕ್ಕೆ ಅವಕಾಶ ನೀಡಲಾಗಿದೆ.
ಬೆಂಗಳೂರಲ್ಲಿ ಜಿಟಿಜಿಟಿ ಮಳೆಯಾಗುತ್ತಿದೆ. ಮೆಜೆಸ್ಟಿಕ್, ಬನಶಂಕರಿ, ಎಮ್ಜಿ ರಸ್ತೆ ಸೇರಿದಂತೆ ಹಲವೆಡೆ ಮಳೆಯಾಗಿದೆ. ಇನ್ನೂ ಎರಡು ದಿನ ಬೆಂಗಳೂರಲ್ಲಿ ಮಳೆ ಮುನ್ಸೂಚನೆ. ಮೋಡ ಕವಿದ ವಾತಾವರಣ ಹಾಗೂ ಸಾಧಾರಣ ಮಳೆಯಾಗುವ ಮುನ್ಸೂಚನೆಯನ್ನು ಬೆಂಗಳೂರು ಹವಾಮಾನ ಇಲಾಖೆ ವಿಜ್ಞಾನಿ ನೀಡಿದೆ. ಇನ್ನು ರಾಜ್ಯದಲ್ಲಿ ಮುಂದಿನ 5 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ.
ಹವಾಮಾನ ಮುನ್ಸೂಚನೆ: ರಾಜ್ಯದ ಹಲವೆಡೆ ಇಂದು ಭಾರೀ ಮಳೆಯಾಗುವ ನಿರೀಕ್ಷೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಇದೇ ವೇಳೆ ಐಎಂಡಿ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ ಮತ್ತು ಕೋಲಾರ ಜಿಲ್ಲೆಗಳಿಗೆ ಹಳದಿ ಅಲರ್ಟ್ ಘೋಷಿಸಿದೆ.
ರಾಜ್ಯದಲ್ಲಿ ಅಬ್ಬರಿಸಿ ಬೊಬ್ಬಿರಿದ ವರುಣನ ಆರ್ಭಟ ಕೊಂಚ ತಣ್ಣಗಾಗಿದೆ. ಮುಂದಿನ 3 ದಿನಗಳಲ್ಲಿ ಮಳೆ ತಗ್ಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಆದ್ರೆ 20 ದಿನಗಳಿಂದ ಸುರಿದ ಭಾರೀ ಮಳೆಗೆ ನದಿಗಳು ಭೋರ್ಗರೆಯುತ್ತಿದ್ದು ಸಾಕಷ್ಟು ಅವಾಂತರ ಸೃಷ್ಟಿಸಿವೆ... ಸಾವಿರಾರು ಎಕರೆ ಜಮೀನು ನೀರುಪಾಲಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.
ದಕ್ಷಿಣ ಕನ್ನಡದಲ್ಲಿ ನಿರಂತರವಾಗಿ ಮಳೆಯಾಗ್ತಿದ್ದು ಬಂಟ್ಟಾಳದ ಹಳೆಯಂಗಡಿ ಬಳಿ ಭಾರಿ ಪ್ರಮಾಣದ ಗುಡ್ಡ ಕುಸಿತವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 73ರಲ್ಲಿ ಗುಡ್ಡ ಕುಸಿದಿದ್ದು, ಧರ್ಮಸ್ಥಳ ಬೆಳ್ತಂಗಡಿ ಮಂಗಳೂರು ಸಂಪರ್ಕ ತಾತ್ಕಾಲಿಕ ಸ್ಥಗಿತವಾಗಿದೆ.
ಮಹಾರಾಷ್ಟ್ರದ ಕೊಲ್ಹಾಪುರ ಜಿಲ್ಲೆಯ ನರಸಿಂಹವಾಡಿ. ಧಾರಾಕಾರ ಮಳೆಯಿಂದಾಗಿ ನರಸಿಂಹವಾಡಿಯ ದತ್ತಮಂದಿರಕ್ಕೆ ಕೃಷ್ಣಾ ನದಿ ನೀರು ಪ್ರವೇಶ ಮಾಡಿದೆ. ನರಸಿಂಹವಾಡಿ ದೂಧಗಂಗಾ ಹಾಗೂ ಕೃಷ್ಣಾ ನದಿಗಳ ಸಂಗಮ ಕ್ಷೇತ್ರ ಇದಾಗಿದೆ.
ಶಿವಮೊಗ್ಗದಲ್ಲಿ ಮಳೆ ಮುಂದುವರಿದಿದೆ. ನಿನ್ನೆ ರಾತ್ರಿಯಿಂದಲೂ ಬಿಟ್ಟು ಬಿಡದೆ ಮಳೆ ಸುರಿಯುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಮಳೆ ಹಿನ್ನೆಲೆಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಸದ್ಯ ತೀರ್ಥಹಳ್ಳಿ, ಸಾಗರ ಮತ್ತು ಹೊಸನಗರ ತಾಲೂಕಿನಲ್ಲಿ ಈಗಾಗಲೇ ರಜೆ ಘೋಷಿಸಲಾಗಿದ್ದು, ಇವತ್ತು ಕೂಡ ರಜೆ ಮುಂದುವರಿಯಲಿದೆ. ಇವತ್ತು ಶಿವಮೊಗ್ಗ, ಸೊರಬ, ಶಿಕಾರಿಪುರ ಮತ್ತು ಭದ್ರಾವತಿಯಲ್ಲಿ ರಜೆ ಘೋಷಿಸಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.