Rajasthan Politics: ನಮ್ಮ ಬಾಗಿಲು ಸಂಪೂರ್ಣವಾಗಿ ತೆರೆದಿದೆ'' ಎಂದು ರಾಜಸ್ಥಾನದ ಬಿಜೆಪಿ ಶಾಸಕರೊಬ್ಬರು ಹೇಳಿದ್ದಾರೆ. ಕಾಂಗ್ರೆಸ್ ಸರ್ಕಾರ ಬಿದ್ದು ಬಿಜೆಪಿಗೆ ಆ ಸರ್ಕಾರ ಬೀಳಿಸಲು ಯಾರಾದರೂ ಸಹಾಯ ಮಾಡಿದರೆ ಅಂತಹ ವ್ಯಕ್ತಿಗೆ ನಾವು ಸಹಕಾರ ನೀಡುತ್ತೇವೆ. ಕಾಂಗ್ರೆಸ್ ನ ಈ ನಾಟಕದಲ್ಲಿ ಬಿಜೆಪಿ ಪಾತ್ರವಿಲ್ಲ. ಇದು ಅವರ ಆಂತರಿಕ ವಿಚಾರ' ಅವರು ಹೇಳಿದ್ದಾರೆ.
ಶನಿವಾರದಂದು ಹಿರಿಯ ಕಾಂಗ್ರೆಸ್ ನಾಯಕ ಅಶೋಕ್ ಗೆಹ್ಲೋಟ್ ಅವರು ತಮ್ಮ ರಾಜ್ಯದಲ್ಲಿನ ರಾಜಕೀಯ ಬಿಕ್ಕಟ್ಟಿನ ನೈತಿಕ ಹೊಣೆಗಾರಿಕೆಯನ್ನು ವಹಿಸಿಕೊಂಡ ಕೆಲವು ದಿನಗಳ ನಂತರ ರಾಜಸ್ಥಾನದ ಮುಖ್ಯಮಂತ್ರಿಯಾಗಿ ಮುಂದುವರಿಯುವುದಾಗಿ ಸುಳಿವು ನೀಡಿದ್ದಾರೆ.
Ashok Gehlot: ಕಾಂಗ್ರೆಸ್ ಅಧ್ಯಕ್ಷರ ಚುನಾವಣೆಯ ಜೊತೆಗೆ ಇತ್ತೀಚಿನ ದಿನಗಳಲ್ಲಿ ರಾಜಸ್ಥಾನದ ಕಾಂಗ್ರೆಸ್ ಪಾಳೆಯದಲ್ಲಿ ಭಾರಿ ಬಿರುಗಾಳಿಯೇ ಎದ್ದಿದೆ. ಏತನ್ಮಧ್ಯೆ ರಾಜಸ್ಥಾನದ ಮುಖ್ಯಮಂತ್ರಿ ಸೋನಿಯಾ ಗಾಂಧಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಈ ಭೇಟಿಯ ಬಳಿಕ ಅವರ ಕೈಯಲ್ಲಿ ಪತ್ರವೊಂದು ಕಂಡುಬಂದಿದ್ದು, ಪತ್ರದಲ್ಲಿ ಪೈಲಟ್ ಬಣದ ವಿರುದ್ಧ ದೂರುಗಳಿದ್ದವು ಎನ್ನಲಾಗಿದೆ.
Rajasthan Political Crisis: ರಾಜಸ್ಥಾನದಲ್ಲಿ ರಾಜಕೀಯ ಬಿಕ್ಕಟ್ಟಿನ ನಡುವೆ ದೆಹಲಿ ದರ್ಬಾರ್ನಲ್ಲಿ ರಾಜ್ಯದ ಪ್ರಮುಖ ನಾಯಕರ ಹಾಜರಾತಿ ಮುಂದುವರೆದಿದೆ. ಈ ಹಿನ್ನೆಲೆ ಇಂದು ಸಚಿನ್ ಪೈಲಟ್ ಸೋನಿಯಾ ಗಾಂಧಿ ಅವರನ್ನು ಭೇಟಿಯಾಗಲು ನಿರ್ಧರಿಸಿದ್ದಾರೆ. ಸಂಜೆ 7 ರಿಂದ 8 ರ ನಡುವೆ ಈ ಭೇಟಿ ನಡೆಯಲಿದೆ.
Rajashtana Political Crisis: ರಾಜಸ್ಥಾನ್ ಕಾಂಗ್ರೆಸ್ ಉಸ್ತುವಾರಿ ಅಜಯ್ ಮಾಕನ್ ಹಾಗೂ ಪರಿವೀಕ್ಷಕ ಮಲ್ಲಿಕಾರ್ಜುನ್ ಖರ್ಗೆ ಅವರು ತಮ್ಮ ವರದಿಯನ್ನು ಪಕ್ಷದ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಸಲ್ಲಿಸಿದ್ದು, ಅಶೋಕ್ ಗೆಹ್ಲೋಟ್ ಅವರ ಮೂವರು ನಿಷ್ಠಾವಂತರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಹೇಳಿದ್ದಾರೆ.
Rajasthan Political Crisis: ರಾಜಸ್ಥಾನದ ರಾಜಕೀಯ ಬೆಳವಣಿಗೆಗಳ ಕುರಿತು ಲಿಖಿತ ವರದಿ ಸಲ್ಲಿಸುವಂತೆ ಉಸ್ತುವಾರಿ ಅಜಯ್ ಮಾಕನ್ ಹಾಗೂ ಪರಿವೀಕ್ಷಕ ಮಲ್ಲಿಕಾರ್ಜುನ್ ಖರ್ಗೆ ಅವರಿಗೆ ಪಕ್ಷದ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಸೂಚಿಸಿದ್ದರು.
Rajasthan Politics: ರಾಜಸ್ಥಾನದಲ್ಲಿ ಕಾಂಗ್ರೆಸ್ ಪಕ್ಷದ ಬಿಕ್ಕಟ್ಟು ಮತ್ತು ಸಿಎಂ ಅಶೋಕ್ ಗೆಹ್ಲೋಟ್, ಸ್ಪೀಕರ್ ಸಿ.ಪಿ. ಜೋಷಿ ಅವರ 92 ಶಾಸಕರ ರಾಜೀನಾಮೆ ಕುರಿತಾದ ಮೌನ ಇದೀಗ ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ.
Congress News: ರಾಜಸ್ಥಾನದಲ್ಲಿ ಗೆಹಲೋಟ್ ಬೆಂಬಲಿಗ ಶಾಸಕರ ಬಂಡಾಯದ ಬಳಿಕ, ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ರೆಸ್ ನಿಂದ ಅಶೋಕ್ ಗೆಹಲೋಟ್ ಅವರ ಹೆಸರನ್ನು ಹೊರಗಿಡಲಾಗಿದೆ ಎನ್ನಲಾಗುತ್ತಿದೆ.
ಕಾಂಗ್ರೆಸ್ ಪಕ್ಷದಲ್ಲಿ ಈಗ ಒಬ್ಬ ವ್ಯಕ್ತಿ, ಒಂದು ಹುದ್ದೆ ನಿಯಮ ಈಗ ನಿಜಕ್ಕೂ ಕಗ್ಗಂಟಾಗಿ ಪರಿಣಮಿಸಿದೆ.ಅದರಲ್ಲೂ ರಾಜಸ್ತಾನದ ವಿಚಾರದಲ್ಲಿ ಇದು ನಿಜಕ್ಕೂ ತಲೆನೋವಾಗಿ ಪರಿಣಮಿಸಿದೆ ಎಂದು ಹೇಳಬಹುದು.
ಗುರುವಾರ ಶಾಸಕಾಂಗ ಪಕ್ಷದ ಸಭೆ ನಡೆಸಿದ ಬಿಜೆಪಿ ಅವಿಶ್ವಾಸ ನಿರ್ಣಯ ಮಂಡಿಸಲು ಈ ನಿರ್ಧಾರ ಮಾಡಿದೆ. ಸಭೆಯ ಬಳಿಕ ವಿಪಕ್ಷ ನಾಯಕ ಗುಲಾಬ್ ಚಂದ್ ಕಟಾರಿಯಾ ನಿರ್ಧಾರವನ್ನು ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಕಾಂಗ್ರೆಸ್ ನೇತೃತ್ವದ ರಾಜಸ್ಥಾನ್ ಸರ್ಕಾರವನ್ನು ಉರುಳಿಸಲು ಬಿಜೆಪಿಯ ಆಪಾದಿತ ಪ್ರಯತ್ನಗಳನ್ನು ಪ್ರಧಾನಿ ನರೇಂದ್ರ ಮೋದಿ ಕೊನೆಗಾಣಿಸಬೇಕು ಎಂದು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಜೈಸಲ್ಮೇರ್ನಲ್ಲಿ ಹೇಳಿದ್ದಾರೆ.
ಆಗಸ್ಟ್ 14 ರಿಂದ ವಿಧಾನಸಭೆ ಸಭೆ ನಡೆಸಲು ರಾಜಸ್ಥಾನ ರಾಜ್ಯಪಾಲ ಕಲ್ರಾಜ್ ಮಿಶ್ರಾ ಬುಧವಾರ (ಜುಲೈ 29) ಆದೇಶ ಹೊರಡಿಸಿದ್ದು, ಆ ಮೂಲಕ ರಾಜ್ ಭವನ ಮತ್ತು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ನಡುವೆ ನಡೆಯುತ್ತಿರುವ ಜಗಳಕ್ಕೆ ಅಂತ್ಯ ಹಾಡಿದ್ದಾರೆ.
ರಾಜಸ್ಥಾನದ ಒಟ್ಟು 19 ಶಾಸಕರನ್ನು ಅನರ್ಹಗೊಳಿಸುವ ಕುರಿತು ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದ ವಿಧಾನಸಭೆಯ ಸ್ಪೀಕರ್ ಸಿ.ಪಿ ಜೋಷಿ ಅವರು ತಮ್ಮ ಅರ್ಜಿಯನ್ನು ವಾಪಸ್ ಪಡೆದಿದ್ದಾರೆ.
ಸಚಿನ್ ಪೈಲಟ್ ನೇತೃತ್ವದ 19 ಕಾಂಗ್ರೆಸ್ ಶಾಸಕರ ವಿರುದ್ಧ ಸೋಮವಾರ ಬೆಳಿಗ್ಗೆ 11 ಗಂಟೆಗೆ ಅನರ್ಹತೆ ವಿಚಾರಣೆಯನ್ನು ತಡೆಹಿಡಿದಿರುವ ಹೈಕೋರ್ಟ್ ಆದೇಶದ ವಿರುದ್ಧ ರಾಜಸ್ಥಾನ ಸ್ಪೀಕರ್ ಸಿಪಿ ಜೋಶಿ ಅವರ ಮನವಿಯನ್ನು ಸುಪ್ರೀಂಕೋರ್ಟ್ನ ಮೂವರು ನ್ಯಾಯಾಧೀಶರು ವಿಚಾರಣೆ ನಡೆಸಲಿದ್ದಾರೆ ಎಂದು ಶನಿವಾರ ಸಂಜೆ ಬಿಡುಗಡೆಯಾದ ಸುಪ್ರೀಂಕೋರ್ಟ್ ಪ್ರಕರಣಗಳ ಪಟ್ಟಿಯಲ್ಲಿ ತಿಳಿಸಲಾಗಿದೆ.
ರಾಜಸ್ಥಾನದಲ್ಲಿನ ರಾಜಕೀಯ ಗುದ್ದಾಟದ ಕುರಿತು ಹೈಕೋರ್ಟ್ ಇಂದು ತನ್ನ ತೀರ್ಪು ನೀಡಿದ . ಈ ಕುರಿತಾದ ಅರ್ಜಿ ವಿಚಾರಣೆ ನಡೆಸಿರುವ ನ್ಯಾಯಪೀಠ ಸಚಿನ್ ಪೈಲಟ್ ಬಣಕ್ಕೆ ಒಂದು ರೀತಿಯ ನೆಮ್ಮದಿಯ ಸುದ್ದಿಯೊಂದನ್ನೇ ನೀಡಿದ್ದು, ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ನಿರ್ದೇಶನ ನೀಡಿದೆ. ಅಂದರೆ, ಸ್ಪೀಕರ್ ಪೈಲಟ್ ಬಣದ ವಿರುದ್ಧ ಯಾವುದೇ ಕ್ರಮಕೈಗೊಳ್ಳುವಂತಿಲ್ಲ. ಈ ಕುರಿತಾದ ಮುಂದಿನ ವಿಚಾರಣೆ ಸೋಮವಾರ ಸುಪ್ರೀಂ ಕೋರ್ಟ್ ನಲ್ಲಿ ನಡೆಯಲಿದೆ.
ಮಂಗಳವಾರ ಕಾಂಗ್ರೆಸ್ ರಾಜ್ಯ ಘಟಕದ ಅಧ್ಯಕ್ಷ ಪದವಿಯಿಂದ ತೆಗೆದುಹಾಕಲ್ಪಟ್ಟ ರಾಜಸ್ಥಾನದ ಮಾಜಿ ಉಪಮುಖ್ಯಮಂತ್ರಿ ಸಚಿನ್ ಪೈಲಟ್ ಅವರು ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ) ಸೇರುವುದಿಲ್ಲ ಎಂದು ಹೇಳಿದರು.
ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ನೇತೃತ್ವದ ಸರ್ಕಾರದಲ್ಲಿ ಕೋಲಾಹಲದ ವರದಿಗಳ ಮಧ್ಯೆ, ಉಪಮುಖ್ಯಮಂತ್ರಿ ಸಚಿನ್ ಪೈಲಟ್ ಸೋಮವಾರ ನಡೆಯಲಿರುವ ರಾಜಸ್ಥಾನ ಶಾಸಕಾಂಗ ಪಕ್ಷದ ಸಭೆ ಗೈರು ಹಾಜರಾಗಲಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.