One Nation One Election: 'ಒಂದು ದೇಶ, ಒಂದು ಚುನಾವಣೆ' ಪ್ರಸ್ತಾವನೆಗೆ ಪ್ರಧಾನಿ ಮೋದಿಯವರ ಸಚಿವ ಸಂಪುಟ ಅನುಮೋದನೆ ನೀಡಿದೆ. ಲೋಕಸಭೆ ಮತ್ತು ಎಲ್ಲಾ ರಾಜ್ಯಗಳ ವಿಧಾನಸಭಾ ಚುನಾವಣೆಯನ್ನು ಒಂದೇ ಬಾರಿ ನಡೆಸುವ ಮಹತ್ವದ ಯೋಜನೆ ಇದಾಗಿದೆ.
One Nation One Election: ಲೋಕಸಭೆ ಚುನಾವಣೆ ಘೋಷಣೆಗೂ ಮುನ್ನವೇ ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ನೇತೃತ್ವದ ಸಮಿತಿಯು ಮಾರ್ಚ್ನಲ್ಲಿ ವರದಿ ಸಲ್ಲಿಸಿತ್ತು. ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ 'ಒಂದು ರಾಷ್ಟ್ರ ಒಂದು ಚುನಾವಣೆ'ಗೆ ಸಂಬಂಧಿಸಿದ ಮಸೂದೆಯನ್ನು ಮಂಡಿಸುವ ನಿರೀಕ್ಷೆಯಿದೆ ಎಂದು ವರದಿಯಾಗಿದೆ.
ನಿವೃತ್ತಿಯ ನಂತರ, ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರು ರಾಷ್ಟ್ರ ರಾಜಧಾನಿ ದೆಹಲಿಯ 12 ಜನಪಥ್ನಲ್ಲಿರುವ ನಿವಾಸದಲ್ಲಿ ವಾಸಿಸಲಿದ್ದಾರೆ, ಇದು ಲುಟ್ಯೆನ್ಸ್ ದೆಹಲಿಯ ಅತಿದೊಡ್ಡ ಬಂಗಲೆಗಳಲ್ಲಿ ಒಂದಾಗಿದೆ. ಆದರೆ, ಅವರ ಹೆಸರಿಗೆ ಇನ್ನೂ ಹಂಚಿಕೆಯಾಗಿಲ್ಲ.
ಸಂವಿಧಾನದ 62 ನೇ ವಿಧಿಯ ಪ್ರಕಾರ, ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರ ಅಧಿಕಾರಾವಧಿ ಜುಲೈ 24 ರಂದು ಕೊನೆಗೊಳ್ಳಲಿದೆ ಮತ್ತು ಮುಂದಿನ ರಾಷ್ಟ್ರಪತಿಯನ್ನು ಆಯ್ಕೆ ಮಾಡುವ ಚುನಾವಣೆಯನ್ನು ಅದಕ್ಕೂ ಮೊದಲು ಪೂರ್ಣಗೊಳಿಸಬೇಕು ಎಂಬುದು ಈ ವಿಧಿಯ ನಿಯಮವಾಗಿದೆ.
ಆಯುರ್ವೇದ ಮತ್ತು ಯೋಗವನ್ನು ನಿರ್ದಿಷ್ಟ ಧರ್ಮ ಅಥವಾ ಸಮುದಾಯದೊಂದಿಗೆ ಸಂಯೋಜಿಸುವುದು ದುರದೃಷ್ಟಕರ ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಶನಿವಾರ ಹೇಳಿದ್ದಾರೆ. ರಾಷ್ಟ್ರಪತಿ ಕೋವಿಂದ್ ಅವರು `ಆರೋಗ್ಯ ಭಾರತಿ~ ಆಯೋಜಿಸಿದ್ದ `ಒಂದು ರಾಷ್ಟ್ರ ಒಂದು ಆರೋಗ್ಯ ವ್ಯವಸ್ಥೆ~ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
Budget session: ಸಂಸತ್ತಿನ ಬಜೆಟ್ ಅಧಿವೇಶನವು ಸೋಮವಾರ ಪ್ರಾರಂಭವಾಗಲಿದ್ದು, ಏಪ್ರಿಲ್ 8 ರಂದು ಮುಕ್ತಾಯಗೊಳ್ಳಲಿದ್ದು, ಅಧಿವೇಶನದ ಮೊದಲ ಭಾಗವು ಫೆಬ್ರವರಿ 11 ರವರೆಗೆ ವಿಸ್ತರಿಸಲಿದೆ.
ಜೂನ್ 28 ರಂದು ರಾಷ್ಟ್ರಪತಿಗಳು ಲಕ್ನೋವನ್ನು ತಲುಪಲಿದ್ದು, ಜೂನ್ 29 ರಂದು ಬಿ.ಆರ್.ಅಂಬೇಡ್ಕರ್ ಸ್ಮಾರಕಕ್ಕೆ ಅಡಿಪಾಯ ಹಾಕುವ ನಿರೀಕ್ಷೆಯಿದೆ. ಯೋಗಿ ಆದಿತ್ಯನಾಥ್ ನೇತೃತ್ವದ ಯುಪಿ ಕ್ಯಾಬಿನೆಟ್ ಸ್ಮಾರಕಕ್ಕಾಗಿ ಭೂಮಿಯನ್ನು ಶುಕ್ರವಾರ ಲಕ್ನೋದ ಲೋಕ ಭವನ ಸಭಾಂಗಣದಲ್ಲಿ ಅನುಮೋದಿಸಿದೆ.
Ram Mandira Trust - ಅಯೋಧ್ಯೆಯಲ್ಲಿ ಭವ್ಯ ರಾಮ ಮಂದಿರ ನಿರ್ಮಾಣಕ್ಕಾಗಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರು 5,00,100 ರೂ.ಗಳ ಕೊಡುಗೆಯನ್ನು ದೇವಸ್ಥಾನದ ಟ್ರಸ್ಟ್ಗೆ ಹಸ್ತಾಂತರಿಸಿದ್ದಾರೆ. ರಾಷ್ಟ್ರಪತಿಗಳು ತಮ್ಮ ಈ ಕೊಡುಗೆಯನ್ನು ಚೆಸ್ ಮೂಲಕ ಟ್ರಸ್ಟ್ಗೆ ಹಸ್ತಾಂತರಿಸಿದ್ದಾರೆ.
'ಸಬ್ಕಾ ಸಾಥ್, ಸಬ್ಕಾ ವಿಕಾಸ್, ಸಬ್ಕಾ ವಿಶ್ವಾಸ್' ಎಂಬ ಮಂತ್ರವನ್ನು ಅನುಸರಿಸಿ ಸರ್ಕಾರ ಸಂಪೂರ್ಣ ನಿಷ್ಠೆ ಮತ್ತು ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸುತ್ತಿದೆ 'ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹೇಳಿದರು.
ಲೈಂಗಿಕ ಅಪರಾಧಗಳಿಂದ ಮಕ್ಕಳಿಗೆ ರಕ್ಷಣೆ ನೀಡುವ (ಪೋಕ್ಸೋ) ಕಾಯ್ದೆಯಡಿ ಆತ್ಯಾಚಾರದ ಶಿಕ್ಷೆಗೆ ಗುರಿಯಾದ ಆರೋಪಿಗಳಿಗೆ ಕ್ಷಮಾದಾನ ಅರ್ಜಿ ಸಲ್ಲಿಸುವ ಹಕ್ಕು ಇರಬಾರದು ಎಂದು ರಾಷ್ಟ್ರಪತಿ ರಾಮನಾಥ್ ಕೊವಿಂದ್ ಅವರು ಹೇಳಿದ್ದಾರೆ. ರಾಜಸ್ಥಾನದ ಸಿರೋಹಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.