ಗೋಕುಲಾಷ್ಟಮಿಗೂ ಇಮಾಮ್ ಸಾಬೀಗೂ ಏನು ಸಂಬಂಧ ಎಂದು ಕೇಳುವಂತೆ ಸಾಮಾಜಿಕ ನ್ಯಾಯ, ಮೀಸಲಾತಿಗೂ ಬಿಜೆಪಿಗೂ ಏನು ಸಂಬಂಧ ಎಂದು ಕೆಪಿಸಿಸಿ ಉಪಾಧ್ಯಕ್ಷರಾದ ವಿ.ಎಸ್. ಉಗ್ರಪ್ಪ ಅವರು ಪ್ರಶ್ನಿಸಿದ್ದಾರೆ.
ಮೀಸಲಾತಿ ಕುರಿತು ಹೇಳಿಕೆ ನೀಡುವ ಮೂಲಕ ವಿಪಕ್ಷ ನಾಯಕ ರಾಹುಲ್ ಗಾಂಧಿ ಮತ್ತೊಮ್ಮೆ ಅಮೆರಿಕದಲ್ಲಿ ಹೊಸ ವಿವಾದ ಸೃಷ್ಟಿಸಿದ್ದಾರೆ. ಬಿಜೆಪಿ ನಾಯಕರು ಮಾತ್ರವಲ್ಲದೆ ಬಿಎಸ್ಪಿ ಮತ್ತು ಇತರ ಸಣ್ಣ ಪಕ್ಷಗಳು ಕೂಡ ಮೀಸಲಾತಿ ಮತ್ತು ಇತರ ವಿಷಯಗಳ ಬಗ್ಗೆ ರಾಹುಲ್ ಗಾಂಧಿಯವರ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿದ್ದಾರೆ.
ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳಲ್ಲಿ ಸಾಧಕ ಕ್ರೀಡಾಪಟುಗಳಿಗೆ ಶೇ.2ರಷ್ಟು ಹುದ್ದೆಗಳನ್ನು ಮೀಸಲಿಡುವ ಕುರಿತು ಕರಡು ಅಧಿಸೂಚನೆ ಹೊರಡಿಸಲಾಗಿದೆ. ಶೀಘ್ರವೇ ಈ ಕುರಿತು ಅಂತಿಮ ಅಧಿಸೂಚನೆ ಹೊರಡಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
Minister Muniyappa: ಈ ನಿರ್ಣಯದಲ್ಲಿ ಸರ್ವೋಚ್ಛ ನ್ಯಾಯಾಲಯವು ಹಿಂದುಳಿದ ವರ್ಗಗಳಿಗೆ ಸಮಾನ ಪ್ರಾತ್ಯನಿಧ್ಯ ಹಾಗೂ ಅವಕಾಶ ಒದಗಿಸಲು ಒಳ ಮೀಸಲಾತಿಯ ಅವಶ್ಯಕತೆಯನ್ನು ಎತ್ತಿಹಿಡಿದಿದೆ ಎಂದು ಹೇಳಿದ್ದಾರೆ.
ಖಾಸಗಿ ಉದ್ಯಮಗಳಲ್ಲಿ ಕೂಡಾ ಕನ್ನಡಿಗರಿಗೆ ಕೆಲವು ಶ್ರೇಣಿಯ ಹುದ್ದೆಗಳನ್ನು ನೂರಕ್ಕೆ ನೂರರಷ್ಟು ಮೀಸಲಿಡಲಾಗುವುದು ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ ಬಿ ಪಾಟೀಲ್ ಹೇಳಿದ್ದಾರೆ.
ರಾಜ್ಯದ ಸರ್ಕಾರಿ ಉದ್ಯೋಗಗಳು ಮತ್ತು ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಹಿಂದುಳಿದ ವರ್ಗಗಳು, ಪರಿಶಿಷ್ಟ ಜಾತಿಗಳು ಮತ್ತು ಪರಿಶಿಷ್ಟ ಪಂಗಡಗಳಿಗೆ ನೀಡಲಾಗುತ್ತಿದ್ದ ಮೀಸಲಾತಿ ಪ್ರಮಾಣವನ್ನು ಶೇ 50 ರಿಂದ ಶೇ 65 ಕ್ಕೆ ಹೆಚ್ಚಿಸುವ ಬಿಹಾರ ಸರ್ಕಾರದ ಅಧಿಸೂಚನೆಯನ್ನು ಬಿಹಾರ್ ಹೈಕೋರ್ಟ್ ಗುರುವಾರದಂದು ರದ್ದುಪಡಿಸಿದೆ.
ಮುಸ್ಲಿಂ ಸಮುದಾಯಕ್ಕೆ ನೀಡುತ್ತಿರುವ ಮೀಸಲಾತಿ ಸಾಮಾಜಿಕ ನ್ಯಾಯದ ನೆಲೆಯಲ್ಲಿ ನೀಡಲಾಗುತ್ತಿದೆಯೇ ಹೊರತು ಓಲೈಕೆ ದೃಷ್ಟಿಯಿಂದಲ್ಲ ಎಂದು ಟಿಡಿಪಿ ನಾಯಕ ಮತ್ತು ಚಂದ್ರಬಾಬು ನಾಯ್ಡು ಅವರ ಪುತ್ರ ನರಾ ಲೋಕೇಶ್ ಹೇಳಿದ್ದಾರೆ.
Outsourcing Recruitment Reservation: ರಾಜ್ಯ ಸರ್ಕಾರಿ ಕಚೇರಿಗಳಲ್ಲಿನ ವಾಹನ ಚಾಲಕರು, ಡಾಟಾ ಎಂಟ್ರಿ ಆಪರೇಟರ್, ಸ್ವಚ್ಛತಾ ಸಿಬ್ಬಂದಿ, ಗ್ರೂಪ್ ʼಡಿʼ ಹುದ್ದೆಗಳನ್ನು ಹೊರಗುತ್ತಿಗೆ ಮೂಲಕ ಭರ್ತಿ ಮಾಡಿಕೊಳ್ಳುವುದು ಸರ್ಕಾರದ ಇತ್ತೀಚಿನ ಅಂಗೀಕೃತ ಕಾರ್ಯನೀತಿಯಾಗಿರುತ್ತದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ರಾಜ್ಯ ಸರ್ಕಾರವು ಹೊರಗುತ್ತಿಗೆ ನೌಕರರ ನೇಮಕಾತಿಯಲ್ಲಿ ಮೀಸಲಾತಿಯನ್ನು ಕಡ್ಡಾಯವಾಗಿ ಪಾಲಿಸುವಂತೆ ಆದೇಶ ಹೊರಡಿಸಿದೆ. ಅಷ್ಟೇ ಅಲ್ಲದೆ ಮಹಿಳೆಯರಿಗೂ ಶೇ 33 ರಷ್ಟು ಮೀಸಲಾತಿಯನ್ನು ನೀಡಬೇಕೆಂದು ಅದು ತನ್ನ ಆದೇಶದಲ್ಲಿ ತಿಳಿಸಿದೆ.
ತೆಲಂಗಾಣ: “ಮೋದಿ ಮೀಸಲಾತಿ ವಿರೋಧಿ, ಅವರು ನಿಮ್ಮಿಂದ ಮೀಸಲಾತಿ ಕಿತ್ತುಕೊಳ್ಳಲು ಬಯಸುತ್ತಾರೆ. ಮೀಸಲಾತಿಯನ್ನು 50% ರಿಂದ ಹೆಚ್ಚಿಸುವುದು ದೊಡ್ಡ ಸಮಸ್ಯೆಯಾಗಿದೆ. ನಾವು ಮೀಸಲಾತಿಯನ್ನು ಹೆಚ್ಚಿಸುತ್ತೇವೆ ಎಂದು ನಮ್ಮ ಪ್ರಣಾಳಿಕೆಯಲ್ಲಿ ಭರವಸೆ ನೀಡಿದ್ದೇವೆ” ಎಂದರು.
Amit Shah Fake Video Case: ಬಿಜೆಪಿ ಮತ್ತು ಗೃಹ ಸಚಿವಾಲಯದ ದೂರುಗಳ ನಂತರ ಎಡಿಟ್ ಮಾಡಿದ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿತ್ತು. ಹೀಗಾಗಿ ಈ ಬಗ್ಗೆ ದೆಹಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.
Mangalore to New Delhi : ಮಂಗಳೂರಿನಿಂದ ನವದೆಹಲಿಗೂ ವಿಶೇಷ ರೈಲು ಬಿಡಲು ರೈಲ್ವೆ ಇಲಾಖೆ ನಿರ್ಧರಿಸಿದೆ. ಹೋಳಿ ಹಬ್ಬದ ಆಚರಣೆ ಹಿನ್ನೆಲೆ ರೈಲ್ವೆ ಇಲಾಖೆ ನಿರ್ಧಾರ ಮಾಡಿದೆ. ಈ ರೈಲು ಹೊರಡುವ ಸಮಯ, ದಿನಾಂಕ ಹಾಗೂ ಟಿಕೆಟ್ ದರಗಳ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
Maharashtra : ಮರಾಠರಿಗೆ ಸರ್ಕಾರಿ ಉದ್ಯೋಗ ಮತ್ತು ಶಿಕ್ಷಣದಲ್ಲಿ ಶೇ10 ರಷ್ಟು ಮೀಸಲಾತಿ ಕಲ್ಪಿಸುವ ಮಸೂದೆಯನ್ನು ಮಹಾರಾಷ್ಟ್ರ ವಿಧಾನಸಭೆಯು ಮಂಗಳವಾರ ಸರ್ವಾನುಮತದಿಂದ ಅಂಗೀಕರಿಸಿದೆ.
ಆರ್ಥಿಕ, ಶೈಕ್ಷಣಿಕ, ಸಾಮಾಜಿಕವಾಗಿ ಮಹಿಳೆಯರು ಮುಂದುವರಿದಂತೆ ರಾಜಕೀಯವಾಗಿಯೂ ಮುಂದುವರಿಯಬೇಕಿದೆ. ಮುಂಬರುವ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯಲ್ಲಿ ಈ ಕುರಿತು ಆದ್ಯತೆ ನೀಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಆರ್. ಹೆಬ್ಬಾಳ್ಕರ್ ಹೇಳಿದ್ದಾರೆ.
ಡಾ.ಸದಾಶಿವ ವರದಿ ಜಾರಿ ಮಾಡುವುದು 2-3 ದಶಕಗಳ ಕಾಲದ್ದು ಈಗಿನದು ಅಲ್ಲಾ. ಭಾರತೀಯ ಜನತಾ ಪಕ್ಷದವರು ಡಾ. ಸದಾಶಿವ ಆಯೋಗ ವರದಿ ತಿರಸ್ಕಾರ ಮಾಡಿದ್ದಾರೆ ಅವರು ಮೀಸಲಾತಿ ವಿಚಾರದಲ್ಲಿ ಕಾಟಾಚಾರಕ್ಕೆ ಮೀಸಲಾತಿ ಜಾರಿ ಮಾಡಿದ್ದಾರೆ ನಾವು ಚುನಾವಣಾ ಸಂದರ್ಭದಲ್ಲಿ ಮಾತು ಕೊಟ್ಟಿದ್ದೇವೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.