ಹಾವೇರಿ ( ಶಿಗ್ಗಾಂವ ) : ನ್ಯಾಯಸಮ್ಮತವಾಗಿ ಮೀಸಲಾತಿ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.ಅವರು ಇಂದು ಶಿಗ್ಗಾಂವಿಯಲ್ಲಿ ಆಯೋಜಿಸಿದ್ದ ವೀರಶೈವ ಲಿಂಗಾಯತ ಪಂಚಮಸಾಲಿ ಸಮುದಾಯ ಭವನ ಉದ್ಘಾಟನಾ ಹಾಗೂ ಹರಧ್ಯಾನ ಮಂದಿರ ಶಂಕುಸ್ಥಾಪನಾ ಕಾರ್ಯವನ್ನು ನೆರವೇರಿಸಿ ಮಾತನಾಡಿದರು .
ಮೀಸಲಾತಿ ಭಿಕ್ಷೆಯಲ್ಲ. ಅದು ನಮ್ಮ ಹಕ್ಕು ಹಾಗೂ ಜನ ಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ನೀಡಲು ಡಾ ಬಿ ಆರ್ ಅಂಬೇಡ್ಕರ್ ರವರು ಸಂವಿಧಾನದಲ್ಲಿ ಪ್ರತಿಪಾದಿಸುತ್ತಾರೆ. ಆ ಕಾರಣದಿಂದ SC - ST ಜನ ಸಂಖ್ಯೆಗೆ ಅನುಗುಣವಾಗಿ ಮೀಸಲಾತಿಯನ್ನು ಹೆಚ್ಚಿಸಬೇಕೆಂದು SC - ST ಸಮುದಾಯಗಳ ಹೋರಾಟದ ಕಾರಣದಿಂದ ನ್ಯಾಯಮೂರ್ತಿ ನಾಗಮೋಹನ್ ದಾಸ್ ಸಮಿತಿಯನ್ನು ನಮ್ಮ ಸರ್ಕಾರ ರಚನೆ ಮಾಡಿತ್ತು.
ಮೀಸಲಾತಿ ಪ್ರಮಾಣವನ್ನು 50%ಕ್ಕಿಂತ ಹೆಚ್ಚಿಸುವ ಪ್ರಸ್ತಾಪ ಇಲ್ಲವೆಂದು ಲೋಕಸಭೆಯಲ್ಲಿ ಕೇಂದ್ರ ಸಚಿವರೇ ಹೇಳುವ ಮೂಲಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೀಸಲಾತಿ ಹೆಚ್ಚಳದ ರಾಜ್ಯ ಬಿಜೆಪಿ ನಾಯಕರ ಪ್ರಚಾರದ ಬಲೂನ್ ಗೆ ಕೇಂದ್ರ ಸರ್ಕಾರವೇ ಸೂಜಿ ಚುಚ್ಚಿದೆ ಎಂದು ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ಹೇಳಿದ್ದಾರೆ.
ರಾಜ್ಯದಲ್ಲಿ ಎಸ್ಸಿ ಮತ್ತು ಎಸ್ಟಿ ಮೀಸಲಾತಿ ಕ್ರೆಡಿಟ್ ವಾರ್ ಜೋರಾಗಿದೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಇದನ್ನೇ ಪ್ಲಸ್ ಮಾಡಿಕೊಳ್ಳೋಕೆ ಮೂರು ಪಕ್ಷಗಳಲ್ಲೂ ಸಮಬಲದ ಟಾಕ್ ವಾರ್ ನಡೆದಿದೆ. ನಾವು ತಂದಿದ್ದು, ನಾವು ಮಾಡಿದ್ದು, ನಮ್ಮ ಪ್ರಯತ್ನ ಎಂದು ಮೂರು ಪಕ್ಷಗಳಲ್ಲೂ ಕ್ರೆಡಿಟ್ಗಾಗಿ ಜಿದ್ದಾಜಿದ್ದಿ ಶುರುವಾಗಿದೆ. ಇದ್ರ ನಡುವೆ ಸ್ವಪಕ್ಷೀಯ ಬಿಜೆಪಿ ನಾಯಕರಲ್ಲೇ ಕ್ರೆಡಿಟ್ಗಾಗಿ ಪೈಪೋಟಿ ನಡೆದಿದೆ.
ಎಸ್ಸಿ ಮತ್ತು ಎಸ್ಟಿ ಸಮುದಾಯಕ್ಕೆ ಮೀಸಲಾತಿ ಏರಿಕೆ ಮಾಡುವ ಸಂಬಂಧ ರಾಜ್ಯ ಸರ್ಕಾರ ಆದಷ್ಟು ಬೇಗ ನಿರ್ಣಯ ಕೈಗೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಒತ್ತಾಯ ಮಾಡಿದ್ದಾರೆ.
ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ನೀಡುವ ವಿಚಾರ ಈಗ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ.ಈ ಹಿನ್ನೆಲೆಯಲ್ಲಿ ಇಂದು ರಾತ್ರಿ ಜಯಮೃತ್ಯುಂಜಯ ಶ್ರೀ ನೇತೃತ್ವದಲ್ಲಿ ಕ್ಯಾಪಿಟಲ್ ಹೊಟೇಲ್ ನಲ್ಲಿ ಸಭೆ ನಡೆಯಲಿದೆ ಎನ್ನಲಾಗಿದೆ.
'ರಾಜ್ಯದಲ್ಲಿ ಸಿದ್ಧವಾಗಿರುವ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ ಆಧಾರದಲ್ಲಿ ಹಿಂದುಳಿದ ವರ್ಗಗಳಿಗೆ ರಾಜಕೀಯ ಮೀಸಲಾತಿಯನ್ನು ರೂಪಿಸಿ ಅದನ್ನು ಸುಪ್ರೀಮ್ ಕೋರ್ಟ್ ಗೆ ಸಲ್ಲಿಸಿ ಅದರ ಆಧಾರದಲ್ಲಿ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಲು ಅವಕಾಶ ಕೋರಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಆಗ್ರಹಿಸುತ್ತೇನೆ' ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನಾನಂದ ಸ್ವಾಮೀಜಿ ಅವರು ಕಳೆದ 49 ದಿನಗಳಿಂದ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಧರಣಿ ಕೂತಿದ್ದಾರೆ.ಸರ್ಕಾರ ಅವರ ಬೇಡಿಕೆಗಳ ಈಡೇರಿಕೆಗೆ ಮುಕ್ತವಾಗಿದೆ ಎಂದು ಹೇಳಿದರೆ ಸಾಲದು ಅಲ್ಲಿಗೆ ಹೋಗಿ ಧರಣಿ ಕೈಬಿಡುವಂತೆ ಸ್ವಾಮಿಗಳ ಮನವೊಲಿಸಬೇಕು ಎಂದು ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ಹೇಳಿದ್ದಾರೆ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.