ಈಗ ಮೀಸಲಾತಿ ಹೆಚ್ಚಳ ವಿಚಾರದಲ್ಲಿ ಬೊಮ್ಮಾಯಿ ಅವರ ಸರ್ಕಾರ ಕೇವಲ ಆಸೆ ತೋರಿಸುತ್ತಿದೆ. ಈ ವಿಚಾರವಾಗಿ ಬೊಮ್ಮಾಯಿ ಅವರ ಸರ್ಕಾರದ ಪ್ರಸ್ತಾವನೆಯನ್ನು ಮೋದಿ ಸರ್ಕಾರ ಕಸದ ಬುಟ್ಟಿಗೆ ಎಸೆದಿದೆ. ಹೀಗಾಗಿ ಪರಿಶಿಷ್ಟರ ಮೀಸಲಾತಿ ಹೆಚ್ಚಳ ಬಿಜೆಪಿಯಿಂದ ಅಸಾಧ್ಯ. ಇದು ಕೇವಲ ಕಾಂಗ್ರೆಸ್ ನಿಂದ ಮಾತ್ರ ಸಾಧ್ಯ. ನಾವು ಅದನ್ನು ಮಾಡಲು ಕಟಿಬದ್ಧರಾಗಿದ್ದೇವೆ ಎಂದು ಕಾಂಗ್ರೆಸ್ ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಹೇಳಿದ್ದಾರೆ.
ಮೀಸಲಾತಿಗಾಗಿ ಹೋರಾಟದ ಕಹಳೆ ಮೊಳಗಿಸಲಿರುವ ಒಕ್ಕಲಿಗರ ಸಂಘ. ಬೆಂಗಳೂರಿನಲ್ಲಿ ರಾಜ್ಯ ಒಕ್ಕಲಿಗ ಸಂಘದಿಂದ ಸಮಾಲೋಚನಾ ಸಭೆ. ಕಾಂಗ್ರೆಸ್, ಜೆಡಿಎಸ್, ಬಿಜೆಪಿ ಪ್ರಮುಖ ನಾಯಕರು ಭಾಗವಹಿಸುವ ಸಾಧ್ಯತೆ.
ಮೀಸಲಾತಿಗಾಗಿ ಡಿಸೆಂಬರ್ 12ಕ್ಕೆ ವಿಧಾನಸೌಧ ಮುತ್ತಿಗೆಗೆ ನಿರ್ಧಾರ ಮಾಡಲಾಗಿತ್ತು. ಆದ್ರೆ ಈ ನಿರ್ಧಾರ ಕೈಬಿಡಲಾಗಿದೆ. ಅಧಿವೇಶನದೊಳಗೆ ಮೀಸಲಾತಿ ನೀಡದೇ ಇದ್ರೆ ಸುವರ್ಣಸೌಧಕ್ಕೆ ಮುತ್ತಿಗೆ ಹಾಕೋದಾಗಿ ಜಯಮೃತ್ಯುಂಜಯ ಸ್ವಾಮೀಜಿ ಎಚ್ಚರಿಕೆ
ಸದಾ ಒಂದಿಲ್ಲೊಂದು ವಿಚಾರದಲ್ಲಿ ಸುದ್ದಿಯಲ್ಲಿರುವ ಕರ್ನಾಟಕ ವಿಶ್ವ ವಿದ್ಯಾಲಯದ ಮೇಲೆ ಮತ್ತೊಂದು ಆರೋಪ ಕೇಳಿಬಂದಿದೆ.. ಎಸ್ಸಿ ಎಸ್ಟಿ ವಿದ್ಯಾರ್ಥಿಗಳಿಗೆ ಕಲಿಕೆಯಲ್ಲಿ ಮೀಸಲಾತಿ ನೀಡಬೇಕು ಅಂತ ಸರ್ಕಾರ ಆದೇಶ ಹೊರಡಿಸಿದೆ. ಆದ್ರೆ ಈ ವಿಶ್ವವಿದ್ಯಾಲಯದಲ್ಲಿ ಮಾತ್ರ ಸರ್ಕಾರದ ಆದೇಶ ಪತ್ರವೇ ಸಿಕ್ಕಿಲ್ಲವಂತೆ.
ರಾಜ್ಯದಲ್ಲಿ ಕಾಂಗ್ರೆಸ್ ಭಾರತ್ ಜೋಡೋ ಪಾದಯಾತ್ರೆ ಶುರು ಮಾಡಿದೆ. ಈ ಯಾತ್ರೆಗೆ ಟಕ್ಕರ್ ಕೂಡಲು ಬಿಜೆಪಿ ಜನ ಸಂಕಲ್ಪ ಯಾತ್ರೆ ಶುರು ಮಾಡಿದ್ದು, ರಾಯಚೂರಿನಿಂದಲೇ ಪಾಂಚಜನ್ಯ ಮೊಳಗಿಸಿದೆ. ಮಾಜಿ ಸಿಎಂ ಮತ್ತು ಹಾಲಿ ಸಿಎಂ ಜೊತೆಯಾಗಿ ಸರ್ಕಾರದ ಸಾಧನೆ ತಿಳಿಸಲು ಮುಂದಿನ ವಿಧಾನಸಭಾ ಚುನಾವಣೆಗೆ ತಯಾರಿ ನಡೆಸಿದ್ದು, ರಾಯಚೂರಿನಿಂದಲೇ ಪಾಂಚಜನ್ಯ ಮೊಳಗಿಸಿದ್ದಾರೆ.
ಅಹಿಂದ ಚಳವಳಿ ಆರಂಭಿಸಿ ಮುಖ್ಯಮಂತ್ರಿಯಾದ ಸಿದ್ದರಾಮಯ್ಯರವರು ಹಿಂದುಳಿದ ಸಮಾಜಗಳಿಗೆ ನ್ಯಾಯವನ್ನೇ ಕೊಡಲಿಲ್ಲ. ಆಗ ಅಹಿಂದಕ್ಕೆ ನ್ಯಾಯ ಕೊಡದ ಅವರು ಈಗ ನಾವು ಕೊಟ್ಟಾಗ ಅಸಮಾಧಾನ ತೋರಿಸುವುದು ಯಾವ ನ್ಯಾಯ? - ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ಕುಮಾರ್ ಕಟೀಲ್
ರಾಜ್ಯದಲ್ಲಿ SC, ST ಮೀಸಲಾತಿ ಕ್ರೆಡಿಟ್ ವಾರ್ ಜೋರಾಗಿದೆ.. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಇದನ್ನೇ ಪ್ಲಸ್ ಮಾಡಿಕೊಳ್ಳೋಕೆ ಮೂರು ಪಕ್ಷಗಳಲ್ಲೂ ಸಮಬಲದ ಟಾಕ್ ವಾರ್ ನಡೆದಿದೆ.. ಈ ಮಧ್ಯೆ ಸ್ವಪಕ್ಷೀಯ ಬಿಜೆಪಿ ನಾಯಕರಲ್ಲೇ ಕ್ರೆಡಿಟ್ಗಾಗಿ ಪೈಪೋಟಿ ಶುರುವಾಗಿದೆ.
ರಾಜ್ಯದಲ್ಲಿ ಎಸ್ಸಿ ಮತ್ತು ಎಸ್ಟಿ ಮೀಸಲಾತಿ ಕ್ರೆಡಿಟ್ ವಾರ್ ಜೋರಾಗಿದೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಇದನ್ನೇ ಪ್ಲಸ್ ಮಾಡಿಕೊಳ್ಳೋಕೆ ಮೂರು ಪಕ್ಷಗಳಲ್ಲೂ ಸಮಬಲದ ಟಾಕ್ ವಾರ್ ನಡೆದಿದೆ. ನಾವು ತಂದಿದ್ದು, ನಾವು ಮಾಡಿದ್ದು, ನಮ್ಮ ಪ್ರಯತ್ನ ಎಂದು ಮೂರು ಪಕ್ಷಗಳಲ್ಲೂ ಕ್ರೆಡಿಟ್ಗಾಗಿ ಜಿದ್ದಾಜಿದ್ದಿ ಶುರುವಾಗಿದೆ. ಇದ್ರ ನಡುವೆ ಸ್ವಪಕ್ಷೀಯ ಬಿಜೆಪಿ ನಾಯಕರಲ್ಲೇ ಕ್ರೆಡಿಟ್ಗಾಗಿ ಪೈಪೋಟಿ ನಡೆದಿದೆ.
ಸುಪ್ರೀಂ ಕೋರ್ಟ್ (ಇಂದಿರಾ ಸಹಾನಿ ಪ್ರಕರಣದ) ತೀರ್ಪಿನ ಪ್ರಕಾರ ಒಟ್ಟು ಮೀಸಲಾತಿ ಶೇ.ಐವತ್ತನ್ನು ಮೀರುವಂತಿಲ್ಲ. ಈ ಮಿತಿಯನ್ನು ಮೀರದೆ ಎಸ್ ಸಿ/ಎಸ್ ಟಿ ಮೀಸಲಾತಿಯನ್ನು ಒಟ್ಟು ಶೇ.ಆರರಷ್ಟು ಹೆಚ್ಚಿಸಲು ಹೇಗೆ ಸಾಧ್ಯ? ಇದರ ಬಗ್ಗೆ ತನ್ನ ನಿಲುವನ್ನು ರಾಜ್ಯ ಸರ್ಕಾರ ಸ್ಪಷ್ಟಪಡಿಸಬೇಕು, ಎಂದು ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದರು.
ಚುನಾವಣೆಯ ಹೊಸ್ತಿಲಲ್ಲೇ ಮೀಸಲಾತಿಯೆಂಬ ಜೇನುಗೂಡಿಗೆ ಸರ್ಕಾರ ಕಲ್ಲುಹೊಡೆದಿದೆ.. ಪ್ರತಿಪಕ್ಷಗಳ ಲೆಕ್ಕಾಚಾರಗಳನ್ನೂ ಉಲ್ಟಾ ಮಾಡಿದೆ. ನಿನ್ನೆಯ ಕ್ಯಾಬಿನೆಟ್ ಸಭೆಯಲ್ಲಿ ಮಹತ್ವದ ನಿರ್ಣಯ ಕೈಗೊಂಡಿದೆ. ಎಸ್ಸಿ,ಎಸ್ಟಿ ಮೀಸಲಾತಿ ಹೆಚ್ಚಳಕ್ಕೆ ಸರ್ವಸಮ್ಮತ ಒಪ್ಪಿಗೆ ನೀಡಿದೆ. ಶೀಘ್ರದಲ್ಲೇ ಅನುಷ್ಠಾನಗೊಳಿಸುವ ಭರವಸೆ ನೀಡಿದೆ. ಸರ್ಕಾರದ ಈ ನಿರ್ಧಾರದಿಂದ ತಳ ಸಮುದಾಯಗಳ ಸುದೀರ್ಘ ಹೋರಾಟಕ್ಕೆ ಯಶಸ್ಸು ಸಿಕ್ಕಂತಾಗಿದೆ.
ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ವಿಳಂಬಕ್ಕೆ ಆಕ್ರೋಶ ವ್ಯಕ್ತವಾಗಿದೆ.. ಇಂದು ಜಯಮೃತ್ಯುಂಜಯ ನೇತೃತ್ವದಲ್ಲಿ ಪಂಚಮಸಾಲಿ ಬೃಹತ್ ಸಮಾವೇಶ ನಡೆಯಲಿದ್ದು, ಮುಖಂಡರು ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ನಿರ್ಧಾರ ಮಾಡಿದ್ದಾರೆ.
ರಾಜ್ಯದಲ್ಲಿ ಇಪ್ಪತ್ತು ಲಕ್ಷಕ್ಕೂ ಅಧಿಕ ಜನಸಂಖ್ಯೆ ಇರುವ ಕುಂಬಾರ ಸಮುದಾಯದಕ್ಕೆ ರಾಜಕೀಯವಾಗಿ ಬೆಳವಣಿಗೆ ಆಗಿಲ್ಲ ಎಂದು ಸಮುದಾಯದ ಕುಂಬಾರ ಗುಂಡಯ್ಯ ಸ್ವಾಮೀಜಿ ಬೇಸರ ವ್ಯಕ್ತಪಡಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.