Notice to Roger Binny: ಭಾರತೀಯ ಕ್ರಿಕೆಟ್‌ನ ದೇಶೀಯ ಋತುವಿನ ಮಾಧ್ಯಮ ಹಕ್ಕುಗಳನ್ನು ಹೊಂದಿರುವ ಸ್ಟಾರ್ ಸ್ಪೋರ್ಟ್ಸ್‌ನಲ್ಲಿ ರೋಜರ್ ಬಿನ್ನಿ ಅವರ ಸೊಸೆ ಕೆಲಸ ಮಾಡುತ್ತಿರುವುದರಿಂದ ಹಿತಾಸಕ್ತಿ ಸಂಘರ್ಷವಿದೆ ಎಂದು ದೂರುದಾರ ಸಂಜೀವ್ ಗುಪ್ತಾ ಆರೋಪಿಸಿದ್ದಾರೆ. ರೋಜರ್ ಬಿನ್ನಿ ಅವರ ಸೊಸೆ ಮತ್ತು ಸ್ಟುವರ್ಟ್ ಬಿನ್ನಿ ಅವರ ಪತ್ನಿ ಮಯಾಂತಿ ಲ್ಯಾಂಗರ್ ಅವರು ಸ್ಟಾರ್ ಸ್ಪೋರ್ಟ್ಸ್‌ನ ಪ್ರಸಿದ್ಧ ಆಂಕರ್ ಆಗಿದ್ದಾರೆ.
ಈ ಬಗ್ಗೆ ಹಲವು ಪ್ರಶ್ನೆಗಳು ಎದ್ದಿದ್ದು, ಇದರಲ್ಲಿ ಪಾಕಿಸ್ತಾನದ ಮಾಜಿ ನಾಯಕ ಶಾಹಿದ್ ಅಫ್ರಿದಿ ಕೂಡ ಟೀಂ ಇಂಡಿಯಾ ಮೇಲೆ ದೊಡ್ಡ ಆರೋಪ ಮಾಡಿದ್ದಾರೆ. ಇದೀಗ ಬಿಸಿಸಿಐ ಮುಖ್ಯಸ್ಥ ರೋಜರ್ ಬಿನ್ನಿ ಇದಕ್ಕೆ ದಿಟ್ಟ ಉತ್ತರ ನೀಡಿದ್ದಾರೆ.
ಪಾಕಿಸ್ತಾನದಲ್ಲಿ ನಡೆಯುವ ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಗೆ ಟೀಂ ಇಂಡಿಯಾ ಪ್ರವಾಸದ ಬಗ್ಗೆ ಕೇಂದ್ರ ಸರ್ಕಾರದ ನಿರ್ಧಾರವೇ ಅಂತಿಮ ಎಂದು ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ನೂತನ ಅಧ್ಯಕ್ಷ ರೋಜರ್ ಬಿನ್ನಿ ಸ್ಪಷ್ಟಪಡಿಸಿದ್ದಾರೆ.
ವಿಶೇಷವೆಂದರೆ ರೋಜರ್ ಬಿನ್ನಿ ಬಿಸಿಸಿಐನಲ್ಲಿ ಉನ್ನತ ಹುದ್ದೆ ಅಲಂಕರಿಸಿದ ಮೊದಲ ವಿಶ್ವ ಚಾಂಪಿಯನ್ ಕ್ರಿಕೆಟಿಗರಾಗಿದ್ದಾರೆ. ಅವರು 1983 ರಲ್ಲಿ ಮೊದಲ ಬಾರಿಗೆ ವಿಶ್ವಕಪ್ ಗೆದ್ದ ತಂಡದ ಸದಸ್ಯರಾಗಿದ್ದರು.
ಸೌರವ್ ಗಂಗೂಲಿ ಅವರನ್ನು ಪದಚ್ಯುತಗೊಳಿಸಿರುವುದು ದಾದಾಗೆ ಮಾಡಿದ ಅವಮಾನ ಎಂದು ಟಿಎಂಸಿ ಹೇಳಿದೆ. ಬಿಸಿಸಿಐ ಕಾರ್ಯದರ್ಶಿಯಾಗಿ ಜಯ್ ಶಾ ಮುಂದುವರಿಯಬಹುದಾದರೆ ಸೌರವ್ ಗಂಗೂಲಿಯನ್ನು ಬಿಸಿಸಿಐ ಅಧ್ಯಕ್ಷರಾಗಿ ಏಕೆ ಮುಂದುವರಿಸಬಾರದು ಎಂದು ಪ್ರಶ್ನಿಸಿದೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಪುತ್ರ ಜಯ್ ಶಾ ಸತತ ಎರಡನೇ ಅವಧಿಗೆ ಬಿಸಿಸಿಐ ಕಾರ್ಯದರ್ಶಿಯಾಗಿ ಮುಂದುವರಿಯಲಿದ್ದಾರೆ. ಇದಲ್ಲದೇ ಗಂಗೂಲಿ ಬದಲಿಗೆ ಶಾ ಐಸಿಸಿ ಮಂಡಳಿಯಲ್ಲಿ ಸ್ಥಾನ ಪಡೆಯಲಿದ್ದಾರೆ.
ಈ ಟೂರ್ನಿಗೆ ಟೀಂ ಇಂಡಿಯಾ ಸಿದ್ಧತೆಯನ್ನೂ ಆರಂಭಿಸಿದೆ. ಇದೆಲ್ಲದರ ನಡುವೆ ಭಾರತೀಯ ಅಭಿಮಾನಿಗಳಿಗೆ ಬಿಗ್ ನ್ಯೂಸ್ ಒಂದು ಹೊರಬಿದ್ದಿದೆ. ಟಿ20 ವಿಶ್ವಕಪ್ 2022 ರ ನಡುವೆ, ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ (BCCI) ಚುನಾವಣೆ ಕೂಡ ನಡೆಯಲಿದೆ.