CSK retention list: ಐಪಿಎಲ್ 2025 ರ ಹರಾಜಿನ ಮೊದಲು ಎಂಎಸ್ ಧೋನಿಯನ್ನು ಅನ್ಕ್ಯಾಪ್ಡ್ ಆಟಗಾರನಾಗಿ ಉಳಿಸಿಕೊಳ್ಳಲು ಸಿಎಸ್ಕೆ ಮುಂದಾಗಿದೆ.. ಆದರೆ ಈ ಫ್ರಾಂಚೈಸಿಯಲ್ಲಿ ಯಾರು ನಂ.1 ಆಗಲಿದ್ದಾರೆ ಎಂಬುದು ಹಲವರ ಪ್ರಶ್ನೆ... ಏಕೆಂದರೆ ಎಂಎಸ್ ಧೋನಿ ನಂತರ ತಂಡದಲ್ಲಿ ಬಲಿಷ್ಠ ಆಟಗಾರ ಯಾರು ಎಂಬ ಬಗ್ಗೆ ಬಿಸಿ ಬಿಸಿ ಚರ್ಚೆ ನಡೆಯುತ್ತಿದೆ.
Ruturaj Gaikwad wife Utkarsha Pawar: ಭಾರತ ಕ್ರಿಕೆಟ್ ತಂಡದ ಆರಂಭಿಕ ಬ್ಯಾಟ್ಸ್ಮನ್ ರುತುರಾಜ್ ಗಾಯಕ್ವಾಡ್ ಅದ್ಭುತ ಆಟಗಾರ ಎಂಬುದರಲ್ಲಿ ಎರಡು ಮಾತಿಲ್ಲ. ಇನ್ನು ಇವರ ಪತ್ನಿಯೂ ಕ್ರಿಕೆಟರ್ ಎಂಬುದು ನಿಮಗೆ ತಿಳಿದಿದೆಯೇ?
Team India Captaincy: ಕಳೆದ ತಿಂಗಳು ಭಾರತ ಟಿ20 ತಂಡದ ನಾಯಕರಾಗಿ ಸೂರ್ಯಕುಮಾರ್ ಯಾದವ್ ಅವರನ್ನು ನೇಮಕ ಮಾಡಲಾಗಿತ್ತು. ಶ್ರೀಲಂಕಾ ವಿರುದ್ಧದ ಟಿ20 ಸರಣಿಯ ನಾಯಕತ್ವ ವಹಿಸಿದ್ದರು. ಈ ಮೊದಲು ಟಿ20 ತಂಡದ ನಾಯಕರಾಗಿ ಹಾರ್ದಿಕ್ ಪಾಂಡ್ಯ ನೇಮಕವಾಗುತ್ತಾರೆ ಎಂದು ಎಲ್ಲರೂ ನಿರೀಕ್ಷಿಸಿದ್ದರು. ಆದರೆ, ಇದಕ್ಕೆ ವ್ಯತಿರಿಕ್ತವಾಗಿ ಸೂರ್ಯಕುಮಾರ್ ಯಾದವ್ ಅವರನ್ನು ಟಿ20 ತಂಡದ ನಾಯಕರನ್ನಾಗಿ ನೇಮಿಸಲಾಯಿತು.
Rohit Sharma: ಐಪಿಎಲ್ 2025 ರ ಮೆಗಾ ಹರಾಜು ಈ ವರ್ಷದ ಕೊನೆಯಲ್ಲಿ ನಡೆಯಲಿದೆ. ಈಗಾಗಲೇ ಹರಾಜು ಪ್ರಕ್ರಿಯೆಯತ್ತ ಗಮನ ಹರಿಸಿರುವ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) 10 ಫ್ರಾಂಚೈಸಿಗಳ ಮಾಲೀಕರೊಂದಿಗೆ ಈಗಾಗಲೇ ಸಭೆ ನಡೆಸಿ ಧಾರಣ ನಿಯಮಗಳಿಗೆ ಸಂಬಂಧಿಸಿದಂತೆ ಸಲಹೆ, ಸೂಚನೆಗಳನ್ನು ಪಡೆದುಕೊಂಡಿದೆ.
Virat Kohli: ಭಾರತ ತಂಡ ಟಿ20 ವಿಶ್ವಕಪ್ ಸರಣಿ ಗೆದ್ದ ಬೆನ್ನಲ್ಲೇ ವಿರಾಟ್ ಕೊಹ್ಲಿ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದಾರೆ. ವಿರಾಟ್ ಕೊಹ್ಲಿ ಅವರ ಗಮನ ಈಗ ಏಕದಿನ ಮತ್ತು ಟೆಸ್ಟ್ ಸರಣಿಯ ಮೇಲೆ ಮಾತ್ರ ಎಂದು ಕಂಡುಬಂದಿದೆ. ವಿಶ್ರಾಂತಿಯಲ್ಲಿರುವ ವಿರಾಟ್ ಕೊಹ್ಲಿ ಗಂಭೀರ್ ಮನವಿಗೆ ಮಣಿದು ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯಲ್ಲಿ ಆಡಲು ಒಪ್ಪಿಕೊಂಡಿದ್ದರು.
Bumrah: 27 ವರ್ಷಗಳ ನಂತರ ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯನ್ನು ಭಾರತ ಕಳೆದುಕೊಂಡಿದೆ. ಈ ಸರಣಿಯಲ್ಲಿ ಮೊದಲ ಬಾರಿಗೆ ಕೋಚ್ ಆಗಿ ಅಧಿಕಾರ ವಹಿಸಿಕೊಂಡಿರುವ ಗಂಭೀರ್ಗೆ ಇದು ಭಾರೀ ಹಿನ್ನಡೆ ಅನುಭವಿಸಿದ್ದಾರೆ. ಅದರಲ್ಲೂ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಅವರಂತಹ ಆಟಗಾರರು ಈ ಸರಣಿಯಲ್ಲಿ ಆಡಿದರೂ ಕೂಡ ಸರಣಿ ಸೋತಿರುವುದಕ್ಕೆ ಭಾರಿ ಟೀಕೆಗಳು ವ್ಯಕ್ತವಾಗುತ್ತಿದೆ.
IND vs SL T20: ಭಾರತ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಶ್ರೀಲಂಕಾ 32 ರನ್ ಗಳ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಶ್ರೀಲಂಕಾ 50 ಓವರ್ಗಳಲ್ಲಿ 9 ವಿಕೆಟ್ ನಷ್ಟಕ್ಕೆ 240 ರನ್ ಗಳಿಸಿತು. ಇದಾದ ಬಳಿಕ ಮೈದಾನಕ್ಕಿಳಿದ ಭಾರತ ತಂಡ 13 ಓವರ್ ಗಳಲ್ಲಿ ವಿಕೆಟ್ ನಷ್ಟವಿಲ್ಲದೆ 95 ರನ್ ಕಲೆಹಾಕಿತು.
India vs sri lanka: ಭಾರತ ಮತ್ತು ಶ್ರೀಲಂಕಾ ನಡುವೆ ನಡೆಯುತ್ತಿರುವ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯ ಅನಿರ್ದಿಷ್ಟವಾಗಿ ಅಂತ್ಯಗೊಂಡಿದೆ. ಭಾರತ ವಿರುದ್ಧ ಮೊದಲು ಬ್ಯಾಟ್ ಮಾಡಿದ ಶ್ರೀಲಂಕಾ 8 ವಿಕೆಟ್ಗೆ 230 ರನ್ ಗಳಿಸಿತು. ಇದಕ್ಕೆ ಉತ್ತರವಾಗಿ ಭಾರತ ತಂಡ 230 ರನ್ಗಳಿಗೆ ಆಲೌಟ್ ಆಯಿತು. ಪಂದ್ಯ ಟೈ ಆದರೆ ಟಿ20 ಪಂದ್ಯದಂತೆ ಈ ಪಂದ್ಯದಲ್ಲಿ ಸೂಪರ್ ಓವರ್ ಇರಲಿಲ್ಲ.
IND vs SL T20: ಭಾರತ ಮತ್ತು ಶ್ರೀಲಂಕಾ ನಡುವಿನ ಮೊದಲ ಏಕದಿನ ಪಂದ್ಯ ಟೈನಲ್ಲಿ ಅಂತ್ಯಗೊಂಡಿದೆ. ಈ ಪಂದ್ಯವನ್ನು ಭಾರತ ತಂಡ ಗೆಲ್ಲಬಹುದಿತ್ತು. ಇನ್ನು 15 ಎಸೆತಗಳು ಬಾಕಿ ಇರುವಾಗ 10ನೇ ಕ್ರಮಾಂಕದಲ್ಲಿ ಫೀಲ್ಡ್ಗೆ ಎಂಟ್ರಿ ಕೊಟ್ಟ ಅರ್ಷದೀಪ್ ಸಿಂಗ್ ಅವರ ತಪ್ಪಿನಿಂದಾಗಿ ಎಲ್ಲಾ ವಿಕೆಟ್ಗಳನ್ನು ಕಳೆದುಕೊಳ್ಳುವ ಮೂಲಕ ಗೆಲ್ಲುವ ಪಂದ್ಯ ಟೈನಲ್ಲಿ ಮುಕ್ತಾಯವಾಯಿತು.
Gautham Gambhir warns Hardik Pandya: ಶ್ರೀಲಂಕಾ ವಿರುದ್ಧದ ಮೂರು ಪಂದ್ಯಗಳ ಟಿ20ಐ ಸರಣಿಯಲ್ಲಿ ಭಾರತ 3-0 ಅಂತರದಲ್ಲಿ ಜಯಗಳಿಸಿದ ನಂತರ ಕೋಚ್ ಗೌತಮ್ ಗಂಭೀರ್ ಭಾರತೀಯ ಆಟಗಾರರೊಂದಿಗೆ ಮಾತನಾಡಿದರು. ನಂತರ ಮುಂಬರುವ ಬಾಂಗ್ಲಾದೇಶ ವಿರುದ್ಧದ ಸರಣಿಗೂ ಮುನ್ನ ಆಟಗಾರರು ಸಂಪೂರ್ಣ ಫಿಟ್ ಆಗಿರಬೇಕು ಎಂದು ಎಚ್ಚರಿಕೆ ನೀಡಿದರು.
IND vs SL T20: ಗಂಭೀರ್ ಭಾರತ ತಂಡದ ಕೋಚ್ ಆಗಿ ಅಧಿಕಾರ ವಹಿಸಿಕೊಂಡಾಗ ಫೀಲ್ಡಿಂಗ್ ಕೋಚ್ ಡಿ ದಿಲೀಪ್ ಅವರನ್ನು ಮುಂದುವರಿಸುವಂತೆ ಕೇಳಿಕೊಂಡಿದ್ದರು. ಭಾರತ ತಂಡದ ಕೋಚ್ ಆಗಿ ದಿಲೀಪ್ ಅವರನ್ನು ಕರೆತಂದ ನಂತರ, ಅವರು ಪ್ರತಿ ಐಸಿಸಿ ಪಂದ್ಯಾವಳಿಯಲ್ಲಿ ಆಟಗಾರರಿಗೆ ಅತ್ಯುತ್ತಮ ಫೀಲ್ಡರ್ ಪದಕವನ್ನು ನೀಡುತ್ತಿದ್ದರು.
IND vs SL T20: ಭಾರತ ಮತ್ತು ಶ್ರೀಲಂಕಾ ನಡುವೆ 3 ಪಂದ್ಯಗಳ ಟಿ20 ನಡೆದು ಮುಗಿದಿದೆ. ಇನ್ನೂ, ಮಂಗಳವಾರ ನಡೆದ ಪಂದ್ಯ ಮಳೆಯಿಂದಾಗಿ ತಡವಾಗಿ ಆರಂಭವಾಯಿತು. ಪಂದ್ಯದಲ್ಲಿ ಶ್ರೀಲಂಕಾ ನಾಯಕ ಸರಿತ್ ಅಸಲಂಗಾ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದರು.
IND vs SL T20: ಶ್ರೀಲಂಕಾ ವಿರುದ್ಧದ ಮೂರು ಪಂದ್ಯಗಳ ಟಿ20ಐ ಸರಣಿಯನ್ನು ಭಾರತ ತಂಡ ಈಗಾಗಲೇ 2-0 ಅಂತರದಲ್ಲಿ ವಶಪಡಿಸಿಕೊಂಡಿದ್ದು, ಮೂರನೇ ಪಂದ್ಯ ಮಂಗಳವಾರ ಅಂದರೆ ಜಲೈ 30ರಂದು ನಡೆಯಲಿದೆ. ಸಾಮಾನ್ಯವಾಗಿ ಇಂತಹ ಪರಿಸ್ಥಿತಿಯಲ್ಲಿ ಅವಕಾಶ ಸಿಗದ ಆಟಗಾರರಿಗೆ ಪ್ಲೇಯಿಂಗ್ ಇಲೆವೆನ್ನಲ್ಲಿ ಅವಕಾಶ ನೀಡಲಾಗುತ್ತದೆ. ಬಿಸಿಸಿಐ ಅಭ್ಯಾಸ ಮುಂದುವರಿಸದಂತೆ ಕೋಚ್ ಗೌತಮ್ ಗಂಭೀರ್ ಒತ್ತಾಯಿಸಿದ್ದಾರೆ ಎನ್ನಲಾಗಿದೆ.
IND vs SL T20: 2024ರ ಟಿ20 ವಿಶ್ವಕಪ್ ಬಳಿಕ ರೋಹಿತ್ ಶರ್ಮಾ ಅಂತಾರಾಷ್ಟ್ರೀಯ ಟಿ20 ಪಂದ್ಯಗಳಿಂದ ನಿವೃತ್ತಿಯಾದ ಹಿನ್ನೆಲೆಯಲ್ಲಿ ಭಾರತ ಟಿ20 ತಂಡದ ನಾಯಕರಾಗಿ ಸೂರ್ಯಕುಮಾರ್ ಯಾದವ್ ಅವರನ್ನು ನೇಮಕ ಮಾಡಲಾಗಿದೆ.
IND vs SL T20: ಶ್ರೀಲಂಕಾ ವಿರುದ್ಧದ ಎರಡನೇ ಟಿ20 ಪಂದ್ಯದಲ್ಲಿ ಸಂಜು ಸ್ಯಾಮ್ಸನ್ ತಂಡದ ಶುಭಮನ್ ಗಿಲ್ ಅವರನ್ನು ತಂಡದಿಂದ ಹೊರದಬ್ಬಿ, ಪ್ಲೇಯಿಂಗ್ XI ಅಲ್ಲಿ ಚ್ಯಾನ್ಸ್ ಗಿಟ್ಟಿಸಿಕೊಂಡಿದ್ದರು. ಸಿಕ್ಕ ಅಪರೂಪದ ಅವಕಾಶದಲ್ಲಿ ಛಾಪು ಮೂಡಿಸುವ ನಿರೀಕ್ಷೆಯಲ್ಲಿದ್ದ ಅವರು ಕಳಪೆ ಪ್ರದರ್ಶನ ನೀಡಿ ನಿರಾಸೆ ಮೂಡಿಸಿದರು. ಇದರ ಬೆನ್ನಲ್ಲೇ ಅಭಿಮಾನಿಗಳು ತೀವ್ರ ಟೀಕೆ ಮಾಡುತ್ತಿದ್ದಾರೆ.
IND vs SL T20: ಭಾರತ ಟಿ20 ತಂಡದ ನೂತನ ನಾಯಕರಾಗಿ ಹಾರ್ದಿಕ್ ಪಾಂಡ್ಯ ನೇಮಕವಾಗುತ್ತಾರೆ ಎಂದು ನಿರೀಕ್ಷಿಸಲಾಗಿದ್ದ ಸಂದರ್ಭದಲ್ಲಿ ಸೂರ್ಯಕುಮಾರ್ ಯಾದವ್ ಅವರನ್ನು ಅನಿರೀಕ್ಷಿತವಾಗಿ ನಾಯಕನ ಪಟ್ಟ ನೀಡಿ ಪಟ್ಟಾಭಿಷೇಕ ಮಾಡಲಾಯಿತು. ಇದರಿಂದ ಹಾರ್ದಿಕ್ ಪಾಂಡ್ಯ ಮಾನಸಿಕವಾಗಿ ನೊಂದಿದ್ದಾರೆ ಎನ್ನಲಾಗಿದೆ.
Ruturaj Gaikwad Captain: ಶ್ರೀಲಂಕಾ ಪ್ರವಾಸಕ್ಕೆ ಟೀಂ ಇಂಡಿಯಾವನ್ನು ಘೋಷಿಸಲಾಗಿದ್ದು, ಹೊಸ ಕೋಚ್ ಗೌತಮ್ ಗಂಭೀರ್ ಬಗ್ಗೆ ದೊಡ್ಡ ಪ್ರಶ್ನೆ ಉದ್ಭವಿಸಿತ್ತು. ಆದರೆ, ಈ ಪ್ರಶ್ನೆಗೆ ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಸುದ್ದಿಗೋಷ್ಠಿಯಲ್ಲಿ ಸ್ಪಷ್ಟನೆ ನೀಡಿದ್ದರು.
IND vs SL: ಟೀಮ್ ಇಂಡಿಯಾದ ಕೋಚ್ ಆಗಿ ಗೌತಮ್ ಗಂಭೀರ್ ಅವರ ಪ್ರಯಾಣವು ಟೀಕೆಗಳೊಂದಿಗೆ ಪ್ರಾರಂಭವಾಯಿತು. ಶ್ರೀಲಂಕಾ ತಂಡದ ಆಯ್ಕೆಯಲ್ಲಿ ಕೆಲವು ಪ್ರಮುಖ ನಿರ್ಧಾರಗಳನ್ನು ಅಭಿಮಾನಿಗಳು ಮತ್ತು ಕ್ರಿಕೆಟ್ ತಜ್ಞರು ಅವರನ್ನು ಪ್ರಶ್ನಿಸುತ್ತಿದ್ದಾರೆ.
IND vs SL:ಮುಂಬರುವ ಶ್ರೀಲಂಕಾ ಪ್ರವಾಸಕ್ಕೆ ಆಯ್ಕೆಯಾಗಿರುವ ಭಾರತ ತಂಡದ ಬಗ್ಗೆ ತೀವ್ರವಾಗಿ ಚರ್ಚೆ ಶುರುವಾಗಿದೆ. ಅಜಿತ್ ಅಗರ್ಕರ್ ಮತ್ತು ಕೋಚ್ ಗೌತಮ್ ಗಂಭೀರ್ ನೇತೃತ್ವದ ಆಯ್ಕೆ ಸಮಿತಿಯಿಂದ ಕೆಲವು ಆಟಗಾರರಿಗೆ ಅನ್ಯಾಯವಾಗಿದೆ ಎಂದು ಟೀಕಿಸಲಾಗಿದೆ. ರನ್ಗಳ ಸುರಿಮಳೆಗೈದು ಎಲ್ಲರನ್ನು ಇಂಪ್ರೆಸ್ ಮಾಡಿದ್ದ ಅಭಿಷೇಕ್ ಶರ್ಮಾ ಹಾಗೂ ರುತುರಾಜ್ ಗಾಯಕ್ವಾಡ್ ನಂತಹ ಕ್ರಿಕೆಟಿಗರನ್ನು ತಂಡದಿಂದ ಕೈಬಿಟ್ಟಿರುವುದು ಅಚ್ಚರಿ ಮೂಡಿಸಿದೆ.
IND vs ZIM: ಜಿಂಬಾಬ್ವೆ ಪ್ರವಾಸದ ಐದು ಪಂದ್ಯಗಳ ಸರಣಿಯಲ್ಲಿ ಟೀಂ ಇಂಡಿಯಾ ಅಂತಿಮ ಕದನಕ್ಕೆ ಸಜ್ಜಾಗಿದೆ. ಐದು ಪಂದ್ಯಗಳ ಟಿ20 ಸರಣಿ ಇದಾಗಿದ್ದು ನಾಲ್ಕು ಪಂದ್ಯಗಳು ಮುಗಿದಿದೆ, ಇನ್ನೂ ಒಂದು ಪಂದ್ಯ ಬಾಕಿ ಇರುವಂತೆಯೇ 3-1 ಅಂತರದಲ್ಲಿ ಭಾರತ ತಂಡ ಪಂದ್ಯ ವಶಪಡಿಸಿಕೊಂಡಿದೆ. ಶುಭಮನ್ ಗಿಲ್ ನೇತೃತ್ವದ ತಂಡ ಭಾನುವಾರ ನಡೆಯಲಿರುವ ಅಂತಿಮ ಪಂದ್ಯದಲ್ಲಿ ಜಿಂಬಾಬ್ವೆ ತಂಡವನ್ನು ಎದುರಿಸಲಿದೆ. ಸರಣಿ ಗೆದ್ದ ಹಿನ್ನಲೆಯಲ್ಲಿ ಟೀಂ ಇಂಡಿಯಾ ತಂಡದಲ್ಲಿ ಬೆಂಚ್ ಪ್ಲೇಯರ್ಗಳಿಗೆ ಅವಕಾಶ ಕೊಡುವ ಸಾಧ್ಯತೆ ಇದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.