ಕೊರೋನಾ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ದ್ವಿತೀಯ ಪಿಯುಸಿ ಮತ್ತು ಎಸ್ಎಸ್ಎಲ್ಸಿ ಪರೀಕ್ಷೆಗಳು ಮುಂದೂಡಲಾಗಿದ್ದು, ಇದೀಗ ಜುಲೈ ಮತ್ತು ಆಗಸ್ಟ್ ತಿಂಗಳಲ್ಲಿ ಪರೀಕ್ಷೆ ನಡೆಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಈಗ ಹರಿದಾಡುತ್ತಿರುವ ಸುದ್ದಿಗಳಲ್ಲಿ ಯಾವುದೇ ಹುರುಳು ಇಲ್ಲ. ವಿದ್ಯಾರ್ಥಿಗಳ ಭವಿಷ್ಯ ಹಾಗೂ ಯೋಗಕ್ಷೇಮವನ್ನು ಗಮನದಲ್ಲಿರಿಸಿ ಮುಂದಿನ ದಿನಗಳಲ್ಲಿ ಅವರ ಒಳಿತಿಗೆ ಪೂರಕವಾದ ನಿರ್ಣಯ ತೆಗೆದುಕೊಳ್ಳಲಾಗುವುದು.
ಮೇ ಮಧ್ಯದಲ್ಲಿ ಕೊರೋನಾ ಸೊಂಕು ಮತ್ತಷ್ಟು ಹೆಚ್ಚಳವಾಗಲಿದೆ ಎಂದು ತಜ್ಞರು ಎಚ್ಚರಿಸಿರುವುದರಿಂದ ನಿಗದಿಯಾಗಿರುವ ದಿನಾಂಕಗಳ ಪ್ರಕಾರ ಪರೀಕ್ಷೆ ನಡೆಸುವುದು ಸೂಕ್ತವಾ ಅಥವಾ ಪರೀಕ್ಷೆ ಮುಂದೂಡಿಕೆ ಮಾಡಬಹುದಾ? ಪರೀಕ್ಷೆಗಳನ್ನು ನಡೆಸಲೇಬೇಕು ಎನ್ನುವುದಾದರೆ ಯಾವ್ಯಾವ ಮುನ್ನೆಚ್ಚರಿಕಾ ಕ್ರಮಗಳನ್ನು ಅನುಸರಿಸಬೇಕು? ಎಂಬ ಬಗ್ಗೆ ಚರ್ಚೆ ನಡೆಯಲಿದೆ.
ರಾಜ್ಯದಲ್ಲಿ ದಿನೇ ದಿನೇ ಕರೋನಾವೈರಸ್ ಎರಡನೇ ಅಲೆಯ ಆತಂಕ ಹೆಚ್ಚಾಗುತ್ತಿದ್ದು ವಿದ್ಯಾರ್ಥಿಗಳ ಆರೋಗ್ಯವನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಮಾಹಿತಿ ನೀಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.