ಕೇರಳದ ಶಬರಿಮಲೆ ದೇವಸ್ಥಾನಕ್ಕೆ ಎಲ್ಲ ವಯೋಮಾನದ ಮಹಿಳೆಯರಿಗೆ ಪ್ರವೇಶದ ನೀಡುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಗಳ ವಿಚಾರವಾಗಿ ತೀರ್ಪು ನೀಡಿದ ಸುಪ್ರೀಂಕೋರ್ಟ್ ವಿಸ್ತೃತ ಏಳು ನ್ಯಾಯಾಧೀಶರ ಪೀಠಕ್ಕೆ ವರ್ಗಾಯಿಸುವುದಾಗಿ ಹೇಳಿದೆ.
ಮಹಿಳೆಯರಿಗೂ ಕೂಡ ಪ್ರವೇಶದ ಅವಕಾಶ ನೀಡಿ ತೀರ್ಪು ನೀಡಿದ್ದ ಸುಪ್ರೀಂಕೋರ್ಟ್ ಮುಂದೆ ಹಲವು ಮರುಪರಿಶೀಲನಾ ಅರ್ಜಿಗಳು ಸಲ್ಲಿಕೆಯಾಗಿದ್ದವು.ಆದ್ದರಿಂದ ಈ ವಿಚಾರವಾಗಿ ಸುಪ್ರೀಂಕೋರ್ಟ್ ಇಂದು ಈ ಎಲ್ಲ ಅರ್ಜಿಗಳ ವಿಚಾರಣೆಯನ್ನು ನಡೆಸಿದೆ.
ಶನಿವಾರದಂದು ಅಯ್ಯಪ್ಪ ದೇವಾಲಯದ ಯಾತ್ರಾ ಸ್ಥಳದಲ್ಲಿ ಸಂಘ ಪರಿವಾರದ ಹಿರಿಯ ನಾಯಕನನ್ನು ಬಂಧಿಸಿರುವ ಹಿನ್ನೆಲೆಯಲ್ಲಿ ಬಲಪಂಥೀಯ ಹಿಂದೂ ಸಂಘಟನೆಗಳು ಕೇರಳದಲ್ಲಿ ಮುಷ್ಕರಕ್ಕೆ ಕರೆ ನೀಡಿದೆ.
ಶಬರಿಮಲೈದಲ್ಲಿರುವ ಅಯ್ಯಪ್ಪ ಸ್ವಾಮಿ ದೇವಸ್ತಾನಕ್ಕೆ ಎಲ್ಲಾ ವಯಸ್ಸಿನ ಮಹಿಳೆಯರನ್ನು ಪ್ರವೇಶಿಸಲು ಮತ್ತು ಆರಾಧಿಸಲು ಅರ್ಹ ಎಂದು ನೀಡಿರುವ ಸುಪ್ರೀಂ ಕೋರ್ಟ್ ಆದೇಶವನ್ನು ಕೇರಳ ಸರ್ಕಾರ ಪ್ರಶ್ನಿಸುವುದಿಲ್ಲ ಎಂದು ಸ್ಪಷ್ಟಪಡಿಸಿದೆ. ಬದಲಾಗಿ ಮಹಿಳಾ ಭಕ್ತರು ದೇವಾಲಯಕ್ಕೆ ಪ್ರವೇಶಿಸಲು ಸೂಕ್ತ ಕ್ರಮ ತೆಗೆದುಕೊಳ್ಳಲಿದೆ ಎಂದು ರಾಜ್ಯ ಸರಕಾರ ಭರವಸೆ ನೀಡಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.