Koragajja songs: ಭಾರೀ ಕುತೂಹಲ ಮೂಡಿಸಿರುವ ಸುಧೀರ್ ಅತ್ತಾವರ್ ನಿರ್ದೇಶನದ "ಕೊರಗಜ್ಜ" ಚಿತ್ರಕ್ಕೆ ಶ್ರೇಯಾ ಘೋಷಾಲ್, ಶಂಕರ್ ಮಹಾದೇವನ್ ಸೇರಿ ದೇಶದ ಘಟಾನುಘಟಿ ಗಾಯಕರುಗಳು ಹಾಡುಗಳನ್ನು ಹಾಡಿದ್ದಾರೆ.
Pinaka: ಕಳೆದವರ್ಷದ ಸೂಪರ್ ಹಿಟ್ ಚಿತ್ರಗಳಲ್ಲೊಂದಾದ " ಕೃಷ್ಣಂ ಪ್ರಣಯ ಸಖಿ" ನಂತರ ಗೋಲ್ಡನ್ ಸ್ಟಾರ್ ಗಣೇಶ್ ನಾಯಕನಾಗಿ ನಟಿಸಲಿರುವ ನೂತನ ಚಿತ್ರದ ಶೀರ್ಷಿಕೆ ಅನಾವರಣವಾಗಿದೆ. ಬಹು ನಿರೀಕ್ಷಿತ ಈ ಚಿತ್ರಕ್ಕೆ "ಪಿನಾಕ" ಎಂದು ಹೆಸರಿಡಲಾಗಿದೆ. "ಪಿನಾಕ" ಎಂದರೆ ತ್ರಿಶೂಲ ಎಂದು ಅರ್ಥ. ಈಗಾಗಲೇ ತೆಲುಗು, ಕನ್ನಡ ಸೇರಿದಂತೆ ಅನೇಕ ಭಾಷೆಗಳಲ್ಲಿ 48 ಚಿತ್ರಗಳನ್ನು ನಿರ್ಮಿಸಿರುವ ಟಿ.ಜಿ.ವಿಶ್ವಪ್ರಸಾದ್ ಸಾರಥ್ಯದ ಪೀಪಲ್ ಮೀಡಿಯಾ ಫ್ಯಾಕ್ಟರಿ ನಿರ್ಮಾಣ ಮಾಡುತ್ತಿರುವ 49 ನೇ ಚಿತ್ರವಿದು. ನೃತ್ಯ ನಿರ್ದೇಶಕನಾಗಿ ಜನಪ್ರಿಯರಾಗಿರುವ ಧನಂಜಯ ಮೊದಲ ಬಾರಿಗೆ "ಪಿನಾಕ" ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ.
ನನ್ನ ಹೃದಯಕ್ಕೆ ಅತ್ಯಂತ ಹತ್ತಿರಾಗಿರುವ ‘ಹೆಬ್ಬುಲಿ ಕಟ್’ ಚಿತ್ರವನ್ನು ನಾಡಿನ ಜನತೆಗೆ ಅರ್ಪಿಸಲು ಅತ್ಯಂತ ಖುಷಿ ಮತ್ತು ಹೆಮ್ಮೆಯಿದೆ. ಭೀಮರಾವ್ ಪಿ ಅವರ ನಿರ್ದೇಶನದ ಈ ಚಿತ್ರ ನನ್ನ ಕಡೆಯಿಂದ ಕನ್ನಡಿಗರಿಗೆ ಹೊಸ ವರ್ಷದ ಕಾಣಿಕೆ ಮತ್ತು ಬದ್ಧತೆ ಎಂದು ಹೇಳಿಕೊಂಡಿದ್ದರು.
Balaramana Dinagalu: ಪದ್ಮಾವತಿ ಫಿಲಂಸ್ ಲಾಂಛನದಲ್ಲಿ ಪದ್ಮಾವತಿ ಜಯರಾಂ ಹಾಗೂ ಶ್ರೇಯಸ್ ಅವರು ಅಪಾರವೆಚ್ಚದಲ್ಲಿ ಅದ್ದೂರಿಯಾಗಿ ನಿರ್ಮಿಸುತ್ತಿರುವ ಹಾಗೂ "ಆ ದಿನಗಳು" ಖ್ಯಾತಿಯ ಕೆ.ಎಂ.ಚೈತನ್ಯ ನಿರ್ದೇಶನದಲ್ಲಿ ಟೈಗರ್ ವಿನೋದ್ ಪ್ರಭಾಕರ್ ನಾಯಕರಾಗಿ ನಟಿಸುತ್ತಿರುವ ಚಿತ್ರ "ಬಲರಾಮನ ದಿನಗಳು". ಇದು ವಿನೋದ್ ಪ್ರಭಾಕರ್ ಅಭಿನಯದ 25 ನೇ ಚಿತ್ರ ಕೂಡ.
Opera Song: "ಜಾಲಿಡೇಸ್" ಚಿತ್ರದ ಖ್ಯಾತಿಯ ನಿರಂಜನ್ ಶೆಟ್ಟಿ ನಾಯಕನಾಗಿ ನಟಿಸಿರುವ "31 DAYS" ಚಿತ್ರಕ್ಕಾಗಿ ವಿ.ಮನೋಹರ್ ಬರೆದು, ಹಾಡಿ, ಸಂಗೀತ ಸಂಯೋಜಿಸಿ, ನಿರಂಜನ್ ಶೆಟ್ಟಿ ಅವರೊಂದಿಗೆ ನಟಿಸಿರುವ ಒಪೇರ ಶೈಲಿಯ ಗೀತೆ ಡಿಸೆಂಬರ್ 31 ನೇ ತಾರೀಖು ಬಿಡುಗಡೆಯಾಯಿತು. ಇದು ವಿ.ಮನೋಹರ್ ಅವರು ಸಂಗೀತ ಸಂಯೋಜಿಸಿರುವ 150ನೇ ಚಿತ್ರ. ಹಾಡು ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.
Sanchit Sanjeev: ಮ್ಯಾಕ್ಸ್ ಸಿನಿಮಾದ ಬ್ಲಾಕ್ ಬ್ಲಸ್ಟರ್ ಸಕ್ಸಸ್ ಖುಷಿಯಲ್ಲಿರುವ ಕಿಚ್ಚ ಸುದೀಪ್ ಅಭಿಮಾನಿಗಳಿಗೆ ಮತ್ತೊಂದು ಭರ್ಜರಿ ಸುದ್ದಿ ಕೊಟ್ಟಿದ್ದಾರೆ. ಹೊಸ ವರ್ಷಕ್ಕೆ ಅಭಿನಯ ಚಕ್ರವರ್ತಿ ಹೊಸ ಸಿನಿಮಾ ಅನೌನ್ಸ್ ಮಾಡಿದ್ದಾರೆ. ಕಿಚ್ಚನ ಕೊಟ್ಟ ಸುದ್ದಿ ಕೇಳಿ ಫ್ಯಾನ್ಸ್ ಫುಲ್ ಖುಷ್ ಆಗಿದ್ದಾರೆ. ಅಂದ್ಹಾಗೆ ಇದು ಕಿಚ್ಚ ನಾಯಕನಾಗಿ ನಟಿಸುತ್ತಿರುವ ಸಿನಿಮಾ ಅಲ್ಲ. ಬದಲಾಗಿ ಸುದೀಪ್ ನಿರ್ಮಾಣ ಮಾಡುತ್ತಿರುವ ಚಿತ್ರ.
Rank Star: ‘Rank Star’ ಗುರುನಂದನ್, ಮಂಡಿಮನೆ ಟಾಕೀಸ್ ಎಂಬ ನಿರ್ಮಾಣ ಸಂಸ್ಥೆಯನ್ನು ಪ್ರಾರಂಭಿಸಿ, ಅದರಡಿ ಸ್ನೇಹಿತರೊಂದಿಗೆ ಜೊತೆಗೂಡಿ ಒಂದು ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ಈ ಚಿತ್ರಕ್ಕೆ ಅಶ್ವಿನಿ ಪುನೀತ್ ರಾಜ್ಕುಮಾರ್ ಕೆಲವು ತಿಂಗಳುಗಳ ಹಿಂದೆ ಕ್ಲ್ಯಾಪ್ ಮಾಡುವ ಮೂಲಕ ಚಾಲನೆ ನೀಡಿದ್ದರು. ಇದೀಗ ಚಿತ್ರದ ಚಿತ್ರೀಕರಣ ಮುಕ್ತಾಯದ ಹಂತಕ್ಕೆ ಬಂದಿದೆ.
Rage of rudra: ತೆಲುಗು ನಿರ್ಮಾಪಕ ಟಿಜಿ ವಿಶ್ವ ಪ್ರಸಾದ್ ನೇತೃತ್ವದ ಪೀಪಲ್ ಮೀಡಿಯಾ ಫ್ಯಾಕ್ಟರಿ ಇದೀಗ ಸ್ಯಾಂಡಲ್ವುಡ್ನಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ಅವರ ಸಿನಿಮಾ ನಿರ್ಮಾಣ ಮಾಡುತ್ತಿದೆ. ಇದೀಗ ಈ #PMF49ನೇ ಪ್ರಾಜೆಕ್ಟ್ನ "ರೇಜ್ ಆಫ್ ರುದ್ರ" ಪೋಸ್ಟರ್ ಅನಾವರಣಗೊಂಡಿದೆ. ತೆಲುಗಿನಲ್ಲಿ ಈಗಾಗಲೇ ಬ್ಲಾಕ್ಬಸ್ಟರ್ ಹಿಟ್ಗಳನ್ನು ನೀಡಿರುವ ಈ ಪೀಪಲ್ ಮೀಡಿಯಾ ಫ್ಯಾಕ್ಟರಿ ಸಂಸ್ಥೆ, ಈಗ ಈ ಬಹು ನಿರೀಕ್ಷಿತ ಸಿನಿಮಾ ಮೂಲಕ ಕನ್ನಡ ಚಿತ್ರರಂಗವನ್ನು ಮತ್ತೊಂದು ಮಜಲಿಗೆ ಕೊಂಡೊಯ್ಯಲು ಸಜ್ಜಾಗಿದೆ.
Shiva Shiva Song: KVN ಪ್ರೊಡಕ್ಷನ್ಸ್ ನಿರ್ಮಾಣದ... ಜೋಗಿ ಪ್ರೇಮ್ ನಿರ್ದೇಶನದ ಧ್ರುವ ಸರ್ಜಾ ಅಭಿನಯದ ಅರ್ಜುನ್ ಜನ್ಯ ಸಂಗೀತ ಸಂಯೋಜನೆಯ ಕೆಡಿ ಚಿತ್ರದ ಶಿವ ಶಿವ ಹಾಡು ದಿನೇ ದಿನೇ ಇಡೀ ಇಂಡಿಯಾ ತುಂಬೆಲ್ಲಾ ಹಲ್ ಚಲ್ ಎಬ್ಬಿಸಿದೆ... ಹಳೇ ದಾಖಲೆಗಳನ್ನೆಲ್ಲಾ ಉಡೀಸ್ ಮಾಡಿ ಹೊಸ ಹಿಸ್ಟರಿ ಕ್ರಿಯೇಟ್ ಮಾಡಿದೆ..
Karavali Teaser: 'ಕರಾವಳಿ' ಸ್ಯಾಂಡಲ್ ವುಡ್ ನಲ್ಲಿ ಭಾರಿ ನಿರೀಕ್ಷೆ ಮೂಡಿಸಿರುವ ಸಿನಿಮಾ. 2025ರ ಬಹುನಿರೀಕ್ಷೆಯ ಭಾರತೀಯ ಸಿನಿಮಾಗಳ ಪಟ್ಟಿಯಲ್ಲಿ ಕರಾವಳಿ ಸಿನಿಮಾ ಕೂಡ ಜಾಗ ಗಿಟ್ಟಿಸಿಕೊಂಡಿರುವುದು ವಿಶೇಷ. ಪೋಸ್ಟರ್ಸ್ ಮತ್ತು ಟೀಸರ್ ಮೂಲಕ ಈಗಾಗಲೇ ಕುತೂಹಲ ಹೆಚ್ಚಿಸಿರುವ ಕರಾವಳಿ ಹೊಸ ವರ್ಷದ ಪ್ರಯುಕ್ತ ಮತ್ತೊಂದು ಭರ್ಜರಿ ಟೀಸರ್ ಮೂಲಕ ಸಿನಿಅಭಿಮಾನಿಗಳ ಮುಂದೆ ಬಂದಿದೆ. ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ನಟನೆಯ ಗುರುದತ್ ಗಾಣಿಗ ನಿರ್ದೇಶನದ ಕರಾವಳಿಯ ವಿಭಿನ್ನವಾದ ಟೀಸರ್ ಆಕರ್ಷಕವಾಗಿದ್ದು ಚಿತ್ರದ ಮೇಲಿನ ನಿರೀಕ್ಷೆಯನ್ನು ದುಪ್ಪಟ್ಟು ಮಾಡಿದೆ.
Sanju weds Geeta: ಪವಿತ್ರ ಇಂಟರ್ ನ್ಯಾಷನಲ್ ಮೂವೀಮೇಕರ್ಸ್ ಅಡಿಯಲ್ಲಿ ಚಲವಾದಿ ಕುಮಾರ್ ಅವರ ನಿರ್ಮಾಣದ ಬಹು ನಿರೀಕ್ಷಿತ ಸಂಜು ವೆಡ್ಸ್ ಗೀತಾ-2 ಜನವರಿ 10ರಂದು ಪ್ರಪಂಚದಾದ್ಯಂತ ಬಿಡುಗಡೆಯಾಗಲಿದೆ. ಶಿಡ್ಲಘಟ್ಟದ ರೇಶ್ಮೆ ಬೆಳೆಗಾರರ ವಿಷಯವನ್ನಿಟ್ಟುಕೊಂಡು ನವಿರಾದ ಪ್ರೇಮಕಥೆಯನ್ನು ನಿರ್ದೇಶಕ ನಾಗಶೇಖರ್ ಈ ಚಿತ್ರದಲ್ಲಿ ಹೇಳಲು ಪ್ರಯತ್ನಿಸಿದ್ದಾರೆ. ಆನಂದ ಆಡಿಯೋ ಮೂಲಕ ರಿಲೀಸಾಗಿರುವ ಹಾಡುಗಳು ಕೇಳುಗರ ಮನ ಗೆದ್ದಿವೆ. ಇದೀಗ ಈ ಚಿತ್ರದ ಮತ್ತೊಂದು ಹಾಡನ್ನು ಕಿಚ್ಚ ಸುದೀಪ್ ಬಿಡುಗಡೆಗೊಳಿಸಿ ಮಾತನಾಡುತ್ತ ಕಿಟ್ಟಿ ಹಾಗೂ ನಾಗಶೇಖರ್ ಸೇರಿ ಈ ಸಿನಿಮಾ ಮಾಡಿದ್ದಾರೆ. ಹಿಂದೆ ಸಂಜ ವೆಡ್ಸ್ ಗೀತಾ ಸಕ್ಸಸ್ ಆಗಿತ್ತು.
Guns and Roses: ಸುಮಾರು ವರ್ಷಗಳಿಂದ ಕನ್ನಡದ ಹೆಸರಾಂತ ಚಿತ್ರಗಳಿಗೆ ಕಥೆ ಬರೆದಿರುವ ಅಜಯ್ ಕುಮಾರ್ ಅವರ ಪುತ್ರ ಅರ್ಜುನ್, " ಗನ್ಸ್ ಅಂಡ್ ರೋಸಸ್" ಚಿತ್ರದ ಮೂಲಕ ನಾಯಕನಾಗಿ ಚಿತ್ರರಂಗಕ್ಕೆ ಪ್ರವೇಶ ಮಾಡಿದ್ದಾರೆ. ಇವರ ನಟನೆಯ ಮೊದಲ ಚಿತ್ರ ಇದ್ದಾಗಿದ್ದು, 2025 ರ ಜನವರಿ 3, ಹೊಸವರ್ಷದ ಮೊದಲ ಚಿತ್ರವಾಗಿ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಹೆಚ್ ಆರ್ ನಟರಾಜ್ ಅವರು ದ್ರೋಣ ಕ್ರಿಯೇಷನ್ಸ್ ಲಾಂಛನದಲ್ಲಿ ಈ ಚಿತ್ರವನ್ನು ನಿರ್ಮಿಸಿದ್ದು, ಶ್ರೀನಿವಾಸ್ ಕುಮಾರ್ ನಿರ್ದೇಶಿಸಿದ್ದಾರೆ. ಚಿತ್ರ ಬಿಡುಗಡೆಗೂ ಮುನ್ನ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು.
Chandan Shetty 2nd Marriage: ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ಅವರು ಪ್ರೀತಿಸಿ ಮದುವೆಯಾದವರು. ಆರಂಭದಲ್ಲಿ ಎಲ್ಲವೂ ಚೆನ್ನಾಗಿಯೇ ಇತ್ತು. ಕಾಲಾನಂತರದಲ್ಲಿ ಇಬ್ಬರ ಜೀವನದಲ್ಲಿ ಬಿರುಗಾಳಿ ಎದ್ದ ಕಾರಣ ಈ ಜೋಡಿ ಪರಸ್ಪರ ಒಪ್ಪಿಗೆ ಮೇರೆಗೆ ಡಿವೋರ್ಸ್ ಪಡೆದುಕೊಂಡಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.