Ayodhya Ram Mandir : ಯುಬಿಟಿ ಶಿವಸೇನೆ ಮುಖ್ಯಸ್ಥ ಸಂಜಯ್ ರಾವತ್ ಅವರು ಅಯೋಧ್ಯೆ ರಾಮಮಂದಿರ ವಿಚಾರವಾಗಿ ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ. ರಾಮಮಂದಿರ ಉದ್ಘಾಟನಾ ಸಮಾರಂಭದಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ ಎಂದು ದೂರಿದ್ದಾರೆ. ಈ ಕುರಿತ ಸಂಪೂರ್ಣ ವಿವರ ಇಲ್ಲಿದೆ
ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ನ ದೊಡ್ಡ ಗೆಲುವಿನ ಒಂದು ದಿನದ ನಂತರ, ಶಿವಸೇನೆ ನಾಯಕ ಸಂಜಯ್ ರಾವತ್ ಅವರು ಭಾನುವಾರ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದು, ದೇಶದಲ್ಲಿ ಮೋದಿ ಅಲೆ ಅಂತ್ಯಗೊಂಡಿದೆ ಎಂದು ಹೇಳಿದ್ದಾರೆ.
Karnataka Assembly Election: ಕರ್ನಾಟಕ ವಿಧಾನಸಭಾ ಚುನಾವಣೆಯ ಆರಂಭಿಕ ಟ್ರೆಂಡ್ಗಳಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ. ಈ ಮುನ್ನಡೆಯ ಬಳಿಕ ಇದೀಗ ವಿವಿಧ ಪಕ್ಷಗಳ ನಾಯಕರುಗಳಿಂದ ಪ್ರತಿಕ್ರಿಯೆಗಳು ಬರಲಾರಂಭಿಸಿವೆ. ಈ ಕುರಿತು ತಮ್ಮ ಪ್ರತಿಕ್ರಿಯೆ ನೀಡಿರುವ ಮಹಾರಾಷ್ಟ್ರ ಶಿವಸೇನೆಯ ಉದ್ಧವ್ ಬಣದ ಮುಖಂಡ ಸಂಜಯ್ ರಾವುತ್ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ ಮತ್ತು ಕರ್ನಾಟಕದಲ್ಲಿ ಈ ಬಾರಿ ನಡೆದಿದ್ದು 2024 ರಲ್ಲೂ ಪುನರಾವರ್ತನೆಯಾಗಲಿದೆ ಎಂದು ಹೇಳಿದ್ದಾರೆ.
ಮಹಾರಾಷ್ಟ್ರ ರಾಜಕೀಯ ಹೈಡ್ರಾಮಾ: ಮುಂದಿನ 15-20 ದಿನಗಳಲ್ಲಿ ಮಹಾರಾಷ್ಟ್ರದ ಶಿಂಧೆ ಸರ್ಕಾರ ಪತನವಾಗಲಿದೆ ಎಂದು ಶಿವಸೇನೆಯ ಉದ್ಧವ್ ಬಣದ ಪ್ರಮುಖ ನಾಯಕರೊಬ್ಬರು ಹೇಳಿದ್ದಾರೆ. ಯಾವ ಆಧಾರದಲ್ಲಿ ಅವರು ಈ ದೊಡ್ಡ ಹೇಳಿಕೆ ನೀಡಿದ್ದಾರೆ ಎಂದು ತಿಳಿಯಿರಿ.
Sanjay Raut: ಮೊದಲು ಅಜೀತ್ ಪವಾರ್ ಮತ್ತು ಇದೀಗ ಅವರ ಹೇಳಿಕೆಗೆ ಸಂಜಯ್ ರಾವುತ್ ಪ್ರತಿಕ್ರಿಯೆ ಮಹಾರಾಷ್ಟ್ರದ ರಾಜಕೀಯದಲ್ಲಿ ಭಾರಿ ಸಂಚಲನಕ್ಕೆ ಕಾರಣವಾಗಿದೆ. ಇದು ಮಹಾರಾಷ್ಟ್ರದ ಸಿಎಂ ಏಕನಾಥ್ ಶಿಂಧೆ ಅವರಿಗೆ ಒಂದು ಸ್ಪಷ್ಟ ಸೂಚನೆ ಎಂದೇ ಬಿಂಬಿಸಲಾಗುತ್ತಿದೆ.
ಛತ್ರಪತಿ ಶಿವಾಜಿ ಮಹಾರಾಜರ ವಿರುದ್ಧ ಕೆಲವು ಸಾರ್ವಜನಿಕ ವ್ಯಕ್ತಿಗಳು ಮಾಡಿದ ಆಕ್ಷೇಪಾರ್ಹ ಹೇಳಿಕೆಗಳ ಬಗ್ಗೆ ಬಿಜೆಪಿ ಮೌನವಹಿಸಿದೆ.ಮರಾಠಯೋಧನಿಗೆ ಮಾಡಿರುವ ಅವಮಾನಗಳಿಗೆ ಪ್ರತಿಕಾರ ತೀರಿಸಿಕೊಳ್ಳಲಾಗುವುದು ಎಂದು ರಾಜ್ಯಸಭಾ ಸಂಸದ ಸಂಜಯ್ ರಾವುತ್ ಎಚ್ಚರಿಸಿದ್ದಾರೆ.
ಶಿವಸೇನೆಯ ಉದ್ಧವ್ ಠಾಕ್ರೆ ಬಣದ ಹಿರಿಯ ನಾಯಕ ಮತ್ತು ಮಾಜಿ ಮುಖ್ಯಮಂತ್ರಿ ಅವರ ಆಪ್ತರಲ್ಲಿ ಒಬ್ಬರಾದ ಸಂಜಯ್ ರಾವುತ್ ಅವರು ಜೈಲಿನಲ್ಲಿದ್ದಾಗ 10 ಕೆಜಿ ತೂಕವನ್ನು ಕಳೆದುಕೊಂಡಿದ್ದಾರೆ ಎಂದು ಹೇಳಿದ್ದಾರೆ.
ಮಹಾರಾಷ್ಟ್ರದ ರಾಜಕೀಯ ವಾತಾವರಣ ಕಲುಷಿತಗೊಂಡಿದೆ, ಅಲ್ಲಿ ಅನೇಕ ಜನರು ಪರಸ್ಪರ ನಾಶ ಮಾಡಲು ಹೊರಟಿದ್ದಾರೆ ಎಂದು ಶಿವಸೇನಾ ಸಂಸದ ಸಂಜಯ್ ರಾವುತ್ ಭಾನುವಾರ ಹೇಳಿದ್ದಾರೆ. ನವೆಂಬರ್ 9 ರಂದು ಜೈಲಿನಿಂದ ಹೊರಬಂದ ನಂತರ ಅವರು ಇದನ್ನು ಮತ್ತೊಮ್ಮೆ ಅರಿತುಕೊಂಡರು ಎಂದು ರಾವತ್ ಹೇಳಿದರು.
ಪತ್ರಾ ಚಾಲ್ ಅವ್ಯವಹಾರ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದ (ಇಡಿ) ವಶದಲ್ಲಿರುವ ಶಿವಸೇನಾ ಸಂಸದ ಸಂಜಯ್ ರಾವುತ್ ಅವರ ನ್ಯಾಯಾಂಗ ಬಂಧನವನ್ನು ನವಂಬರ್ 2 ರವರೆಗೆ ವಿಸ್ತರಿಸಲು ಸೂಚಿಸಲಾಗಿದೆ.
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸಂಜಯ್ ರಾವತ್ ಅವರನ್ನು ಆಗಸ್ಟ್ 8ರವರೆಗೆ ಇಡಿ ಕಸ್ಟಡಿಗೆ ಒಪ್ಪಿಸಿ ನ್ಯಾಯಾಲಯ ಇಂದು ಆದೇಶ ಹೊರಡಿಸಿದೆ. ಮತ್ತೊಂದೆಡೆ, ಸಂಜಯ್ ರಾವತ್ ಅವರು ಇಡಿಯ ಹಲವು ಪ್ರಶ್ನೆಗಳಿಂದ ತೊಂದರೆಗೀಡಾಗಿದ್ದಾರೆ.
ಇಡಿ ವಿಚಾರಣೆ ನಡೆಸುತ್ತಿರುವ ಬಗ್ಗೆ ಜೀ ಕನ್ನಡ ನ್ಯೂಸ್ಗೆ ವಿಶೇಷ ಮಾಹಿತಿ ಸಿಕ್ಕಿದೆ. ಮೂಲಗಳಿಂದ ಪಡೆದ ಮಾಹಿತಿಯ ಆಧಾರದ ಮೇಲೆ ಇಡಿ ಸಂಜಯ್ ರಾವತ್ ಗೆ ಒಟ್ಟು 19 ಪ್ರಶ್ನೆಗಳನ್ನ ಕೇಳಿದೆ. ಆ ಪ್ರಶ್ನೆಗಳು, ಉತ್ತರಗಳು ಇಲ್ಲಿದೆ ನೋಡಿ..
ಎರಡು ಪ್ರತ್ಯೇಕ ಪ್ರಕರಣಗಳಲ್ಲಿ, ಜಾರಿ ನಿರ್ದೇಶನಾಲಯವು ಶಿವಸೇನಾ ಸಂಸದ ಸಂಜಯ್ ರಾವುತ್ ಮತ್ತು ಅರ್ಪಿತಾ ಮುಖರ್ಜಿ (ಈಗ ವಜಾಗೊಂಡಿರುವ ಸಚಿವ ಪಾರ್ಥ ಚಟರ್ಜಿ ಅವರ ಆಪ್ತ ಸಹಾಯಕಿ) ಅವರಿಂದ ಅಪಾರ ಪ್ರಮಾಣದ ನಗದು ಮತ್ತು ಚಿನ್ನವನ್ನು ಸಂಗ್ರಹಿಸಿದೆ.
ಶಿವಸೇನಾ ಸಂಸದ ಸಂಜಯ್ ರಾವತ್ ಅವರ ಮುಂಬೈ ಮನೆಗೆ ಜಾರಿ ನಿರ್ದೇಶನಾಲಯ(ಇಡಿ)ದ ಅಧಿಕಾರಿಗಳು ಬಂದು ವಿಚಾರಣೆ ನಡೆಸುತ್ತಿದ್ದಾರೆ. ಸಂಜಯ್ ರಾವತ್ ತನಿಖೆಗೆ ಸಹಕರಿಸುತ್ತಿಲ್ಲ ಎಂದು ಆರೋಪಿಸಲಾಗಿದೆ.
ಶಿವಸೇನಾ ನಾಯಕರ ಬಂಡಾಯದ ನಂತರ ಉದ್ಧವ್ ಠಾಕ್ರೆ ನೇತೃತ್ವದ ಮಹಾ ವಿಕಾಸ್ ಅಘಾಡಿ (ಎಂವಿಎ) ಪತನಗೊಂಡ ಕೆಲವು ದಿನಗಳ ನಂತರ, ಸಂಜಯ್ ರಾವತ್ ಅವರು ತಮಗೂ ಕೂಡ ಗೌಹಾತಿಯಲ್ಲಿರುವ ಏಕನಾಥ್ ಶಿಂಧೆ ಹಾಗೂ ಇತರ ಬಂಡಾಯ ಶಾಸಕರನ್ನು ಸೇರಲು ಆಫರ್ ನೀಡಲಾಗಿತ್ತು ಎಂದು ಅವರು ಹೇಳಿದರು.
Sanjay Raut to Appear Before ED: ಸಂಜಯ್ ರಾವತ್ ಇಂದು ಜಾರಿ ನಿರ್ದೇಶನಾಲಯದ ಮುಂದೆ ಹಾಜರಾಗಲಿದ್ದಾರೆ. ಪತ್ರಾ ಚಾಲ್ ಭೂ ಹಗರಣ ಪ್ರಕರಣದಲ್ಲಿ ವಿಚಾರಣೆಗಾಗಿ ಇಡಿ ರಾವತ್ಗೆ ಸಮನ್ಸ್ ನೀಡಿದೆ.
Maharashtra Political Crisis: ಮಹಾರಾಷ್ಟ್ರದಲ್ಲಿ ಮುಂದುವರೆದ ರಾಜಕೀಯ ಬಿಕ್ಕಟ್ಟು ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಇದೀಗ ಶಿವಸೇನಾ ಸಂಸದ ಸಂಜಯ್ ರಾವುತ್ ಬಂಡಾಯ ಶಾಸಕರ ಬಗ್ಗೆ ವಿವಾದಾತ್ಮಕ ಹೇಳಿಕೆಯೊಂದನ್ನು ನೀಡಿದ್ದಾರೆ.
ಈ ಕಾರಣಕ್ಕೆ ಮಹಾರಾಷ್ಟ್ರದಲ್ಲಿ ಸದ್ಯದಲ್ಲೇ ಭಾರಿ ಬದಲಾವಣೆ ಆಗಲಿದೆ ಎನ್ನಲಾಗುತ್ತಿದೆ. ಈ ರಾಜಕೀಯ ಹಗ್ಗ ಜಗ್ಗಾಟದ ನಡುವೆಯೇ ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್ ದೆಹಲಿಗೆ ತೆರಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.