Sanju weds Geeta: ನಾಗಶೇಖರ್ ನಿರ್ದೇಶನದ "ಸಂಜು ವೆಡ್ಸ್ ಗೀತಾ-2" ಜ.10 ರಂದೇ ಬಿಡುಗಡೆಯಾಗಬೇಕಿತ್ತು. ಆದರೆ ೫ ವರ್ಷಗಳ ಹಿಂದೆ ನಾಗಶೇಖರ್ ನಿರ್ದೇಶಿಸಿದ್ದ ತೆಲುಗು ಚಿತ್ರದ ನಿರ್ಮಾಪಕರು ಹೈದರಾಬಾದ್ ಸಿವಿಲ್ ಕೋರ್ಟ್ ನಲ್ಲಿ ನಾಗಶೇಖರ್ ಮೇಲೆ ಕೇಸ್ ಹಾಕಿ ಈ ಚಿತ್ರವನ್ನು ಬಿಡುಗಡೆ ಮಾಡದಂತೆ ಸ್ಟೇ ತಂದಿದ್ದರು.
Sanju weds Geeta: ಪವಿತ್ರ ಇಂಟರ್ ನ್ಯಾಷನಲ್ ಮೂವೀಮೇಕರ್ಸ್ ಅಡಿಯಲ್ಲಿ ಚಲವಾದಿ ಕುಮಾರ್ ಅವರ ನಿರ್ಮಾಣದ ಬಹು ನಿರೀಕ್ಷಿತ ಸಂಜು ವೆಡ್ಸ್ ಗೀತಾ-2 ಜನವರಿ 10ರಂದು ಪ್ರಪಂಚದಾದ್ಯಂತ ಬಿಡುಗಡೆಯಾಗಲಿದೆ. ಶಿಡ್ಲಘಟ್ಟದ ರೇಶ್ಮೆ ಬೆಳೆಗಾರರ ವಿಷಯವನ್ನಿಟ್ಟುಕೊಂಡು ನವಿರಾದ ಪ್ರೇಮಕಥೆಯನ್ನು ನಿರ್ದೇಶಕ ನಾಗಶೇಖರ್ ಈ ಚಿತ್ರದಲ್ಲಿ ಹೇಳಲು ಪ್ರಯತ್ನಿಸಿದ್ದಾರೆ. ಆನಂದ ಆಡಿಯೋ ಮೂಲಕ ರಿಲೀಸಾಗಿರುವ ಹಾಡುಗಳು ಕೇಳುಗರ ಮನ ಗೆದ್ದಿವೆ. ಇದೀಗ ಈ ಚಿತ್ರದ ಮತ್ತೊಂದು ಹಾಡನ್ನು ಕಿಚ್ಚ ಸುದೀಪ್ ಬಿಡುಗಡೆಗೊಳಿಸಿ ಮಾತನಾಡುತ್ತ ಕಿಟ್ಟಿ ಹಾಗೂ ನಾಗಶೇಖರ್ ಸೇರಿ ಈ ಸಿನಿಮಾ ಮಾಡಿದ್ದಾರೆ. ಹಿಂದೆ ಸಂಜ ವೆಡ್ಸ್ ಗೀತಾ ಸಕ್ಸಸ್ ಆಗಿತ್ತು.
Sanju Weds Geeta 2: ನಿರ್ಮಾಪಕ ಚಲವಾದಿ ಕುಮಾರ್ ಮಾತನಾಡಿ, ನಾಗಶೇಖರ್ ನಾನು ಇಂಜಿನಿಯರಿಂಗ್ ಕ್ಲಾಸ್ ಮೆಟ್ಸ್. ಸ್ಕ್ರಿಪ್ಟ್ ನಲ್ಲೂ ನಾನು ಜೊತೆ ಕುಳಿತಿದ್ದೆ. ಸಿನಿಮಾ ತುಂಬಾ ಚನ್ನಾಗಿ ಬರ್ತಾ ಇದೆ. ಇನ್ನು ಮುಂದೆಯೂ ಒಳ್ಳೆಯ ಸಿನಿಮಾ ಮಾಡುವೆ ಎಂದು ಹೇಳಿದರು.