ಇತ್ತೀಚೆಗೆ ವರಿಷ್ಠರನ್ನು ಭೇಟಿಯಾಗಿರುವ ಸಚಿವ ಕೆ.ಎನ್. ರಾಜಣ್ಣ, ಸಮುದಾಯದ ಮಹತ್ವವನ್ನು ನೆನಪಿಸಿ, ಈ ಬಾರಿಯಾದರೂ ಕೆಪಿಸಿಸಿ ಅಧ್ಯಕ್ಷ ಸ್ಥಾನ ಸತೀಶ್ ಜಾರಕಿಹೊಳಿ ಅವರಿಗೆ ನೀಡಬೇಕೆಂದು ಮನವಿ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.
Belagavi Woman Assault Case: ಬೆಳಗಾವಿ ಮಹಿಳೆಯ ವಿವಸ್ತ್ರ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆಹೊತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ರಾಜೀನಾಮೆ ನೀಡಬೇಕು ಎಂದು ಕರ್ನಾಟಕ ಬಿಜೆಪಿ ಆಗ್ರಹಿಸಿದೆ. ಈ ಬಗ್ಗೆ ಶನಿವಾರ ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ‘ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರಂತೂ ಆಟಕ್ಕುಂಟು ಲೆಕ್ಕಕ್ಕಿಲ್ಲ. ತಾವೊಬ್ಬ ಗೃಹ ಸಚಿವ ಎಂಬುದನ್ನೇ ಮಿನಿಸ್ಟರ್ ಸಾಹೇಬ್ರು ಮರೆತಂತಿದೆ’ ಎಂದು ಟೀಕಿಸಿದೆ.
ಕಾಂಗ್ರೆಸ್ನಲ್ಲಿನ ಅಸಮಾಧಾನಿತರನ್ನು ಎದುರಿಸಲು ಆಪರೇಷನ್ ಬೆದರಿಕೆ ಹಾಕಲಾಗುತ್ತಿದೆ. ಕಾಂಗ್ರೆಸ್ ಪಕ್ಷಕ್ಕೆ 135 ಸೀಟ್ ಬಂದಿದ್ದು, ಬಿಜೆಪಿ, ಜೆಡಿಎಸ್ ಶಾಸಕರ ಅವಶ್ಯಕತೇ ಇಲ್ಲ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಆಪರೇಷನ್ ಕಾಂಗ್ರೆಸ್ ಕುರಿತು ಪ್ರತಿಕ್ರಿಯೆ ನೀಡಿದರು.
ಸವದಿ ನಮ್ಮ ಪಕ್ಷಕ್ಕೆ ಸೇರುವುದರಿಂದ ಖಂಡಿತವಾಗಿ ಕಾಂಗ್ರೆಸ್ಗೆ ಲಾಭವಾಗಲಿದೆ ಎಂದು ಬೆಳಗಾವಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಜೊಳಿ ಹೇಳಿದ್ರು. ಪಕ್ಷದ ಸಿದ್ಧಾಂತ ಒಪ್ಪಿ ಬಂದ್ರೆ ಲಕ್ಷ್ಮಣ ಸವದಿಗೆ ಸ್ವಾಗತ ಮಾಡುತ್ತೇವೆ. ಅವರದ್ದೇ ಆದ ಸಮುದಾಯ ಇದೆ, ಸಚಿವರಾಗಿ ಕೆಲಸ ಮಾಡಿದ್ದಾರೆ. ಈ ಚುನಾವಣೆಯಲ್ಲಿ ಬಿಜೆಪಿಗೆ ಡ್ಯಾಮೇಜ್ ಆಗಿರೋದು ಪಕ್ಕಾ ಎಂದರು.
ಕಾಂಗ್ರೇಸ್ ಪಕ್ಷದಲ್ಲಿ ದುಡ್ಡುಕೊಟ್ಟು ಜನ್ರು ಸೇರಿಸುವ ಪರಂಪರೆ ಇಲ್ಲಾ. ಬಿಜೆಪಿಯವರ ಬಗ್ಗೆ ಮಾತನಾಡುವಾಗಿನ ವಿಡಿಯೋ ಅದಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರು ವಿಡಿಯೋ ವೈರಲ್ ಗೆ ಸಂಬಂಧಿಸಿದಂತೆ ಪ್ರಕ್ರಿಯೆ ನೀಡಿದ್ದಾರೆ.
ಸಿದ್ದರಾಮಯ್ಯ ಅಭ್ಯರ್ಥಿಗಳ ಘೋಷಣೆ ವಿಚಾರ. ಹೊದಲ್ಲೆಲ್ಲ ಸಿದ್ದು ಅಭ್ಯರ್ಥಿಗಳ ಘೋಷಣೆ ಮಾಡೋದು ಸರಿಯಲ್ಲ. ಅರ್ಜಿ ಹಾಕಿದವರಿಗೆ ನಮಗೂ ಟಿಕೆಟ್ ಸಿಗುತ್ತೆ ಎಂಬ ಆಸೆ ಇರುತ್ತೆ. ಇದರಿಂದ ಅರ್ಜಿ ಹಾಕಿದವರಿಗೆ ತೊಂದರೆ ಆಗುತ್ತದೆ ಎಂದು ಕೊಪ್ಪಳದಲ್ಲಿ ಮಾಜಿ ಸಚಿವ ಸತೀಶ ಜಾರಕಿಹೊಳಿ ಹೇಳಿದ್ದಾರೆ.
ಹಿಂದೂ ಬಗ್ಗೆ ಸತೀಶ್ ಜಾರಕಿಹೊಳಿ ನೀಡಿದ್ದ ಹೇಳಿಕೆಯನ್ನು ವಾಪಸ್ ಪಡೆದಿದ್ದಾರೆ. ನೈಜ ಸುದ್ದಿ ಬಿಟ್ಟು ಬೇರೆ ಬೇರೆ ಆಯಾಮದಲ್ಲಿ ಚರ್ಚೆ ಆರಂಭ ಆಯ್ತು. ವೈಯಕ್ತಿಕವಾಗಿ, ಪಕ್ಷಕ್ಕೆ ಡ್ಯಾಮೆಜ್ ಆಯಿತು. ನನ್ನ ಪಕ್ಷದ ಡ್ಯಾಮೆಜ್ ಆಗುವುದನ್ನು ತಡೆಯಲು ನನ್ನ ಹೇಳಿಕೆ ವಾಪಸ್ ಪಡೆದಿರುವೆ ಎಂದು ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
'ಮಾತು ಆಡಿದ್ರೆ ಹೋಯ್ತು.. ಮುತ್ತು ಒಡೆದರೆ ಹೋಯ್ತು' ಎಂದು ಸಿಎಂ ಬಸವರಾಜ ಬೊಮ್ಮಾಯಿ, ತಮಗೆ ಪತ್ರ ಬರೆದು ಸತೀಶ್ ಜಾರಕಿಹೊಳಿ ಹೇಳಿಕೆ ಹಿಂಪಡೆದ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ.
ಸತೀಶ್ ಜಾರಕಿಹೊಳಿ ಕಟ್ಟಿ ಹಾಕಲು ಬಿಜೆಪಿ ಒಗ್ಗಟ್ಟಿನ ಮಂತ್ರ ಜಪಿಸುತ್ತಿದೆ. ಈ ಕ್ಷೇತ್ರಕ್ಕೆ ಇನ್ನೊಂದು ತಿಂಗಳಲ್ಲಿ ಬಿಎಸ್ವೈ, ಸಿಎಂ ಬರ್ತಾರೆ ಎಂದು ಲಕ್ಷ್ಮಣ ಸವದಿ ಹೇಳಿಕೆ ನೀಡಿದ್ದಾರೆ. ಬೆಳಗಾವಿಯ 5 ಮತಕ್ಷೇತ್ರಗಳನ್ನ ಗೆಲ್ಲಬೇಕಾಗಿದೆ ಎಂದ ಲಕ್ಷ್ಮಣ ಸವದಿ ಹೇಳಿದ್ದಾರೆ.
ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ವಿರುದ್ಧ ಸಚಿವ ಉಮೇಶ್ ಕತ್ತಿ ಗುಡುಗಿದ್ದಾರೆ. ಈ ಕ್ಷೇತ್ರದ ಎಂಎಲ್ಎಗೆ ನಮಸ್ಕಾರ ಮಾಡಿದ್ರೆ ನಮಸ್ಕಾರ ಮಾಡಲ್ಲ. ಈ ಕ್ಷೇತ್ರದಲ್ಲಿ ಈ ಶಾಸಕರಿಂದ ಯಾವ ಅಭಿವೃದ್ಧಿಯಂತೂ ಆಗಿಲ್ಲ. ಅವರನ್ನು ಈ ಬಾರಿ ಮನೆಗೆ ಕಳಿಸಿಯೇ ತೀರುತ್ತೇನೆ ಎಂದು ಉಮೇಶ್ ಕತ್ತಿ ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.