ಕಳೆದ ವಾರವೇ ಜನವರಿ 1ರಿಂದ ಶಾಲಾ-ಕಾಲೇಜುಗಳನ್ನು ಆರಂಭಿಸಲು ನಿರ್ಧರಿಸಿತ್ತು. ಆದರೆ ಈ ನಡುವೆ ಮ್ಯೂಟಂಟ್ ಕೊರೋನಾ ವೈರಸ್ ಪತ್ತೆಯಾದ ಹಿನ್ನಲೆಯಲ್ಲಿ ಮತ್ತೆ ಶಾಲಾ-ಕಾಲೇಜುಗಳ ಆರಂಭದ ಬಗ್ಗೆ ಪುನರ್ ಪರಿಶೀಲನೆ ನಡೆಸಬೇಕಾಯಿತು.
ಇಡೀ ಜಗತ್ತನ್ನೇ ತತ್ತರಗೊಳಿಸಿರುವ ಕೊರೊನಾವೈರಸ್ನಿಂದಾಗಿ 2020 ರಲ್ಲಿ ಶಾಲಾ-ಕಾಲೇಜುಗಳನ್ನು ಮುಚ್ಚಲಾಗಿದೆ. ಆದಾಗ್ಯೂ ಅನೇಕ ರಾಜ್ಯಗಳು ಹೊಸ ವರ್ಷದಲ್ಲಿ ಶಾಲಾ-ಕಾಲೇಜುಗಳನ್ನು ತೆರೆಯಲು ಸಿದ್ಧತೆ ನಡೆಸಿವೆ.
ಮುಂದಿನ ದಿನಗಳಲ್ಲಿ ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಿಗೆ ಕೇಬಲ್ ಮೂಲಕ ಹೈ ಸ್ಪೀಡ್ ಇಂಟರ್ನೆಟ್ ಸೌಲಭ್ಯ ಕಲ್ಪಿಸುವ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ. ಭಾರತ್ ನೆಟ್ ಸಹಯೋಗದಲ್ಲಿ ಈ ಕೆಲಸ ಆಗಲಿದೆ ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ.
ತಾಂತ್ರಿಕ ಸಲಹಾ ಸಮಿತಿಯು ಜನವರಿ 1ರಿಂದ 10 (SSLC) ಮತ್ತು 12ನೇ (II PUC) ತರಗತಿಗಳನ್ನು ಆರಂಭಿಸುವುದರ ಜೊತೆಗೆ ಇದರ ಅನುಭವವನ್ನು ಆಧರಿಸಿ ಜನವರಿ 15ರಿಂದ 11ನೇ ತರಗತಿ (I PUC) ಯನ್ನೂ ಆರಂಭಿಸಬಹುದೆಂದು ಹೇಳಿದೆ. ಈ ಹಿನ್ನಲೆಯಲ್ಲಿ ಶಿಕ್ಷಣ ಇಲಾಖೆಯು ಮಾರ್ಗಸೂಚಿ ಪ್ರಕಟಿಸಿದೆ.
ಶಾಲೆಗಳನ್ನು ಆರಂಭಿಸುವ ವಿಷಯಕ್ಕೆ ಸಂಬಂಧಿಸಿದಂತೆ ತಾಂತ್ರಿಕ ಸಮಿತಿಯ ಸಲಹೆ ಮೇರೆಗೆ ಆರೋಗ್ಯ ಇಲಾಖೆ ಆಯುಕ್ತ ಪಂಕಜ್ ಕುಮಾರ್ ಪಾಂಡೆ ಪತ್ರ ಬರೆದಿದ್ದು ಆರೋಗ್ಯ ಇಲಾಖೆ ವತಿಯಿಂದ ಶಾಲೆಗಳನ್ನು ಆರಂಭಿಸುವ ಬಗ್ಗೆ ಒಪ್ಪಿಗೆ ನೀಡಿದ್ದಾರೆ ಎನ್ನಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.