ಶುಲ್ಕ ಪಾವತಿಸಲು ಸಾಧ್ಯವಿಲ್ಲ ಎಂದು ಪೋಷಕರು. ಇನ್ನೊಂದೆಡೆ ಇದೇ ಕೋವಿಡ್ ಮತ್ತು ಲಾಕ್ಡೌನ್ ನಡುವೆಯೂ ಶಾಲೆ ನಿರ್ವಹಣೆ ಮಾಡಬೇಕಿರುವುದರಿಂದ ಶುಲ್ಕ ಪಾವತಿ ಅನಿವಾರ್ಯ ಎಂದು ಶಾಲಾ ಕಾಲೇಜುಗಳ ಆಡಳಿತ ಮಂಡಳಿಗಳು ವಾದ ಮಾಡುತ್ತಿದ್ದವು.
ಕಳೆದ ವಾರವೇ ಜನವರಿ 1ರಿಂದ ಶಾಲಾ-ಕಾಲೇಜುಗಳನ್ನು ಆರಂಭಿಸಲು ನಿರ್ಧರಿಸಿತ್ತು. ಆದರೆ ಈ ನಡುವೆ ಮ್ಯೂಟಂಟ್ ಕೊರೋನಾ ವೈರಸ್ ಪತ್ತೆಯಾದ ಹಿನ್ನಲೆಯಲ್ಲಿ ಮತ್ತೆ ಶಾಲಾ-ಕಾಲೇಜುಗಳ ಆರಂಭದ ಬಗ್ಗೆ ಪುನರ್ ಪರಿಶೀಲನೆ ನಡೆಸಬೇಕಾಯಿತು.
ಇಡೀ ಜಗತ್ತನ್ನೇ ತತ್ತರಗೊಳಿಸಿರುವ ಕೊರೊನಾವೈರಸ್‌ನಿಂದಾಗಿ 2020 ರಲ್ಲಿ ಶಾಲಾ-ಕಾಲೇಜುಗಳನ್ನು ಮುಚ್ಚಲಾಗಿದೆ. ಆದಾಗ್ಯೂ ಅನೇಕ ರಾಜ್ಯಗಳು ಹೊಸ ವರ್ಷದಲ್ಲಿ ಶಾಲಾ-ಕಾಲೇಜುಗಳನ್ನು ತೆರೆಯಲು ಸಿದ್ಧತೆ ನಡೆಸಿವೆ.
ಮುಂದಿನ ದಿನಗಳಲ್ಲಿ ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಿಗೆ ಕೇಬಲ್ ಮೂಲಕ ಹೈ ಸ್ಪೀಡ್ ಇಂಟರ್‌ನೆಟ್ ಸೌಲಭ್ಯ ಕಲ್ಪಿಸುವ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ. ಭಾರತ್ ನೆಟ್ ಸಹಯೋಗದಲ್ಲಿ ಈ ಕೆಲಸ ಆಗಲಿದೆ ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ.
ತಾಂತ್ರಿಕ ಸಲಹಾ ಸಮಿತಿಯು ಜನವರಿ 1ರಿಂದ 10 (SSLC) ಮತ್ತು 12ನೇ (II PUC) ತರಗತಿಗಳನ್ನು ಆರಂಭಿಸುವುದರ ಜೊತೆಗೆ ಇದರ ಅನುಭವವನ್ನು ಆಧರಿಸಿ ಜನವರಿ 15ರಿಂದ 11ನೇ ತರಗತಿ (I PUC) ಯನ್ನೂ ಆರಂಭಿಸಬಹುದೆಂದು ಹೇಳಿದೆ. ಈ ಹಿನ್ನಲೆಯಲ್ಲಿ ಶಿಕ್ಷಣ ಇಲಾಖೆಯು ಮಾರ್ಗಸೂಚಿ ಪ್ರಕಟಿಸಿದೆ.
ತಾಂತ್ರಿಕ ಸಲಹಾ ಸಮಿತಿ ಕೊಟ್ಟ ವರದಿ ಹಾಗೂ ತಜ್ಞರು ಕೊಟ್ಟ ಸಲಹೆ ಮೇರೆಗೆ ಜನವರಿ 1ರಿಂದ ಮೊದಲ ಹಂತದಲ್ಲಿ 10 ಮತ್ತು 12ನೇ ತರಗತಿಗಳು ಹಾಗೂ ಎರಡನೇ ಹಂತದಲ್ಲಿ ಹಂತದಲ್ಲಿ 9 ಮತ್ತು 11ನೇ ತರಗತಿಗಳನ್ನು ಆರಂಭಿಸುವ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ.
ನಾಳಿನ ಸಭೆಯಲ್ಲಿ ಶಿಕ್ಷಣ, ಆರೋಗ್ಯ, ಗ್ರಾಮೀಣಾಭಿವೃದ್ಧಿ, ಸಮಾಜ ಕಲ್ಯಾಣ, ಗೃಹ ಇಲಾಖೆಗಳಿಂದ ಹಾಗೂ ಶಾಲೆಗಳನ್ನು ಆರಂಭಿಸುವ ವಿಷಯಕ್ಕೆ ಸಂಬಂಧಿಸಿದಂತೆ ರಚಿಸಿರುವ ತಾಂತ್ರಿಕ ಸಮಿತಿಯ ಸಲಹೆಗಳನ್ನು ಪರಿಶೀಲಿಸಲಾಗುತ್ತದೆ.
ಶಾಲೆಗಳನ್ನು ಆರಂಭಿಸುವ ವಿಷಯಕ್ಕೆ ಸಂಬಂಧಿಸಿದಂತೆ ತಾಂತ್ರಿಕ ಸಮಿತಿಯ ಸಲಹೆ ಮೇರೆಗೆ ಆರೋಗ್ಯ ಇಲಾಖೆ ಆಯುಕ್ತ ಪಂಕಜ್ ಕುಮಾರ್ ಪಾಂಡೆ ಪತ್ರ ಬರೆದಿದ್ದು ಆರೋಗ್ಯ ಇಲಾಖೆ ವತಿಯಿಂದ ಶಾಲೆಗಳನ್ನು ಆರಂಭಿಸುವ ಬಗ್ಗೆ ಒಪ್ಪಿಗೆ ನೀಡಿದ್ದಾರೆ ಎನ್ನಲಾಗಿದೆ.
ಶಾಲಾ-ಕಾಲೇಜುಗಳ ಆರಂಭ ಮತ್ತು SSLC ಪರೀಕ್ಷೆ ನಡೆಸುವುದು ಆಯಾ ರಾಜ್ಯಗಳಿಗೆ ಬಿಟ್ಟಿದ್ದು ಎಂದು ಕೇಂದ್ರ ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಂಡಿತ್ತು. ಜಿಜ್ಞಾಸೆಗೆ ಸಿಲುಕಿದ್ದ ರಾಜ್ಯ ಸರ್ಕಾರ ಪೋಷಕರ ತೀವ್ರ ವಿರೋಧದ ನಡುವೆಯೂ SSLC ಪರೀಕ್ಷೆ ನಡೆಸಿತ್ತು. ಈಗ ಮತ್ತೆ ಶಾಲಾ-ಕಾಲೇಜುಗಳ ಆರಂಭಿಸುವ ಬಗ್ಗೆ ಅದರಲ್ಲೂ SSLC ತರಗತಿಗಳನ್ನು ಆರಂಭಿಸುವ ಬಗ್ಗೆ 'ಏನು ಮಾಡಬೇಕೆಂದು' ತಿಳಿಯದೆ ಕಂಗಾಲಾಗಿದೆ.
ಸಭೆಯಲ್ಲಿ ಬಹಳ ಪ್ರಮುಖವಾಗಿ ರಾಜ್ಯ ಸರ್ಕಾರಕ್ಕೆ ಕೋವಿಡ್ 19 ತಾಂತ್ರಿಕ ಸಲಹಾ ಸಮಿತಿಯು ನೀಡಿದ್ದ 'ಡಿಸೆಂಬರ್ ತಿಂಗಳಲ್ಲಿ ಶಾಲೆಗಳನ್ನು (Schools) ತೆರೆಯುವುದು ಕೂಡ ಸೂಕ್ತವಲ್ಲ" ಎಂಬ ಶಿಫಾರಸ್ಸಿನ ಬಗ್ಗೆ ಸಮಾಲೋಚನೆ ನಡೆಸಲಾಯಿತು.
ನವೆಂಬರ್ 22ರಂದು ಕೋವಿಡ್ 19 ತಾಂತ್ರಿಕ ಸಲಹಾ ಸಮಿತಿ ಅಧ್ಯಕ್ಷ ಡಾ. ಎಂ.ಕೆ. ಸುದರ್ಶನ್ ಅಧ್ಯಕ್ಷತೆಯಲ್ಲಿ ಸಭೆ ನಡೆಸಲಾಗಿದ್ದು ಸಭೆಯಲ್ಲಿ ಶಾಲೆಗಳನ್ನು (Schools) ಪುನರಾರಂಭಿಸುವ ಕುರಿತು ಗಂಭೀರವಾದ ಚರ್ಚೆಯಾಗಿದೆ.
ತರಾತುರಿಯಲ್ಲಿ ಶಾಲೆಗಳನ್ನು ಪ್ರಾರಂಭಿಸಿದರೆ ನಾಳೆ ಅಪ್ಪಿತಪ್ಪಿ ಒಂದಿಷ್ಟು ಶಿಕ್ಷಕರು ಇಲ್ಲವೇ ಮಕ್ಕಳಿಗೆ ಕೊರೊನಾ ಸೋಂಕು ಕಾಣಿಸಿಕೊಂಡರೆ ಸರ್ಕಾರದ ಮೇಲೆ ಸಾರ್ವಜನಿಕರು ಅಕ್ರೋಶಗೊಳ್ಳಬಹುದು.
ತರಾತುರಿಯಲ್ಲಿ ಶಾಲೆಗಳನ್ನು ಪ್ರಾರಂಭಿಸಿದರೆ ನಾಳೆ ಅಪ್ಪಿತಪ್ಪಿ ಒಂದಿಷ್ಟು ಶಿಕ್ಷಕರು ಇಲ್ಲವೇ ಮಕ್ಕಳಿಗೆ ಕೊರೊನಾ ಸೋಂಕು ಕಾಣಿಸಿಕೊಂಡರೆ ಸರ್ಕಾರದ ಮೇಲೆ ಸಾರ್ವಜನಿಕರು ಅಕ್ರೋಶಗೊಳ್ಳಬಹುದು.
ವಿದ್ಯಾರ್ಥಿಗಳು ಮತ್ತು ಶಿಕ್ಷಕರ ಜೀವನ ನಮಗೆ ಮುಖ್ಯವಾಗಿದೆ. ಕೋವಿಡ್ -19 ಪ್ರೋಟೋಕಾಲ್ ಅನ್ನು ಎಲ್ಲಾ ವಿಭಾಗಗಳಲ್ಲಿ ತಪ್ಪದೇ ಅನುಸರಿಸುವುದನ್ನು ಖಾತರಿಪಡಿಸಲಾಗುವುದು ಎಂದು ಆಂಧ್ರಪ್ರದೇಶದ ಶಿಕ್ಷಣ ಇಲಾಖೆ ಆಯುಕ್ತ ವಿ ಚಿನ್ನ ವೀರಭದ್ರು ಹೇಳಿದರು.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ, ಈ ವರ್ಷ ಶಾಲೆಗಳನ್ನ ಆರಂಭಿಸುವುದು ಬೇಡ. ಆನ್‌ಲೈನ್ ಕ್ಲಾಸ್ (Online Class) ಮಾಡಿ ಎಲ್ಲರನ್ನು ಪಾಸ್ ಮಾಡಲಿ. ಸಂಪೂರ್ಣ ಕೊರೊನಾ ಮುಕ್ತವಾದ ನಂತರ ಶಾಲೆಗಳನ್ನ ಆರಂಭಿಸಲಿ. ತರಾತುರಿಯಲ್ಲಿ ಶಾಲೆ ಆರಂಭಿಸೋದು ಬೇಡ ಎಂದು ಹೇಳಿದರು.
ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಕುಮಾರಸ್ವಾಮಿ, ಸರಕಾರಿ ಶಾಲೆ ಶಿಕ್ಷಕರು ಕೋವಿಡ್ ಕರ್ತವ್ಯ ಹಾಗೂ ವಿದ್ಯಾಗಮ ಯೋಜನೆಯಡಿ ಈ ದಿನದ ತನಕ ಕೆಲಸ ಮಾಡಿದ್ದಾರೆ. ಆದರೆ ರಾಜ್ಯ ಸರಕಾರ ಈ ವರ್ಷ ಶೈಕ್ಷಣಿಕ ವರ್ಷದ ಮಧ್ಯಂತರ ರಜೆಯನ್ನು ರದ್ದುಗೊಳಿಸಿ ಶಿಕ್ಷಕರನ್ನು ನಿಕೃಷ್ಟವಾಗಿ ನಡೆಸಿಕೊಳ್ಳುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.