‘’ಸಮಾಜವಾದಿ’’ ಮತ್ತು "ಜಾತ್ಯತೀತ" ಪದಗಳನ್ನು ಕಿತ್ತುಹಾಕಿರುವುದು ಸಂವಿಧಾನ ವಿರೋಧಿ ನಡೆ ಮಾತ್ರವಲ್ಲ, ಇದೊಂದು ದೇಶದ್ರೋಹ ಕೃತ್ಯವಾಗಿದೆ. ಇದು ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಮಾಡಿರುವ ಅವಮಾನವಾಗಿದೆ ಎಂದು ಸಿದ್ದರಾಮಯ್ಯ ಟೀಕಿಸಿದ್ದಾರೆ.
ನೇರಾನೇರವಾಗಿ ಸಂವಿಧಾನಕ್ಕೆ ತಿದ್ದುಪಡಿ ಮಾಡುವ ಧೈರ್ಯ ಇಲ್ಲದ ಬಿಜೆಪಿ ಮತ್ತು ಕೇಂದ್ರ ಸರ್ಕಾರ, ಅಡ್ಡದಾರಿ ಹಿಡಿದು ಸಂವಿಧಾನದ ಆಶಯಗಳನ್ನು ಅಳಿಸಿಹಾಕುವ ಪ್ರಯತ್ನ ನಡೆಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಮುಸ್ಕಾನ್ ಮುಗ್ಧ ಹುಡುಗಿ, ಈ ಘಟನೆ ಅತ್ಯಂತ ವಿಷಾಧನೀಯ. ಭಯೋತ್ಪಾದಕ ಸಂಘಟನೆಗಳಿಂದ ಹೆಚ್ಚೇನು ನಿರೀಕ್ಷಿಸಲು ಸಾಧ್ಯ? ಅವರು ಮೂಲಭೂತವಾದಿಗಳಷ್ಟೆ ಅಲ್ಲ, ಮೂಲ ಭಯೋತ್ಪಾದಕರು. ಭಯೋತ್ಪಾದಕರು ಜನರಲ್ಲಿ ಭಯ ಹುಟ್ಟಿಸಲಷ್ಟೆ ಸಾಧ್ಯ, ಈ ನಿಟ್ಟಿನಲ್ಲಿ ಜನರ ಮುಗ್ಧತೆಯನ್ನು ಅಸ್ತ್ರವನ್ನಾಗಿ ಬಳಸುತ್ತಾರೆ ಎಂದು ಆರೋಗ್ಯ ಸಚಿವ ಕೆ. ಸುಧಾಕರ್ ಅವರು ಮಂಡ್ಯದ ಮುಸ್ಕಾನ್ ಹೇಳಿಕೆಗೆ ಅಲ್ ಖೈದಾ ಬೆಂಬಲ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ.
ಕೊಪ್ಪಳದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವರು "ಅಪ್ಪ-ಅಮ್ಮ ಯಾರೆಂಬುದು ಗೊತ್ತಿಲ್ಲದವರು ಜಾತ್ಯಾತೀತರು" ಎಂಬ ಹೇಳಿಕೆಯನ್ನು ನೀಡಿದ್ದು ಇದು ತೀವ್ರ ವಿವಾದವನ್ನು ಹುಟ್ಟುಹಾಕಿತ್ತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.