Unemployment: ಆಧುನಿಕ ಯುಗದಲ್ಲಿ ಬಹುತೇಕ ಕೆಲಸಗಳನ್ನು ಯಂತ್ರೋಪಕರಣಗಳೆ ಮಾಡಿ ಮುಗಿಸುವುದರಿಂದ ಸಾಕಷ್ಟು ಯುವಕ ಯುವತಿಯರು ನಿರುದ್ಯೋಗಿಗಳಾಗುತ್ತಿದ್ದಾರೆ. ಅಂತಹವರಿಗಾಗಿ ಕೇಂದ್ರ ಸರ್ಕಾರದಿಂದ ಸುವರ್ಣಾವಕಾಶ ನೀಡಲಾಗುತ್ತಿದೆ.
Swavalambi Sarathi Scheme: ಈ ಯೋಜನೆಯಡಿ ಬ್ಯಾಂಕುಗಳಿಂದ ಮಂಜೂರಾತಿ ಪಡೆದ ಟ್ಯಾಕ್ಸಿ /ಗೂಡ್ಸ್ ವಾಹನ ಖರೀದಿಸಲು ಪ್ರತಿ ಫಲಾನುಭವಿಗೆ ವಾಹನದ ಮೌಲ್ಯದ ಶೇ.50ರಷ್ಟು ಅಥವಾ ಗರಿಷ್ಠ 3 ಲಕ್ಷ, ಪ್ರಯಾಣಿಕ ಆಟೋ ರಿಕ್ಷಾ ಖರೀದಿಸಲು ಗರಿಷ್ಠ 75 ಸಾವಿರ ಸಹಾಯಧನ ನೀಡಲಾಗುತ್ತದೆ.
Micro credit scheme: ಕನಿಷ್ಟ 10 ಮಹಿಳೆಯರು ಇರುವ ಸ್ವ ಸಹಾಯ ಗುಂಪುಗಳು ಸ್ವಯಂ ಉದ್ಯೋಗ ಕೈಗೊಂಡು ಉತ್ತಮ ಆದಾಯ ಗಳಿಸುವ ಆರ್ಥಿಕ ಚಟುವಟಿಕೆಗಳಲ್ಲಿ ತೊಡಗಿ ಆರ್ಥಿಕ ಸ್ವಾವಲಂಬನೆಯನ್ನು ಹೊಂದಲು ನೆರವನ್ನು ಕಲ್ಪಿಸಲಾಗುವುದು.
Self Employment Direct Loan Scheme: ಈ ಯೋಜನೆಯಡಿ ಪರಿಶಿಷ್ಟ ಜಾತಿಯ ಮಾದಿಗ ಜಾತಿಗೆ ಸೇರಿದ ನಿರುದ್ಯೋಗಿ ಪುರುಷರು ಮತ್ತು ಮಹಿಳೆಯರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ಆರ್ಥಿಕ ನೆರವನ್ನು ಒದಗಿಸಲಾಗುವುದು.
ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ, ಕರ್ನಾಟಕ ಸರ್ಕಾರ ಇವರ ಪ್ರಾಯೋಜಕತ್ವದಲ್ಲಿ, ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ (ಸಿಡಾಕ್), ಕೊಪ್ಪಳ ಇವರಿಂದ ಸ್ವಯಂ ಉದ್ಯೋಗ ಪ್ರಾರಂಭಿಸಲು ಹತ್ತು ದಿನಗಳ ಉದ್ಯಮಶೀಲತಾಭಿವೃದ್ಧಿ ತರಬೇತಿ ಕಾರ್ಯಕ್ರಮಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ, ಕರ್ನಾಟಕ ಸರ್ಕಾರ ಇವರ ಪ್ರಾಯೋಜಕತ್ವದಲ್ಲಿ, ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ (ಸಿಡಾಕ್), ಕೊಪ್ಪಳ ಇವರಿಂದ ಸ್ವಯಂ ಉದ್ಯೋಗ ಪ್ರಾರಂಭಿಸಲು ಹತ್ತು ದಿನಗಳ ಉದ್ಯಮಶೀಲತಾಭಿವೃದ್ಧಿ ತರಬೇತಿ ಕಾರ್ಯಕ್ರಮಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ವತಿಯಿಂದ ಪ್ರಧಾನ ಮಂತ್ರಿಗಳ ಉದ್ಯೋಗ ಸೃಜನ ಯೋಜನೆಯನ್ನು 2023-24ನೇ ಸಾಲಿಗೆ ಮುಂದುವರೆದಿದ್ದು, ಈ ಯೋಜನೆಯಡಿ ನಗರ ಹಾಗೂ ಗ್ರಾಮಾಂತರ ಪ್ರದೇಶದ ನಿರುದ್ಯೋಗ ಯುವಕ, ಯುವತಿಯರಿಗೆ ಕೈಗಾರಿಕೆ, ಸೇವಾ ಚಟುವಟಿಕೆಗಳನ್ನು ಸ್ಥಾಪಿಸಲು ಉತ್ಪಾದನೆ ವಲಯಕ್ಕೆ ರೂ.50 ಲಕ್ಷಗಳವರೆಗೆ ಮತ್ತು ಸೇವಾ ವಲಯಕ್ಕೆ ರೂ.20 ಲಕ್ಷಗಳವರೆಗೆ ಸಾಲ ಸೌಲಭ್ಯ ಒದಗಿಸಲು ಉದ್ದೇಶಿಸಲಾಗಿದೆ.
ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ, ಕರ್ನಾಟಕ ಸರ್ಕಾರ ಇವರ ಪ್ರಾಯೋಜಕತ್ವದಲ್ಲಿ, ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ (ಸಿಡಾಕ್), ಧಾರವಾಡ ಇವರು ಸ್ವಯಂ ಉದ್ಯೋಗ ಪ್ರಾರಂಭಿಸಲು ಆಸಕ್ತರಿರುವರಿಗೆ ಕೊಪ್ಪಳದಲ್ಲಿ ಜನವರಿ 23 ರಿಂದ ಹತ್ತು ದಿನಗಳ ಉದ್ಯಮಶೀಲತಾಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ರಾಜ್ಯದ ಗ್ರಾಮೀಣ ಭಾಗದ ಪ್ರದೇಶದಲ್ಲಿ ವಾಸಿಸುತ್ತಿರುವ ಯುವಜನತೆಗೆ ಕೌಶಲ್ಯ ತರಬೇತಿಯನ್ನು ನೀಡಲು ಸಿದ್ಧಗೊಂಡಿರುವ ಸುಸಜ್ಜಿತ "ಕೌಶಲ್ಯ ರಥಗಳಿಗೆ" ಶುಕ್ರವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಚಾಲನೆ ನೀಡಿದರು.
ಇದೇ ತಿಂಗಳ 12 ರಂದು ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದ ವತಿಯಿಂದ ಕಲಬುರಗಿಯಲ್ಲಿ ನಡೆಸಿದ ಉದ್ಯೋಗ ಮೇಳದಲ್ಲಿ ಒಟ್ಟು 2,240 ಜನರಿಗೆ ಉದ್ಯೋಗ ಸಿಕ್ಕಿದೆ ಎಂದು ಉನ್ನತ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದ್ದಾರೆ.
ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮ ವತಿಯಿಂದ ಸಂಕಲ್ಪ ಯೋಜನೆಯಡಿಯಲ್ಲಿ ಪ್ರತಿಭಾನ್ವಿತರಿಗೆ ಕಿರುಉದ್ಯಮ ಪ್ರಾರಂಭಿಸಲು ಅಗತ್ಯವಿರುವ ಸೂಕ್ತ ಮಾರ್ಗದರ್ಶನ ಹಾಗೂ ಉತ್ತೇಜನ ಕಾರ್ಯಕ್ರಮವನ್ನು ಕರ್ನಾಟಕ ಕೌಶಲ್ಯಅಭಿವೃದ್ಧಿ ನಿಗಮವು ಮೈಸೂರಿನ ಸ್ಫೂರ್ತಿ ಪರ್ಫಾರ್ಮನ್ ಸಲ್ಯೂಷನ್ಸ್ ಸಹಭಾಗಿತ್ವದಲ್ಲಿ ಹಮ್ಮಿಕೊಂಡಿದೆ.
ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ವತಿಯಿಂದ ಜನವರಿ 2022 ರಿಂದ ಪಶುವೈದ್ಯಕೀಯ ಪರೀಕ್ಷಕರ ತರಬೇತಿ ಕೇಂದ್ರದಲ್ಲಿ ಧಾರವಾಡ, ಗದಗ, ಹಾವೇರಿ, ಕಾರವಾರ ಜಿಲ್ಲೆಗಳ ರೈತ ಹಾಗೂ ರೈತ ಮಹಿಳೆಯರಿಗೆ ಎರಡು ದಿನಗಳ ಅವಧಿಯ ತಂಡವಾರು ಉಚಿತವಾಗಿ ವೈಜ್ಞಾನಿಕ ಹೈನುಗಾರಿಕೆ, ಕುರಿ ಮತ್ತು ಮೇಕೆ ಸಾಕಾಣಿಕೆಯ ತರಬೇತಿಯನ್ನು ನೀಡಲಾಗುತ್ತದೆ.
ವಿಕಲಚೇತನ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ವತಿಯಿಂದ 2020-21ನೇ ಸಾಲಿನಲ್ಲಿ ಜಿಲ್ಲಾ ವ್ಯಾಪ್ತಿಯ ನಿರುದ್ಯೋಗಿ ಅಂಗವಿಕಲ ಯುವಕ/ ಯುವತಿಯರು ಸ್ವಯಂ ಉದ್ಯೋಗ ಕೈಗೊಳ್ಳಲು ಆಧಾರ ಯೋಜನೆಯಡಿಯಲ್ಲಿ ಸಾಲ ಪಡೆಯಲು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಸಾಮಾನ್ಯ ವರ್ಗದ ಅರ್ಹ ವಿಕಲಚೇತನರಿಂದ ಅರ್ಜಿ ಆಹ್ವಾನಿಸಲಾಗಿದೆ.
2020-21 ನೇ ಸಾಲಿನಲ್ಲಿ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ ಹರಿಹರ ಇಲ್ಲಿ ಕೌಶಲ್ಯಾಭಿವೃದ್ದಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಅಡಿಯಲ್ಲಿ ತಂತ್ರಜ್ಞಾನ ತರಬೇತಿಗಳ ಸಂಸ್ಥೆಗಳಿಗೆ ನೆರವು ಯೋಜನೆಯ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆ(ಎಸ್ಸಿಪಿ-ಟಿಎಸ್ಪಿ) ಮೂಲಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ನಿರುದ್ಯೋಗಿ ಯುವಜನತೆಗೆ ಉದ್ಯೋಗಾವಕಾಶ ಕಲ್ಪಿಸಲು ಉಚಿತ ತರಬೇತಿ ನೀಡಲಾಗುವುದು.
2020-21 ನೇ ಸಾಲಿಗೆ ಇ-ವಾಣಿಜ್ಯ ಸಂಸ್ಥೆಗಳಾದ Zomato, Swiggy, Uber ets, Amazon ಮೊದಲಾದ ಸಂಸ್ಥೆಗಳಲ್ಲಿ ಉದ್ಯೋಗ ಪಡೆದು, ಮನೆಬಾಗಿಲಿಗೆ ಉತ್ಪನ್ನ ತಲುಪಿಸುತ್ತಿರುವ ಹಿಂದುಳಿದ ವರ್ಗಗಳಿಗೆ ಸೇರಿದ ಪ್ರವರ್ಗ-1, ಪ್ರವರ್ಗ-2ಎ, 3ಎ ಮತ್ತು 3ಬಿಗೆ ಸೇರಿದ (ವಿಶ್ವಕರ್ಮ, ಉಪ್ಪಾರ, ಅಂಬಿಗ, ಮಡಿವಾಳ, ಸವಿತಾ, ಅಲೆಮಾರಿ ಅಥವಾ ಅರೆಅಲೆಮಾರಿ ಜನಾಂಗದವರು ಹಾಗೂ ಮತೀಯ ಅಲ್ಪಸಂಖ್ಯಾತರನ್ನು ಹೊರತುಪಡಿಸಿ) ಯುವಕರಿಗೆ ಬೈಕ್ ಕೊಂಡುಕೊಳ್ಳಲು ನಿಗಮದಿಂದ 25 ಸಾವಿರ ರೂ.ಗಳ ಸಹಾಯಧನ ಹಾಗೂ ಉಳಿಕೆ ಮೊತ್ತ ಬ್ಯಾಂಕ್ ಅಥವಾ ಆರ್ಥಿಕ ಸಂಸ್ಥೆಗಳ ಮೂಲಕ ಸಾಲ ಪಡೆಯುವುದು. ಈ ಸೌಲಭ್ಯ ಪಡೆಯ ಬಯಸುವವರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ ಪತ್ರಿಕೋದ್ಯಮ ಪದವೀಧರರಿಗೆ ವೃತ್ತಿಯಲ್ಲಿ ತೊಡಗಿಕೊಳ್ಳುವ ಪ್ರೊತ್ಸಾಹಿಸುವ ನಿಟ್ಟಿನಲ್ಲಿ ಹತ್ತು ತಿಂಗಳ ಅಪ್ರೆಂಟಿಸ್ ತರಬೇತಿಯನ್ನು ಹಮ್ಮಿಕೊಂಡಿದೆ.
ಮಾನವನಿಗೆ ಜೀವಿಸಲು ನೀರು, ಗಾಳಿ, ಆಹಾರ ಎಷ್ಟು ಮುಖ್ಯನೋ ಹಾಗೇ ಜೀವನ ನಡೆಸಲು ಹಣ ಕೂಡ ಅಷ್ಟೇ ಮುಖ್ಯ. ಹಣ (Money) ಮನುಷ್ಯನ ಅತೀ ಅವಶ್ಯಕ ವಾದ ವಸ್ತು. ನಾವು ಎಷ್ಟೇ ಕಷ್ಟಪಟ್ಟು ದುಡಿದರೂ ಅದನ್ನು ಉಳಿತಾಯ ಮಾಡಲು ಆಗುವುದಿಲ್ಲ. ಅದಕ್ಕೆ ಜನ ಏನೆಲ್ಲಾ ಪ್ರಯತ್ನ ಪಡ್ತಾರೆ, ಅಂತವರು ಸೋಮವಾರದಂದು ಈ ಕೆಲಸ ಮಾಡಿ ಆರ್ಥಿಕ ಸಮಸ್ಯೆಯಿಂದ ಪರಿಹಾರವನ್ನು ಪಡೆಯಿರಿ.
ಸೋಮವಾರದಂದು ಸೂರ್ಯೋದಯಕ್ಕೂ ಮುಂಚೆ ಸ್ನಾನ ಮಾಡುವಾಗ ನೀರಿಗೆ ಶ್ರೀಗಂಧ ಹಾಕಿ ಸ್ನಾನ ಮಾಡಿ. ಬಳಿಕ ಪೂಜೆ ಮಾಡುವಾಗ ಲಕ್ಷ್ಮೀನಾರಾಯಣ, ಶಿವನ ಪೋಟೊಗೆ ಹೂ, ಶ್ರೀಗಂಧದ ತಿಲಕವನ್ನಿಟ್ಟು ಪೂಜೆ ಮಾಡಿ ಬೆಲ್ಲ ಮತ್ತು ಕಡಲೆಕಾಳನ್ನು ನೈವೇದ್ಯವಾಗಿ ಇಡಬೇಕು. ಇದರಿಂದ ನಿಮ್ಮ ಮೇಲೆ ದೇವರ ಅನುಗ್ರಹ ದೊರೆತು ಅಂದುಕೊಂಡ ಕಾರ್ಯಗಳು ಕೈಗೂಡುತ್ತದೆ.
ಕೋವಿಡ್-19 ಸಾಂಕ್ರಾಮಿಕ ರೋಗದ ಸಮಸ್ಯೆಯಿಂದಾಗಿ ರಾಜ್ಯದಲ್ಲಿ ಲಾಕ್ಡೌನ್ ಹಿನ್ನೆಲೆ ಸಂಕಷ್ಟದಲ್ಲಿರುವ ವಿದ್ಯುತ್ ಮಗ್ಗ ಕಾರ್ಮಿಕರಿಗೆ ರಾಜ್ಯ ಸರ್ಕಾರವು 2020-21ನೇ ಸಾಲಿನಲ್ಲಿ ಒಂದು ಬಾರಿಯ ಆರ್ಥಿಕ ಪರಿಹಾರ ಸಲುವಾಗಿ ರೂ.2,000/-ಗಳ ನೆರವನ್ನು ನೀಡಲು ನೇಕಾರ ಸಮ್ಮಾನ್ ಯೋಜನೆಯನ್ನು ಜಾರಿಗೊಳಿಸಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಿದೆ.
2020-21ನೇ ಸಾಲಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ವತಿಯಿಂದ 18 ವರ್ಷದಿಂದ 55 ವರ್ಷದೊಳಗೆ ವಯೋಮಿತಿ ಇರುವ ನಿರುದ್ಯೋಗಿ ಮಹಿಳೆಯರಿಗೆ ಸ್ವ ಉದ್ಯೋಗಕ್ಕಾಗಿ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಎಸ್.ಬಿ.ಐ. ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ (ಕಿಟಸರ್ಡ್) ಸಂಸ್ಥೆಯಿಂದ 2020ರ ಆಗಸ್ಟ್ 5ರಿಂದ 14ರವರೆಗೆ ಹತ್ತು ದಿನಗಳ ಕಾಲ ಹೈನುಗಾರಿಕೆ ಮತ್ತು ಎರೆಹುಳ ಗೊಬ್ಬರ ತಯಾರಿಕೆ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.ಇದಕ್ಕಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಸಂಸ್ಥೆಯ ನಿರ್ದೇಶಕರು ತಿಳಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.