Shakti Yojane: ಬೆಂಗಳೂರಿನಿಂದ ಮೈಸೂರಿಗೆ ಕೆಎಸ್ಆರ್ಸಿಟಿ ಬಸ್ ನಲ್ಲಿ ತೆರಳುತ್ತಿದ್ದ ಅಜ್ಜಿ-ಮೊಮ್ಮಗಳು ತಮ್ಮೊಂದಿಗೆ ನಾಲ್ಕು ಲವ್ ಬರ್ಡ್ಸ್ ಹಕ್ಕಿ ಗಳನ್ನು ಕೂಡ ತೆಗೆದುಕೊಂಡು ಹೋಗಿದ್ದರು.
ರಾಜ್ಯ ಕಾಂಗ್ರೆಸ್ ಸರ್ಕಾರದ ಶಕ್ತಿ ಯೋಜನೆಗೆ ಮಹಿಳೆಯರಿಂದ ಉತ್ತಮ ಸ್ಪಂದನೆ ದೊರೆತಿದೆ. ಕೇವಲ ಐದುವರೆ ತಿಂಗಳಿಗೆ ಶತಕೋಟಿ ಮಹಿಳೆಯರು ರಾಜ್ಯದ ಸಾರಿಗೆ ಬಸ್ ಗಳಲ್ಲಿ ಸಂಚಾರ ನಡೆಸಿದ್ದಾರೆ. ಈ ಕುರಿತು ಕಂಪ್ಲೀಟ್ ಡಿಟೈಲ್ಸ್ ಇಲ್ಲಿದೆ
ಬಂದ್ ಕರೆ ನೀಡಿದ ಸಂಘಟನೆಗಳ ಮನವೊಲಿಕೆಗೆ ಸರ್ಕಾರ ಕಸರತ್ತು . ಇಂದು ಸಚಿವ ರಾಮಲಿಂಗರೆಡ್ಡಿ ಜೊತೆ ಹೈವೋಲ್ಟೇಜ್ ಮೀಟಿಂಗ್. 35 ಸಂಘಟನೆ ಮುಖಂಡರ ಜೊತೆ ರಾಮಲಿಂಗಾರೆಡ್ಡಿ ಮಾತುಕತೆ. ಬೆಂಗಳೂರಿನ ಶಾಂತಿನಗರದ ಸಾರಿಗೆ ಇಲಾಖೆ ಕಚೇರಿಯಲ್ಲಿ ಮಾತುಕತೆ
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದ ಚುಕ್ಕಾಣಿ ಹಿಡಿದ ಬೆನ್ನಲ್ಲೇ "ಶಕ್ತಿ ಯೋಜನೆ"ಯನ್ನು ಜಾರಿಗೆ ತಂದಿದೆ. ಶಕ್ತಿ ಯೋಜನೆಗೆ ರಾಜ್ಯದ ಮಹಿಳಾ ಮಣಿಯರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಈ ಮಧ್ಯೆ, ಶಕ್ತಿ ಯೋಜನೆಯ ಲಾಭ ಪಡೆಯುವ ಸಲುವಾಗಿ ವ್ಯಕ್ತಿಯೋರ್ವ ಬುರ್ಖಾ ಧರಿಸಿ ಬಸ್ ಏರಿದ ಪ್ರಸಂಗವೊಂದು ಬೆಳಕಿಗೆ ಬಂದಿದೆ.
Shakti Yojana Effect: ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಲ್ಲಿ ಮೊದಲೇ ಯೋಜನೆ "ಶಕ್ತಿ ಯೋಜನೆ" ಜಾರಿ ಆಗಿದ್ದು ಸಾರಿಗೆ ಬಸ್ ನಲ್ಲಿ ಮಹಿಳೆಯರಿಗೆ ಉಚಿತವಾಗಿ ಪ್ರಯಾಣ ಮಾಡುವ ಸೌಲಭ್ಯ ಲಭ್ಯವಾಗುತ್ತಿದೆ. ಸರ್ಕಾರದ ಈ ಯೋಜನೆಗೆ ರಾಜ್ಯದ ಮಹಿಳಾ ಮಣಿಯರಿಂದ ಉತ್ತಮ ರೆಸ್ಪಾನ್ಸ್ ಕೂಡ ಲಭ್ಯವಾಗುತ್ತಿದೆ. ಆದರೆ...
Guarantee schemes: ರಾಜ್ಯ ಸರ್ಕಾರ ಚುನಾವಣೆ ವೇಳೆ ಘೋಷಣೆ ಮಾಡಿದ್ದಂತೆ ಗ್ಯಾರಂಟಿಗಳನ್ನ ಜಾರಿ ಮಾಡಲು ಸಜ್ಜಾಗಿದೆ. ಈಗಾಗಲೇ ಸರ್ಕಾರದ ಮೊದಲ ಗ್ಯಾರಂಟಿಯಾದ ಶಕ್ತಿಯೋಜನೆ ಜಾರಿಯಾಗಿದ್ದು, ಮಹಿಳೆಯರಿಂದ ಉತ್ತಮ ರೆಸ್ಪಾನ್ಸ್ ಸಿಗ್ತಿದೆ. ಆದ್ರೆ ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ಆನ್ಲೈನ್ ಅರ್ಜಿ ಸಲ್ಲಿಕೆ ಮಾತ್ರ ಪದೇ ಪದೇ ಮುಂದೂಡ್ತಿರೋದು ಹಲವು ಪ್ರಶ್ನೆಗಳನ್ನು ಮೂಡಿಸಿದೆ.
ಮಹಿಳೆಯರು ಕೆಎಸ್ಆರ್ಟಿಸಿ ಬಸ್ ಗಳತ್ತ ಹೆಚ್ಚಾಗಿ ಮುಖ ಮಾಡುತ್ತಿದ್ದು, ಅವರೊಂದಿಗೆ ಪುರಷರು ಕೂಡ ಹೋಗುತ್ತಿದ್ದಾರೆ. ಹೀಗಾಗಿ, ಖಾಸಗಿ ಬಸ್ ಗಳ ಮೇಲೆ ಭಾರಿ ಹೊಡೆತ ಬಿದ್ದಂತಾಗಿದೆ. ಇನ್ನು, ದಾವಣಗೆರೆಯ ಖಾಸಗಿ ಬಸ್ ನಿಲ್ದಾಣದಲ್ಲಿ ಮಹಿಳೆಯರ ಸಂಖ್ಯೆ ಕೂಡ ತೀರಾ ಕಡಿಮೆಯಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೆಎಸ್ಆರ್ಟಿಸಿ ಹಾಗೂ ಬಿಎಂಟಿಸಿ ಬಸ್ಗಳಲ್ಲಿ ಪ್ರಯಾಣ ಮಾಡಿ, ಮಹಿಳೆಯರಿಗೆ ಉಚಿತ ಪ್ರಯಾಣದ ಟಿಕೇಟ್ ವಿತರಿಸುವ ಮೂಲಕ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಶಕ್ತಿ ಯೋಜನೆಗೆ ಸಾಂಕೇತಿಕವಾಗಿ ಚಾಲನೆ ನೀಡಿದರು.
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಐದು ಗ್ಯಾರಂಟಿ ಯೋಜನೆಗಳ ಪೈಕಿ ಮಹಿಳೆಯರಿಗೆ ಸರ್ಕಾರಿ ಬಸ್ಸುಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸುವ ಶಕ್ತಿ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿ ಮಾತನಾಡಿದರು.
ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಘೋಷಿಸಿದ್ದ ಐದು ಪ್ರಮುಖ ಗ್ಯಾರಂಟಿಗಳಲ್ಲಿ ಮೊದಲ ಗ್ಯಾರಂಟಿ ಜೂನ್ 11 ರಂದು ಸಮಸ್ತ ಕನ್ನಡಿಗರಿಗೆ ಸಮರ್ಪಣೆ ಆಗಲಿದೆ. ಕೇಂದ್ರ ಸರ್ಕಾರದ ಬೆಲೆ ಏರಿಕೆ, ಹಣದುಬ್ಬರದ ಕಾರಣಕ್ಕೆ ಸಂಕಷ್ಟಕ್ಕೆ ತುತ್ತಾಗಿರುವ ಕನ್ನಡ ನಾಡಿನ ಮಹಿಳಾ ಸಮೂಹಕ್ಕೆ ಕೊಂಚ ನಿರಾಳ ನೀಡುವ ಶಕ್ತಿ ಯೋಜನೆಯ ಚಾಲನೆ ಅತ್ಯಂತ ಅರ್ಥಪೂರ್ಣವಾಗಿ ನಡೆಸಬೇಕು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.