China Coronavirus Updates: ಕರೋನಾ ಮಹಾಮಾರಿಯನ್ನು ಜಗತ್ತಿಗೆ ಉಡುಗೊರೆಯಾಗಿ ನೀಡಿದ ಚೀನಾ ಕಳೆದ ಎರಡು ವರ್ಷಗಳಿಂದ ಈ ಕಾಯಿಲೆಯಿಂದ ಬಳಲುತ್ತಿದೆ. ಈ ಸಾಂಕ್ರಾಮಿಕ ರೋಗವನ್ನು ನಿಯಂತ್ರಿಸುವ ಹೆಸರಿನಲ್ಲಿ ಚೀನಾದಲ್ಲಿ ಬಳಸುತ್ತಿರುವ ವಿಧಾನವನ್ನು ಕಂಡರೆ ನಿಜಕ್ಕೂ ಶಾಕ್ ಆಗಲಿದೆ.
China Lockdown - ಚೀನಾದ (China) ಶಾಂಘೈನಲ್ಲಿ ಕೊರೊನಾ ಅವಧಿಯಲ್ಲಿ ಸಂಪೂರ್ಣ ಲಾಕ್ಡೌನ್ ವಿಧಿಸಲಾಗಿತ್ತು. ಈ ಲಾಕ್ ಡೌನ್ ವಿಧಿಸಿದ ಒಂದು ವಾರದ ಬಳಿಕ ಜನರು ತಮ್ಮ ತಮ್ಮ ಕಿಟಕಿಗಳಿಂದ ಕಿರಚಾಡುತ್ತಿದ್ದು, ಈ ಕುರಿತಾದ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಭಾರಿ ವೈರಲ್ ಆಗುತ್ತಿದೆ.
ಸದ್ಯ ದಿನೇ ದಿನೇ ಪ್ರಕರಣಗಳು ಹೆಚ್ಚಾದ ಹಿನ್ನೆಲೆಯಲ್ಲಿ ಶಾಂಘೈನಲ್ಲಿ ಕೋವಿಡ್ -19 ನಿರ್ಬಂಧಗಳನ್ನು ವಿಸ್ತರಿಸಲಾಗಿದೆ. ಶಾಂಘೈನ ಪಶ್ಚಿಮ ಜಿಲ್ಲೆಗಳಲ್ಲಿ ಮಂಗಳವಾರ ಕೊನೆಗೊಳ್ಳಲಿದ್ದ ಎರಡನೇ ಹಂತದ ಲಾಕ್ಡೌನ್ ಅನ್ನು ಮತ್ತೆ ವಿಸ್ತರಿಸಲಾಗಿದೆ ಎಂದು ತಿಳಿದುಬಂದಿದೆ
ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಅಲ್ಲಿನ ಆರೋಗ್ಯ ಕಾರ್ಯಕರ್ತರು, ಸೇನಾದಳ ಸೇರಿದಂತೆ ಸುಮಾರು 26 ಮಿಲಿಯನ್ ಜನರನ್ನು ಕೊರೊನಾ ಟೆಸ್ಟ್ ಮಾಡಿಸುವಂತೆ ಸೂಚಿಸಲಾಗಿತ್ತು. ಅದರಂತೆ ಟೆಸ್ಟ್ ನಡೆಸಿದ ಬಳಿಕ 1,366 ಮಂದಿಯಲ್ಲಿ ಕೊರೊನಾ ಪತ್ತೆಯಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.