ರಾಜ್ಯಸಭೆಯಲ್ಲಿ ಕಾಂಗ್ರೆಸ್ ಮುಖಂಡ ಗುಲಾಮ್ ನಬಿ ಆಜಾದ್ ಅವರು ಮೂರು ವಿವಾದಾತ್ಮಕ ಕೃಷಿ ಮಸೂದೆಗಳನ್ನು ಪ್ರತಿಷ್ಠೆಯ ವಿಷಯವಾಗಿಸದೆ ಹಿಂಪಡೆಯುವಂತೆ ಸರ್ಕಾರವನ್ನು ಕೇಳಿದರು.ರಾಷ್ಟ್ರಧ್ವಜಕ್ಕೆ ಅಗೌರವ ತೋರಿಸಲಾಗುವುದಿಲ್ಲ ಎಂದು ಘೋಷಿಸಿದ ಅವರು, ಗಣರಾಜ್ಯೋತ್ಸವದಂದು ರೈತರ ಟ್ರಾಕ್ಟರ್ ರ್ಯಾಲಿಯಲ್ಲಿ ಕೆಂಪು ಕೋಟೆಯಲ್ಲಿ ನಡೆದ ಹಿಂಸಾಚಾರವನ್ನೂ ಖಂಡಿಸಿದರು.
ದೆಹಲಿಯಲ್ಲಿನ ಗಣರಾಜ್ಯೋತ್ಸವದ ಸಂದರ್ಭದಲ್ಲಿ ನಡೆದ ರೈತರ ಟ್ರ್ಯಾಕ್ಟರ್ ರ್ಯಾಲಿ ಸಂದರ್ಭದಲ್ಲಿನ ವಿಚಾರವಾಗಿ ಶಶಿ ತರೂರ್ ಹಾಗೂ ಆರು ಪತ್ರಕರ್ತರ ವಿರುದ್ಧ ದೇಶದ್ರೋಹ, ಕ್ರಿಮಿನಲ್ ಪಿತೂರಿ ಮತ್ತು ಭಾರತೀಯ ದಂಡ ಸಂಹಿತೆಯಡಿ ದ್ವೇಷವನ್ನು ಉತ್ತೇಜಿಸುವುದು ಸೇರಿದಂತೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಕರೋನವೈರಸ್ ಸಾಂಕ್ರಾಮಿಕ ರೋಗವನ್ನು ನಿಭಾಯಿಸುವಲ್ಲಿ ಮೋದಿ ಸರ್ಕಾರ ವಿಫಲವಾಗಿದೆ ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ವಾಗ್ದಾಳಿ ನಡೆಸಿದ್ದಾರೆ ಮತ್ತು ಕೊರೊನಾ ನಿಯಂತ್ರಿಸುವಲ್ಲಿ ಪಾಕಿಸ್ತಾನ ಭಾರತಕ್ಕಿಂತ ಉತ್ತಮ ಸಾಧನೆ ಮಾಡಿದೆ ಎಂದು ಹೇಳಿದ್ದಾರೆ.
ಕ್ರಿಕೆಟ್ ಅನುಯಾಯಿಯಾದ ಭಾರತೀಯ ರಾಜಕಾರಣಿ ಶಶಿ ತರೂರ್ ಅವರು 1990 ರ ದಶಕದ ಮಧ್ಯಭಾಗದದಲ್ಲಿ ನಾಯಕನಾಗಿ ಸಚಿನ್ ತೆಂಡೂಲ್ಕರ್ ಅತ್ಯುತ್ತಮ ಆಯ್ಕೆ ಎಂದು ಭಾವಿಸಿದ್ದರು, ಆದರೆ ಅವರಿಗೆ ಜವಾಬ್ದಾರಿಯನ್ನು ನೀಡಿದಾಗ ಅವರ ಗ್ರಹಿಕೆ ಬದಲಾಯಿತು ಮತ್ತು ಉತ್ತಮ ಫಲಿತಾಂಶಗಳನ್ನು ನೀಡಲಿಲ್ಲ.
ಟ್ವಿಟರ್ ಇಂಡಿಯಾದೊಂದಿಗೆ ಸಂವಹನ ನಡೆಸಲು ದೆಹಲಿ ಪೊಲೀಸರಿಗೆ ನಿರ್ದೇಶನ ನೀಡುವಂತೆ ಕೋರಿ ಕಾಂಗ್ರೆಸ್ ಸಂಸದ ಶಶಿ ತರೂರ್ ( Shashi Tharoor) ದೆಹಲಿ ಹೈಕೋರ್ಟ್‌ಗೆ ಮೊರೆ ಹೋಗಿದ್ದಾರೆ ಮತ್ತು ವಿಚಾರಣೆಯ ಬಾಕಿ ಇರುವ ಸಂದರ್ಭದಲ್ಲಿ ಅವರ ಮೃತ ಪತ್ನಿ ಸುನಂದಾ ಪುಷ್ಕರ್ ಅವರ ಅಧಿಕೃತ ಖಾತೆಯನ್ನು ಸಂರಕ್ಷಿಸುವಂತೆ ಕೇಳಿಕೊಂಡಿದ್ದಾರೆ.
ಮಾಹಿತಿ ಹಕ್ಕಿನ ಅಡಿಯಲ್ಲಿ ತುಕ್ಡೆ-ತುಕ್ಡೆ ಗ್ಯಾಂಗ್ ಬಗ್ಗೆ ಕೇಂದ್ರ ಗೃಹ ಸಚಿವಾಲಯ ನೀಡಿರುವ ಮಾಹಿತಿ ಹಿನ್ನಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಶಶಿ ತರೂರ್ 'ತುಕ್ಡೆ-ತುಕ್ಡೆ ಗ್ಯಾಂಗ್' ಅಸ್ತಿತ್ವದಲ್ಲಿದೆ ಎಂದು ಟ್ವೀಟ್ ಮಾಡಿದ್ದಾರೆ.
ಕಾಂಗ್ರೆಸ್ ಸಂಸದ ಶಶಿ ತರೂರ್ ಅವರು ಭಾನುವಾರ ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ದೆಹಲಿಯ ಶಾಹೀನ್ ಬಾಗ್ ಮತ್ತು ಜಾಮಿಯಾ ಮಿಲಿಯಾ ಇಸ್ಲಾಮಿಯಾದ ನಾಗರಿಕರ ರಾಷ್ಟ್ರೀಯ ನೋಂದಣಿ ವಿರುದ್ಧ ಆಂದೋಲನ ನಡೆಸುತ್ತಿರುವ ನೂರಾರು ಪ್ರತಿಭಟನಾಕಾರರೊಂದಿಗೆ ಸೇರಿಕೊಂಡರು.
ಹಿರಿಯ ಕಾಂಗ್ರೆಸ್ ಮುಖಂಡ ಶಶಿ ತರೂರ್ ಅವರು ತಮ್ಮ ಪಕ್ಷದ ಸಹೋದ್ಯೋಗಳು ದೀಪಿಕಾ ಪಡುಕೋಣೆ ಅಭಿನಯದ ಛಪಾಕ್ ನ ಉಚಿತ ಚಲನಚಿತ್ರ ಟಿಕೆಟ್ ನೀಡುವುದನ್ನು ಬೆಂಬಲಿಸಿದ್ದಾರೆ, ಜೆಎನ್‌ಯು ವಿದ್ಯಾರ್ಥಿಗಳೊಂದಿಗೆ ಒಗ್ಗಟ್ಟನ್ನು ತೋರಿಸಿದ್ದಕ್ಕಾಗಿ ನಟಿಯನ್ನು ಬೆಂಬಲಿಸುವುದು ಇದರ ಸೂಚಕವಾಗಿದೆ ಎಂದು ಹೇಳಿದ್ದಾರೆ.
ಕಾಂಗ್ರೆಸ್ ಮುಖಂಡ ಶಶಿ ತರೂರ್ ಇಂದು ಕಾಶ್ಮೀರದ ಮೇಲೆ ಪಾಕಿಸ್ತಾನದ ಮೇಲೆ ವಾಗ್ದಾಳಿ ನಡೆಸಿ ವಿಶ್ವಸಂಸ್ಥೆಗೆ ಕೊಂಡೊಯ್ಯುವ ವಿಷಯದಲ್ಲಿ ಭಾರತದ ವಿರೋಧ ಪಕ್ಷಗಳು ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಒಗ್ಗಟ್ಟಾಗಿ ನಿಂತಿವೆ ಎಂದು ಹೇಳಿದ್ದಾರೆ.
ಪಿಎಂ ಮೋದಿಯವರನ್ನು ಶ್ಲಾಘಿಸುವ ವಿಷಯದ ಬಗ್ಗೆ ಶಶಿ ತರೂರ್ ಅವರಿಂದ ಸ್ಪಷ್ಟನೆ ಪಡೆಯುತ್ತೇವೆ ಎಂದು ಕೇರಳ ಕಾಂಗ್ರೆಸ್ ಅಧ್ಯಕ್ಷ ಮುಲ್ಲಾಪಲ್ಲಿ ರಾಮಚಂದ್ರನ್ ಮಂಗಳವಾರ ಕಣ್ಣೂರಿನಲ್ಲಿ ಹೇಳಿದರು.
ಈಗ ಶಶಿ ತರೂರ್ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ,ಅಷ್ಟಕ್ಕೂ ಅವರು ಸುದ್ದಿಯಲ್ಲಿರುವುದು ಈಗ ರಾಜಕೀಯ ಹೇಳಿಕೆಗಳಿಗಾಗಿ ಅಥವಾ ಯಾವುದೇ ವಿವಾದದ ಕಾರಣಕ್ಕಾಗಿ ಅಲ್ಲ ಬದಲಾಗಿ ಈಗ ಅವರು ಸುದ್ದಿಯಾಗಿರುವುದು ಅವರು ಕಂಡು ಹಿಡಿದ ಹೊಸ ಇಂಗ್ಲಿಷ್ ಪದಕ್ಕಾಗಿ!
ಸುಪ್ರೀಂಕೋರ್ಟ್ ಸೆಕ್ಷನ್ 377ನ್ನು ಅಮಾನ್ಯ ಮಾಡಿರುವ ಕುರಿತಾಗಿ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ನಾಯಕ ಶಶಿ ತರೂರ್" ಸುಪ್ರೀಂ ಸಮಾನತೆಯ ಮೌಲ್ಯವನ್ನು ಎತ್ತಿ ಹಿಡಿದಿದೆ ಎಂದು ಅಭಿಪ್ರಾಯಪಟ್ಟರು