ಶಿವಮೊಗ್ಗದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ನೇತೃತ್ವದಲ್ಲಿ, ವಾಟರ್ ಸೆಲ್ಯೂಟ್ ಮೂಲಕ ಮೊದಲ ವಿಮಾನಯಾನ ಸೇವೆ ಆರಂಭ ಮಾಡಲಾಯಿತು. ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಬಂದಿಳಿದ ಎಲ್ಲ ಪ್ರಯಾಣಿಕರಿಗೂ ಸಚಿವ ಮಧು ಬಂಗಾರಪ್ಪ ಸೇರಿದಂತೆ ವಿಮಾನ ನಿಲ್ದಾಣದ ಸಿಬ್ಬಂದಿ ಗುಲಾಬಿ ಹೂವು ಮತ್ತು ಸಿಹಿ ನೀಡಿ ಸ್ವಾಗತಿಸಿದರು.
M B Patil : ಶಿವಮೊಗ್ಗ ವಿಮಾನ ನಿಲ್ದಾಣ ಆಗಸ್ಟ್ 11ರಿಂದ ಕಾರ್ಯಾಚರಣೆಗೊಳ್ಳುವ ಸಾಧ್ಯತೆ ಇದ್ದು, ಇದಕ್ಕೆ ಮುಂಚಿತವಾಗಿ ಜುಲೈ 20ರೊಳಗೆ ಬೇಕಿರುವ ಎಲ್ಲಾ ವ್ಯವಸ್ಥೆಗಳನ್ನು ಮಾಡಲಾಗುವುದು ಎಂದು ಬೃಹತ್ ಕೈಗಾರಿಕೆ ಮತ್ತು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂಬಿ ಪಾಟೀಲ ಗುರುವಾರ ಹೇಳಿದ್ದಾರೆ.
ಶಿವಮೊಗ್ಗ ವಿಮಾನ ನಿಲ್ದಾಣದಿಂದ ಬೇರೆ ಪ್ರದೇಶಗಳಿಗೆ ವಿಮಾನ ಸಂಚಾರ ಕುರಿತಂತೆ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಸಂಸದ ಬಿ.ವೈ. ವಿಜಯೆಂದ್ರ, ಶಿವಮೊಗ್ಗದಿಂದ ಇನ್ನೂ ನಾಲ್ಕು ಮಾರ್ಗಗಳಲ್ಲಿ ವಿಮಾನ ಸಂಚಾರಕ್ಕೆ ಉಡಾನ್ ಯೋಜನೆಯಡಿಯಲ್ಲಿ ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದ್ದಾರೆ.
Shivamogga Airport Photos : ಪ್ರಧಾನಿ ನರೇಂದ್ರ ಮೋದಿ ಅವರು ಇಂದು ರಾಜ್ಯದ ಶಿವಮೊಗ್ಗ ವಿಮಾನ ನಿಲ್ದಾಣವನ್ನು ಉದ್ಘಾಟಿಸಲಿದ್ದಾರೆ. ಶಿವಮೊಗ್ಗ ವಿಮಾನ ನಿಲ್ದಾಣವು ಶೀಘ್ರದಲ್ಲೇ ಸಾರ್ವಜನಿಕರಿಗೆ ಕಾರ್ಯನಿರ್ವಹಿಸಲಿದೆ ಮತ್ತು ಪ್ರಯಾಣಿಕರ ಸುಗಮ ಪ್ರಯಾಣಕ್ಕಾಗಿ ಹಲವು ಪ್ರಮುಖ ವೈಶಿಷ್ಟ್ಯಗಳನ್ನು ಹೊಂದಿದೆ.
ರಾಜ್ಯ ಸರ್ಕಾರ ಶಿವಮೊಗ್ಗದಲ್ಲಿನ ವಿಮಾನ ನಿಲ್ದಾಣಕ್ಕೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರ ಹೆಸರನ್ನು ನಾಮಕರಣ ಮಾಡಲು ನಿರ್ಧಿಸಿದ ಬೆನ್ನಲೇ ಈಗ ಬಿಎಸ್ವೈ ಅವರು ವಿಮಾನ ನಿಲ್ದಾಣಕ್ಕೆ ತಮ್ಮ ಹೆಸರು ಬೇಡ, ಆದರೆ ತಮ್ಮ ಹೆಸರಿನ ಬದಲಾಗಿ ನಾಡಿಗೆ ಕೊಡುಗೆ ನೀಡಿರುವ ಇತರ ಮಹನೀಯರ ಹೆಸರನ್ನು ನಾಮಕರಣ ಮಾಡಬೇಕೆಂದು ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.