ತಾಲೂಕು ಪಂಚಾಯತ್ ರದ್ಧತಿ ಕೇವಲ ಊಹಾಪೋಹ. ಅದನ್ನು ರದ್ದು ಮಾಡಲು ರಾಜ್ಯ ಸರ್ಕಾರದಿಂದ ಸಾಧ್ಯವಿಲ್ಲ. ಆದ ಕಾರಣ ಈ ಬಾರಿಯೂ ಮೂರು ವಿಭಾಗದ ಪಂಚಾಯತ್ ರಾಜ್ ವ್ಯವಸ್ಥೆಯಡಿಯಲ್ಲಿಯೇ ಚುನಾವಣೆ ನಡೆಯಲಿದೆ ಎಂದು ಕಾರ್ಮಿಕ ಮತ್ತು ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ್ ಹೇಳಿದರು.
ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ, ಕಳೆದ ಒಂದು ವಾರದಿಂದ ಮುಂಬೈನ ರಿನೈಸೆನ್ಸ್ ಹೊಟೆಲ್ನಲ್ಲಿ ವಾಸ್ತವ್ಯ ಹೂಡಿರುವ ಯಲ್ಲಾಪುರ ಶಾಸಕ ಶಿವರಾಮ ಹೆಬ್ಬಾರ್ ನಿನ್ನೆ ತಡರಾತ್ರಿ ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಸುದೀರ್ಘವಾದ ಪೋಸ್ಟ್ ಒಂದನ್ನು ಹಾಕಿದ್ದಾರೆ.