ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಪತ್ರಿಕೋದ್ಯಮದಲ್ಲಿ ಸಾಮಾಜಿಕ ನ್ಯಾಯ ಕುರಿತು ವರದಿ ,ವಿಶೇಷ ಲೇಖನಗಳ ಪ್ರಕಟಣೆಯನ್ನು ಗುರುತಿಸಿ,ಗೌರವಿಸುವ ಉದ್ದೇಶದಿಂದ ಮುಖ್ಯಮಂತ್ರಿಯವರು 2024 ರ ಆಯವ್ಯಯದಲ್ಲಿ ಹಿರಿಯ ಪತ್ರಕರ್ತ "ವಡ್ಡರ್ಸೆ ರಘುರಾಮಶೆಟ್ಟಿ" ಅವರ ಹೆಸರಿನಲ್ಲಿ ಸಾಮಾಜಿಕ ನ್ಯಾಯ ಪತ್ರಿಕೋದ್ಯಮ ಪ್ರಶಸ್ತಿ ಘೋಷಿಸಿದ್ದರು.
“ವಡ್ಡರ್ಸೆ ರಘುರಾಮ ಶೆಟ್ಟಿ” ಸಾಮಾಜಿಕ ನ್ಯಾಯ ಪತ್ರಿಕೋದ್ಯಮ ಪ್ರಶಸ್ತಿಗೆ ಅರ್ಹರನ್ನು ಆಯ್ಕೆ ಮಾಡಲು ಪತ್ರಕರ್ತರಿಂದ ಅರ್ಜಿ ಆಹ್ವಾನಿಸಲಾಗಿದೆ ಹಾಗೂ ಸಾರ್ವಜನಿಕರು, ಸಂಘ - ಸಂಸ್ಥೆಗಳು ಅರ್ಹ ಪತ್ರಕರ್ತರನ್ನು ಪ್ರಶಸ್ತಿಗೆ ನಾಮನಿರ್ದೇಶನ ಮಾಡಬಹುದಾಗಿದೆ.
ಗೋಕುಲಾಷ್ಟಮಿಗೂ ಇಮಾಮ್ ಸಾಬೀಗೂ ಏನು ಸಂಬಂಧ ಎಂದು ಕೇಳುವಂತೆ ಸಾಮಾಜಿಕ ನ್ಯಾಯ, ಮೀಸಲಾತಿಗೂ ಬಿಜೆಪಿಗೂ ಏನು ಸಂಬಂಧ ಎಂದು ಕೆಪಿಸಿಸಿ ಉಪಾಧ್ಯಕ್ಷರಾದ ವಿ.ಎಸ್. ಉಗ್ರಪ್ಪ ಅವರು ಪ್ರಶ್ನಿಸಿದ್ದಾರೆ.
ಕಾಂಗ್ರೆಸ್ ಇರುವವರೆಗೂ, ನಾನು ಇರುವವರೆಗೂ ಸಾಮಾಜಿಕ ನ್ಯಾಯಕ್ಕೆ ನಾವು ಬದ್ಧರು. ವಿಪಕ್ಷಗಳಿಂದ ಸಾಮಾಜಿಕ ನ್ಯಾಯದ ಪಾಠ ಹೇಳಿಸಿಕೊಳ್ಳುವ ಅಗತ್ಯವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಅವರು ಬಿಜೆಪಿಗೆ ತಿರುಗೇಟು ನೀಡಿದ್ದಾರೆ.
ಮುಸ್ಲಿಂ ಸಮುದಾಯಕ್ಕೆ ನೀಡುತ್ತಿರುವ ಮೀಸಲಾತಿ ಸಾಮಾಜಿಕ ನ್ಯಾಯದ ನೆಲೆಯಲ್ಲಿ ನೀಡಲಾಗುತ್ತಿದೆಯೇ ಹೊರತು ಓಲೈಕೆ ದೃಷ್ಟಿಯಿಂದಲ್ಲ ಎಂದು ಟಿಡಿಪಿ ನಾಯಕ ಮತ್ತು ಚಂದ್ರಬಾಬು ನಾಯ್ಡು ಅವರ ಪುತ್ರ ನರಾ ಲೋಕೇಶ್ ಹೇಳಿದ್ದಾರೆ.
Dr. B.R. Ambedkar : ಡಾ. ಬಿ.ಆರ್.ಅಂಬೇಡ್ಕರ್ ಅವರು ಬರಿ ವ್ಯಕ್ತಿಯಲ್ಲ, ಈ ದೇಶದ ಶಕ್ತಿ. ವಿಶ್ವಕ್ಕೆ ಮಾದರಿಯಾಗುವ ಸಂವಿಧಾನವನ್ನು ಬಾಬಾಸಾಹೇಬ್ ಅಂಬೇಡ್ಕರ್ ಅವರು ಕೊಟ್ಟಿದ್ದಾರೆ. ನಾವು ಇಂದು ಸರ್ವ ಸ್ವತಂತ್ರವಾಗಿ ಒಂದಾಗಿ ಬಾಳುತ್ತಿದ್ದೇವೆ ಎಂದರೆ ಅದಕ್ಕೆ ಬಾಬಾಸಾಹೇಬ್ ಅಂಬೇಡ್ಕರ್ ಅವರು ಈ ದೇಶಕ್ಕೆ ಕೊಟ್ಟ ಸಂವಿಧಾನ ಕಾರಣ ಎಂದು ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ (ಸ್ಟಾರ್ ಚಂದ್ರು) ಅವರು ಹೇಳಿದರು.
Basavaraj Bommai : ನಾವು ಇನ್ನು ಮುಂದೆ ಅಂಬೇಡ್ಕರ್ ಅವರನ್ನೂ ಮಹಾತ್ಮಾ ಅಂಬೇಡ್ಕರ್ ಎಂದು ಕರೆಯಬೇಕು. ಸಂವಿಧಾನದ ಮಾರ್ಗದಲ್ಲಿ ನಡೆಯುವುದೇ ನಾವು ದೇಶಕ್ಕೆ ಕೊಡುವ ಗೌರವ. ಚುನಾವಣೆ ಬಂದೆ ಬರುತ್ತವೆ. ಸಂವಿಧಾನ, ಅಂಬೇಡ್ಕರ್ ವಿಚಾರದಲ್ಲಿ ನಾವೆಲ್ಲರೂ ಒಂದೇ ಎನ್ನುವ ಸಂದೇಶ ಸಾರಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಯಾರೂ ಏನೇ ಹೇಳಿದರೂ ಸಾಮಾಜಿಕ ನ್ಯಾಯದಲ್ಲಿ ರಾಜಿ ಇಲ್ಲದೆ ಕೆಲಸ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.ಅವರು ಇಂದು ಅಖಿಲ ಕರ್ನಾಟಕ ಗಾಣಿಗರ ಸಂಘ ಆಯೋಜಿಸಿದ್ದ ಸುವರ್ಣ ಮಹೋತ್ಸವ ಸಮಾರಂಭ ಮತ್ತು ಗಾಣಿಗ ಜನಾಂಗದ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು.
ಜಾತಿವಾರು ಮತ್ತು ಪ್ರಾದೇಶಿಕ ಪ್ರಾತಿನಿಧ್ಯದ ಜತೆಗೆ ಸಾಮಾಜಿಕ ನ್ಯಾಯದ ಮಾನದಂಡದಲ್ಲಿ ಹಿರಿಯ ಹಾಗೂ ಕಿರಿಯ ಶಾಸಕರುಗಳನ್ನು ಸಚಿವ ಸಂಪುಟಕ್ಕೆ ಆಯ್ಕೆ ಮಾಡಿಕೊಳ್ಳುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮತೋಲನ ಮೆರೆದಿದ್ದಾರೆ.
ಲೋಕಸಭಾ ಸದಸ್ಯ ವಿ. ಶ್ರೀನಿವಾಸಪ್ರಸಾದರ ವಿಶೇಷ ಕಾಳಜಿ ಹಾಗೂ ಮುತುವರ್ಜಿಯಿಂದ ಜಿಲ್ಲೆಯು ರಾಜ್ಯದಲ್ಲಿ ಆಯ್ಕೆಯಾಗಿದ್ದು ಪ್ರತಿ ಊರುಗಳಲ್ಲಿ ವಿಶೇಷ ಚೇತನರನ್ನು ಗುರುತಿಸಿ ಅವರಿಗೆ ಸಾರಿಗೆ ಸೌಲಭ್ಯ ಕಲ್ಪಿಸಿ ಸಾಧನಗಳನ್ನು ವಿತರಿಸಲಾಯಿತು.
ಸಂವಿಧಾನದ ಆಶಯದಂತೆ ಎಲ್ಲರಿಗೂ ಶಿಕ್ಷಣದ ಹಕ್ಕು ಜಾರಿಯಾಗಬೇಕು.ಗುಣಾತ್ಮಕ ಶಿಕ್ಷಣ ದೊರೆತಾಗ ಮಾತ್ರ ತಳಸಮುದಾಯಗಳ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದು ತೆಲಂಗಾಣ ರಾಜ್ಯ ಪೊಲೀಸ್ ಆಯುಕ್ತ ಹಾಗೂ ಕಾರ್ಯದರ್ಶಿ ಸಮಾಜ ಕಲ್ಯಾಣ ಮತ್ತು ಬುಡಕಟ್ಟು ಕಲ್ಯಾಣ ವಸತಿಶಾಲೆ ಶಿಕ್ಷಣ ಸಂಸ್ಥೆಗಳ ಸೊಸೈಟಿ,ಅಧ್ಯಕ್ಷ ಸ್ವೆರೋಸ್ ನೆಟ್ವರ್ಕ್ ನ ಡಾ.ಆರ್.ಎಸ್.ಪ್ರವೀಣಕುಮಾರ (IPS) ಹೇಳಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.