ಕಾಂಗ್ರೆಸ್ ಕಚೇರಿಯ ಭಾರತ ಜೋಡೋ ಭವನದಲ್ಲಿ ಗುರುವಾರ ನಡೆದ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ಶ್ರೀಮತಿ ಸೌಮ್ಯ ರೆಡ್ಡಿ ಅವರ ಪದಗ್ರಹಣ ಕಾರ್ಯಕ್ರಮದಲ್ಲಿ ಭಾಗವಹಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು, ಮಹಿಳೆಯರ ಸಬಲೀಕರಣಕ್ಕೆ ಕಾಂಗ್ರೆಸ್ ಪಕ್ಷ ಹೇಗೆ ಕಾರ್ಯಕ್ರಮ ರೂಪಿಸುತ್ತಿದೆ ಎಂದು ತಿಳಿಸಿದರು.
ರಾಜ್ಯದ ಒಂದು ಕೋಟಿ 21 ಲಕ್ಷ ಕುಟುಂಬಗಳಿಗೆ ಪ್ರತಿ ತಿಂಗಳು ಆರ್ಥಿಕ ಶಕ್ತಿ ನೀಡುತ್ತಿರುವುದು ನಾವು. ಬಿಜೆಪಿಯವರು ಅತ್ತೆ ಸೊಸೆ ಜಗಳ ಆಡ್ತಾರೆ ಎನ್ನುವ ಸುಳ್ಳು ನೆಪ ಮುಂದಿಟ್ಟು ಮಹಿಳೆಯರ ಖಾತೆಗೆ ಹೋಗುವ ಹಣವನ್ನು ನಿಲ್ಲಿಸಲು ಷಡ್ಯಂತ್ರ ನಡೆಸಿದ್ದರು.
ನಮ್ಮ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಹಾಗೂ ಕನ್ನಡಿಗರಿಗೆ ಅದರಲ್ಲೂ ರಾಜ್ಯದ ಮಹಿಳೆಯರಿಗೆ ಧನ್ಯವಾದ ಅರ್ಪಿಸುತ್ತೇನೆ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಗ್ಯಾರಂಟಿ ಯೋಜನೆಗಳ ಜಾರಿ ಸೇರಿದಂತೆ ಅನೇಕ ಉತ್ತಮವಾದ ಕೆಲಸ ಮಾಡುತ್ತಿದೆ ಎಂದು ಹೇಳಿದರು.
ಕರ್ನಾಟಕ ಮಹಿಳಾ ಕಾಂಗ್ರೆಸ್ಗೆ ಹೊಸ ಸಾರಥಿ
ಕಾಂಗ್ರೆಸ್ ಮಹಿಳಾ ಅಧ್ಯಕ್ಷೆಯಾಗಿ ಸೌಮ್ಯಾ ನೇಮಕ
ಸೌಮ್ಯಾ ರೆಡ್ಡಿ ನೇಮಕ ಮಾಡಿ ಎಐಸಿಸಿ ಆದೇಶ
ಪುಷ್ಪಾ ಅಮರನಾಥ್ ಅವಧಿ ಅಂತ್ಯ, ಹೊಸ ನೇಮಕ
ರಾಜ್ಯದ ಜತೆ ಚಂಡಿಗಢ, ಅರುಣಾಚಲಕ್ಕೂ ಹೊಸ ನೇಮಕ
ಸೌಮ್ಯರೆಡ್ಡಿ ಪರ ಸಿಎಂ ಸಿದ್ದರಾಮಯ್ಯ ಭರ್ಜರಿ ಮತಬೇಟೆ
ಸೌಮ್ಯರೆಡ್ಡಿ ಅವರು ಗೆದ್ದರೆ ನಾನು ಗೆದ್ದಂತೆ-ಸಿದ್ದರಾಮಯ್ಯ
ನಾವು ಬರೀ ಭಾವನಾತ್ಮಕವಾಗಿ ನಿಮ್ಮನ್ನು ಕೆರಳಿಸಿ ವಂಚಿಸಲ್ಲ
ಹೃದಯದ ಮಾತು ಕೇಳಿ ಮತ ಹಾಕಿ ಎಂದು ಸಿದ್ದರಾಮಯ್ಯ ಕರೆ
Lok Sabha Election 2024: ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಸೌಮ್ಯರೆಡ್ಡಿ ಪರವಾಗಿ ಎರಡನೇ ದಿನ ಬಿರುಸಿನ ರೋಡ್ ಶೋ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಂಸದ ತೇಜಸ್ವಿಸೂರ್ಯ ಅವರ ಸರಣಿ ವೈಫಲ್ಯಗಳನ್ನು ಜನರ ಮುಂದಿಟ್ಟು ಸೌಮ್ಯರೆಡ್ಡಿ ಗೆಲ್ಲಿಸುವಂತೆ ಕರೆ ನೀಡಿದರು.
CM Siddaramaiah: ಬೊಮ್ಮನಹಳ್ಳಿಯಲ್ಲಿ ನಡೆಯುತ್ತಿರುವ ಭರ್ಜರಿ ರೋಡ್ ಶೋದಲ್ಲಿ ಹತ್ತು ಸಾವಿರಕ್ಕೂ ಅಧಿಕ ಜನಸಮುದಾಯದ ಸಮ್ಮುಖದಲ್ಲಿ ಈ ಬಾರಿ ಸಂಸದ ತೇಜಸ್ವಿ ಸೂರ್ಯನಿಗೆ ಸೋಲಾಗುತ್ತದೆ ಎಂದರು.
Lok Sabha Elections 2024: ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಸೌಮ್ಯ ರೆಡ್ಡಿ ಅವರ ನಾಮಪತ್ರ ಸಲ್ಲಿಕೆಗೂ ಮುಂಚಿತವಾಗಿ ಜಯನಗರದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಮತಬೇಟೆಯಾಡಿದರು.
ಕೊನೆಗೂ ಜಯನಗರ ಕೇತ್ರದ ಚುನಾವಣಾ ಫಲಿತಾಂಶ ಪಕ್ರಟ. ಮರು ಎಣಿಕೆಯಲ್ಲಿ ಸೌಮ್ಯರೆಡ್ಡಿ ವಿರುದ್ಧ ಗೆದ್ದ ಬಿಜೆಪಿ ಅಭ್ಯರ್ಥಿ. ಸಿ.ಕೆ.ರಾಮಮೂರ್ತಿ, ಜಯನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ. ಜಯನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಾಮಮೂರ್ತಿ 57797 ಮತ. ಕಾಂಗ್ರೆಸ್ನ ಪಕ್ಷದ ಅಭ್ಯರ್ಥಿ ಸೌಮ್ಯರೆಡ್ಡಿ 57781 ಮತ. 16 ಮತಗಳ ಅಂತರದಿಂದ ಬಿಜೆಪಿಯ ರಾಮಮೂರ್ತಿ ಗೆಲುವು. ಮಧ್ಯರಾತ್ರಿ ಜಯನಗರ ಕ್ಷೇತ್ರದ ಫಲಿತಾಂಶಕ್ಕೆ ತೆರೆ.
Jayanagar Assembly Election Result: ಸಂಜೆ 7 ಗಂಟೆ ಸುಮಾರಿಗೆ ಮತ ಎಣಿಕೆ ಕೇಂದ್ರದ ಹೊರಗೆ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯಾ ರೆಡ್ಡಿ ವಿಜಯಿ ಎಂದು ಘೋಷಿಸಲಾಯಿತಾದರೂ ಅಂತಿಮ ನಿರ್ಧಾರ ನೀಡಿರಲಿಲ್ಲ. ಸೌಮ್ಯಾ ಕೇವಲ 180 ಮತಗಳಿಂದ ಗೆದ್ದಿದ್ದಾರೆ ಎಂದು ಸಿಕೆ ರಾಮಮೂರ್ತಿ ಹೇಳಿಕೊಂಡಿದ್ದಾರೆ. ಇದಾದ ಬಳಿಕ ಮತ ಎಣಿಕೆಯಲ್ಲಿ ಆಗಿರುವ ವ್ಯತ್ಯಯ ಕುರಿತು ಮಾತನಾಡಿದ ಕಾಂಗ್ರೆಸ್ ಕಾರ್ಯಕರ್ತರು, ಮತ್ತೆ ಮತ ಎಣಿಕೆ ನಡೆಯುತ್ತಿದೆ ಎಂದು ತಿಳಿಸಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.