ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಪ್ರಬಲ ಸ್ಪರ್ಧೆಯನ್ನು ನೀಡುವ ನಿಟ್ಟಿನಲ್ಲಿ ಮೈತ್ರಿ ಮಾಡಿಕೊಂಡಿರುವ ಎಸ್ಪಿ ಮತ್ತು ಬಿಎಸ್ಪಿ ಪಕ್ಷಗಳ ನಿರ್ಧಾರವನ್ನು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜೀ ಸ್ವಾಗತಿಸಿದ್ದಾರೆ.
ಉತ್ತರಪ್ರದೇಶದಲ್ಲಿ ಸಮಾಜವಾದಿ ಪಕ್ಷ ಮತ್ತು ಬಹುಜನ ಸಮಾಜ ಪಕ್ಷ ಲೋಕಸಭೆ ಚುನಾವಣೆಯಲ್ಲಿ ತಲಾ 38 ಸ್ಥಾನಗಳಲ್ಲಿ ಮೈತ್ರಿ ಮಾಡಿಕೊಳ್ಳುವುದಾಗಿ ನಿರ್ಧರಿಸಿದ್ದಾರೆ. ಆದರೆ ಈ ಮೈತ್ರಿಯಲ್ಲಿ ಕಾಂಗ್ರೆಸ್ ಪಕ್ಷವನ್ನು ಎರಡು ಪಕ್ಷಗಳು ಹೊರಗಿಟ್ಟಿವೆ.ರಾಯಬರೇಲಿ ಮತ್ತು ಅಮೇಥಿ ಕ್ಷೇತ್ರಗಳನ್ನು ಪರೋಕ್ಷವಾಗಿ ಕಾಂಗ್ರೆಸ್ ಪಕ್ಷಕ್ಕೆ ಬಿಟ್ಟುಕೊಡಲಾಗಿದೆ.ಇನ್ನುಳಿದ ಎರಡು ಸ್ಥಾನಗಳನ್ನು ಮೈತ್ರಿ ಪಕ್ಷಕ್ಕೆ ನೀಡಲಾಗಿದೆ.
ಅಖಿಲೇಶ್ ಯಾದವ್ ಮತ್ತು ಮಾಯಾವತಿ ಉತ್ತರಪ್ರದೇಶದ ಲಕ್ನೋದಲ್ಲಿರುವ ಪಂಚತಾರಾ ಹೋಟೆಲ್ ವೊಂದರಲ್ಲಿನ ನಾಳೆ ಪತ್ರಿಕಾಗೋಷ್ಠಿ ನಡೆಸಿ ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿನ ಮೈತ್ರಿ ವಿಚಾರವಾಗಿ ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ ಎನ್ನಲಾಗಿದೆ.
ಮೇಲ್ಜಾತಿಯ ಆರ್ಥಿವಾಗಿ ಹಿಂದುಳಿದವರಿಗೆ ಶೇ.10 ಮೀಸಲಾತಿ ಘೋಷಿಸಿದ ಬೆನ್ನಲ್ಲೇ, ಉನ್ನತ ಶಿಕ್ಷಣ ಸಂಸ್ಥೆಗಳ ಸೀಟುಗಳನ್ನು ಶೇ.10ರಷ್ಟು ಹೆಚ್ಚಿಸಲಾಗುವುದು ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ಗೋರಖ್ಪುರ್ ಮತ್ತು ಫುಲ್ಪುರ್ ಉಪ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಬಳಿಕ ಮೊದಲ ಬಾರಿಗೆ ಝೀ ನ್ಯೂಸ್ ಕಾಂಕ್ಲವೇ ಜೊತೆ ಮಾತನಾಡಿದ ಅಖಿಲೇಶ್ ಯಾದವ್ ತಮ್ಮ ಮತ್ತು ಬಹುಜನ ಪಕ್ಷದ ಮೈತ್ರಿಕೂಟವನ್ನು ಮುರಿಯಲು ಸಾದ್ಯವಿಲ್ಲ ಎಂದರು.
1993 ರಿಂದ ಮೊದಲ ಬಾರಿಗೆ ಈ ಚುನಾವಣೆಗಳು ಎಸ್ಪಿ ಮತ್ತು ಬಿಎಸ್ಪಿ ನಡುವೆ ಸಮನ್ವಯ ಏರ್ಪಟ್ಟಿದೆ. 1995 ರಲ್ಲಿ ಈ ಒಕ್ಕೂಟದ ಕುಸಿತದ ನಂತರ, ಎರಡು ಪಕ್ಷಗಳು ದೀರ್ಘಕಾಲದವರೆಗೆ ಕಹಿ ಅನುಭವವನ್ನು ಪಡೆದಿದ್ದವು.
2019ರ ಲೋಕಸಭೆ ಚುನಾವಣೆಗಾಗಿ ಬಹುಜನ ಸಮಾಜವಾದಿ ಪಕ್ಷ ಮತ್ತು ಅಖಿಲೇಶ್ ಯಾದವ್ ನೇತೃತ್ವದ ಸಮಾಜವಾದಿ ಪಕ್ಷದ ನಡುವೆ ಯಾವುದೇ ಮೈತ್ರಿ ಇಲ್ಲ ಎಂದು ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ ಭಾನುವಾರ ಸ್ಪಷ್ಟಪಡಿಸಿದ್ದಾರೆ.
ಅಖಿಲೇಶ್ ಪತ್ನಿ ಡಿಂಪಲ್ ಯಾದವ್ ಪ್ರಸ್ತುತ ಕನ್ನೌಜ್ನ ಸಂಸತ್ ಸದಸ್ಯರಾಗಿದ್ದಾರೆ. ಕಳೆದ ವರ್ಷ ಸೆಪ್ಟೆಂಬರ್ನಲ್ಲಿ ಛತ್ತೀಸ್ಗಢದ ರಾಯ್ಪುರದಲ್ಲಿ ನೀಡಿದ ಹೇಳಿಕೆಗೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿಯ ಈ ಅಭಿಪ್ರಾಯವನ್ನು ಬಹಳ ಮುಖ್ಯವೆಂದು ಪರಿಗಣಿಸಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.