Spark Kannada Movie : ಸ್ಪಾರ್ಕ್ ಸಿನಿಮಾ ಪೋಸ್ಟರ್ ವಿವಾದಕ್ಕೆ ತೆರೆಬಿದ್ದಿದೆ. ನೆನಪಿರಲಿ ಪ್ರೇಮ್ ಹುಟ್ಟುಹಬ್ಬಕ್ಕೆ ಸ್ಪಾರ್ಕ್ ಚಿತ್ರ ತಂಡದಿಂದ ನಿನ್ನೆ ಪೋಸ್ಟರ್ ವೊಂದನ್ನು ಬಿಡುಗಡೆ ಮಾಡಲಾಗಿತ್ತು. ಈ ಚಿತ್ರದಲ್ಲಿ ನಿರಂಜನ್ ಸುಧೀಂದ್ರ ನಾಯಕನಾಗಿ ನಟಿಸುತ್ತಿದ್ದು, ಪ್ರೇಮ್ ವಿಶೇಷ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಈ ಪೋಸ್ಟರ್ ವಿರುದ್ಧ ನಟಿ, ನಿರ್ಮಾಪಕಿ ಶೃತಿ ನಾಯ್ಡು ಅವರು ಕಾನೂನು ಹೋರಾಟ ಮಾಡುವುದಾಗಿ ಹೇಳಿದ್ದರು. ಆ ವಿವಾದವೀಗ ತಣ್ಣಗಾಗಿದ್ದು, ಚಿತ್ರದ ನಿರ್ದೇಶಕರು ರಮೇಶ್ ಇಂದಿರಾ ಬಳಿ ಕ್ಷಮೆಯಾಚಿಸಿದ್ದಾರೆ.