ಪ್ರತಿ ವರ್ಷದಂತೆ ಈ ವರ್ಷ ಕೂಡ ನವೆಂಬರ್ 14 ರಿಂದ 20ರವರೆಗೆ ಏಳು ದಿನಗಳ ಕಾಲ ಸಹಕಾರ ಸಪ್ತಾಹ ಹಮ್ಮಿಕೊಳ್ಳಲಾಗುವುದು. ನವೆಂಬರ್ 14ರಂದು ಹಿರಿಯ ಸಹಕಾರಿಗಳಿಗೆ “ಸಹಕಾರಿ ರತ್ನ” ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಅವರು ಹೇಳಿದರು.
ದಾವಣಗೆರೆಯಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು "ಅಕ್ಟೋಬರ್ 2ರಿಂದ ಯಶಸ್ವಿನಿ ಯೋಜನೆ ಜಾರಿಯಾಗುವ ಎಲ್ಲಾ ಸಾಧ್ಯತೆಯಿದೆ. ಈ ಮೂಲಕ ಮತ್ತೆ ಯೋಜನೆ ಪ್ರಾರಂಭವಾಗಲಿದ್ದು, ಎಲ್ಲಾ ತಯಾರಿಯನ್ನು ಮಾಡಲಾಗಿದೆ" ಎಂದರು.
ರಾಜ್ಯದಲ್ಲಿ 67 ಲಕ್ಷ ರೈತರಿದ್ದು ಸಹಕಾರ ಸಂಘಗಳ ವ್ಯಾಪ್ತಿಯಲ್ಲಿ 26 ಲಕ್ಷ ರೈತರು ಬಂದಿದ್ದಾರೆ. ಈ ವರ್ಷ ಶೇ 30 ಲಕ್ಷ ರೈತರಿಗೆ 20 ಸಾವಿರ ಕೋಟಿ ಸಾಲ ವಿತರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಹೊಸದಾಗಿ 3 ಲಕ್ಷ ರೈತರಿಗೆ ಸಾಲ ನೀಡಲು ಯೋಜಿಸಲಾಗಿದೆ ಎಂದರು.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕೋವಿಡ್ ಹಾಗೂ ಉಳಿದ ಪರಿಸ್ಥಿತಿಯಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಣೆ ಮಾಡುತ್ತಿದ್ದಾರೆಂದು ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರೇ ಹೇಳಿದ್ದಾರೆ. ಯಡಿಯೂರಪ್ಪ ಇನ್ನು ಎರಡೂವರೆ ವರ್ಷ ಆಡಳಿತ ನಡೆಸುತ್ತಾರೆ. ಉತ್ತಮ ಮತ್ತು ದಕ್ಷ ಆಡಳಿತ ನೀಡುತ್ತಿದ್ದಾರೆ ಎಂದೂ ಸಹ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ನಮಗೆ ಶಾ ಅವರ ಸರ್ಟಿಫಿಕೇಟ್ ಸಾಕು- ಎಸ್ಟಿ ಸೋಮಶೇಖರ್
By accepting cookies, you agree to the storing of cookies on your device to enhance site navigation, analyze site usage, and assist in our marketing efforts.