ಸ್ವಾಮೀಜಿ ಬೆಂಗಳೂರಿನ ಸ್ಲಂಗಳಲ್ಲಿರುವ ಮಕ್ಕಳಿಗೆ ಸಂಪೂರ್ಣವಾಗಿ ಉಚಿತ ಶಿಕ್ಷಣ ನೀಡುವ ಇಂಗಿತ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸರ್ಕಾರ ಗಮನಹರಿಸಲಾಗುವುದು ಎಂದು ಸಚಿವ ಸೋಮಶೇಖರ್ ತಿಳಿಸಿದ್ದಾರೆ.
ಜೇನುನೊಣಗಳಿಂದಲೂ ಪರಿಸರಕ್ಕೆ ಪೂರಕವಾದ ವಾತಾವರಣ ನಿರ್ಮಾಣವಾಗಿದೆ. ಶೇಕಡಾ 85ರಷ್ಟು ಪರಾಗಸ್ಪರ್ಶವಾಗುವುದರಿಂದ ಇತರ ಬೆಳೆಗಳಿಗೂ ಅನುಕೂಲವಾಗುತ್ತಿದೆ. ಆತ್ಮನಿರ್ಭರ ಭಾರತ್ ಯೋಜನೆಯಡಿ ಜೇನು ಕೃಷಿಯೂ ಸೇರಿದೆ.
ದಸರಾ ಕಾರ್ಯಕ್ರಮದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ 1 ಸಾವಿರ ಹಾಗೂ ತಾಯಿ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಉದ್ಘಾಟನಾ ಕಾರ್ಯಕ್ರಮಕ್ಕೆ 2 ಸಾವಿರ ಮಂದಿ ಭಾಗವಹಿಸಲು ಅವಕಾಶ ಮಾಡಿಕೊಡಬೇಕು ಎಂದು ಸರ್ಕಾರಕ್ಕೆ ಕೇಳಿಕೊಂಡಿದ್ದೇವೆ- ಎಸ್.ಟಿ. ಸೋಮಶೇಖರ್
ರಾಜ್ಯ ಸರ್ಕಾರ ಹಾಗೂ ಸಹಕಾರ ಇಲಾಖೆಯ ಪ್ರಮುಖ ಯೋಜನೆಗಳಲ್ಲೊಂದಾದ ಆರ್ಥಿಕ ಸ್ಪಂದನ ಕಾರ್ಯಕ್ರಮವನ್ನು ಅಕ್ಟೋಬರ್ 2ರಂದು ಮೈಸೂರಿನಲ್ಲಿ ಏರ್ಪಡಿಸಲಾಗುತ್ತಿದೆ ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ. ಸೋಮಶೇಖರ್ ತಿಳಿಸಿದರು.
ಇಂದು ಸಂಜೆ ದಸರಾ ಕಮಿಟಿಗಳಿಗೆ ಸಂಬಂಧಪಟ್ಟಂತೆ ಸಭೆ ಕರೆಯಲಾಗಿದೆ. ಆಶಾ ಕಾರ್ಯಕರ್ತೆಯರು, ಪೌರಕಾರ್ಮಿಕರು ಸೇರಿದಂತೆ ಆಹ್ವಾನಿತರಾಗುತ್ತಿರುವ ಆಯಾ ಇಲಾಖೆಯ ತಲಾ ಒಬ್ಬರು ಉದ್ಘಾಟಕರ ಹೆಸರನ್ನು ಆಯ್ಕೆ ಮಾಡಿ ಕಳುಹಿಸುವಂತೆ ಸಂಬಂಧಪಟ್ಟ ಇಲಾಖೆಗಳಿಗೆ ಸೂಚಿಸಲಾಗಿದೆ ಎಂದು ಸಚಿವರು ತಿಳಿಸಿದರು.
ಕಳೆದ ವರ್ಷ ಹಾಗೂ ಈ ಬಾರಿ ಎಲ್ಲೆಲ್ಲಿ ಹಾನಿಯಾಗಿದೆ ಎಂಬ ಬಗ್ಗೆ ಮುಂದಿನ ವಾರ ಪ್ರತಿ ಕ್ಷೇತ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತೇನೆ. ಶಾಶ್ವತ ಪರಿಹಾರಕ್ಕಾಗಿ ಆಗ್ರಹಗಳು ಕೇಳಿಬರುತ್ತಿದ್ದು, ಆಯಾ ಕ್ಷೇತ್ರದಲ್ಲಿಯೇ ಸಭೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಚಿವರು ತಿಳಿಸಿದರು.
ನನ್ನ ಕಾರ್ಯವೈಖರಿ ಬಗ್ಗೆ ಸಹ ಮಾನ್ಯ ಮುಖ್ಯಮಂತ್ರಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಮುಂದೆಯೂ ಇದೇ ಮಾದರಿಯಲ್ಲಿ ಕಾರ್ಯನಿರ್ವಹಣೆ ಮಾಡಿ ಎಂದು ಮುಖ್ಯಮಂತ್ರಿಗಳು ಸಲಹೆ ಹಾಗೂ ಮಾರ್ಗದರ್ಶನ ಮಾಡಿದ್ದಾರೆ ಎಂದು ಸಚಿವರಾದ ಸೋಮಶೇಖರ್ ತಿಳಿಸಿದರು.
ಎಲ್ಲ ಕ್ಷೇತ್ರಗಳಿಗೆ ಪ್ರತ್ಯೇಕ ಉಸ್ತುವಾರಿ ವೈದ್ಯಾಧಿಕಾರಿಯೊಬ್ಬರನ್ನು ನೇಮಿಸಬೇಕು. ಇನ್ನು ಹೆಚ್ಚು ಸೋಂಕಿತರು ಇರುವ ಎನ್ ಆರ್ ಕ್ಷೇತ್ರದಲ್ಲಿ ಸಂಸದರ ನೇತೃತ್ವದಲ್ಲಿ ಒಂದು ಪ್ರತ್ಯೇಕ ತಂಡ ರಚಿಸಿ, ಅಧಿಕಾರಿಗಳನ್ನು ನಿಯೋಜಿಸಬೇಕು.
ಮುಖ್ಯಮಂತ್ರಿಗಳು ಬೆಂಗಳೂರಿನ 8 ವಲಯದ ಉಸ್ತುವಾರಿ ಸಚಿವರ ಜೊತೆ ಚರ್ಚೆ ನಡೆಸಿದ್ದಾರೆ. ನಾವು ಖಾಸಗಿ ಆಸ್ಪತ್ರೆಗಳಿಗೆ ಯಾವುದೇ ಒತ್ತಡ ಹಾಕುವುದಿಲ್ಲ ಎಂದು ಮತ್ತೊಮ್ಮೆ ಸ್ಪಷ್ಟಪಡಿಸಿದರು.