Former CM Yeddyurappa : ಬಿಜೆಪಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಪೋಕ್ಸೋ ಪ್ರಕರಣದಡಿ ತನಿಖೆ ನಡೆಯುತ್ತಿದ್ದು, ಕೇಂದ್ರ ತನಿಖಾ ಸಂಸ್ಥೆ ಅಧಿಕಾರಿಗಳು ನೋಟಿಸ್ ಜಾರಿ ಮಾಡಿದ್ದಾರೆ.
Amit Shah Fake Video Case: ಬಿಜೆಪಿ ಮತ್ತು ಗೃಹ ಸಚಿವಾಲಯದ ದೂರುಗಳ ನಂತರ ಎಡಿಟ್ ಮಾಡಿದ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿತ್ತು. ಹೀಗಾಗಿ ಈ ಬಗ್ಗೆ ದೆಹಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.
Goa High Court relief Arvind Kejriwal: 2017ರ ಗೋವಾ ವಿಧಾನಸಭಾ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಭಾಷಣಕ್ಕೆ ಸಂಬಂಧಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಳ ನ್ಯಾಯಾಲಯವು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರಿಗೆ ನೀಡಿದ್ದ ಸಮನ್ಸ್ ಅನ್ನು ಗೋವಾ ಹೈಕೋರ್ಟ್ ರದ್ದುಗೊಳಿಸಿದೆ.
ಸಮನ್ಸ್ ಮುಂದೂಡುವಂತೆ ಜಾರಿ ನಿರ್ದೇಶನಾಲಕ್ಕೆ ವಿನಂತಿಸಿದ್ದೆ. ಭಾರತ್ ಜೋಡೋ ಯಾತ್ರೆ ದೃಷ್ಟಿಯಿಂದ ಇಡಿಗೆ ಮನವಿ ಮಾಡಿದ್ದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಹೇಳಿದ್ದಾರೆ. ಅದನ್ನು ತಿರಸ್ಕರಿಸಿರುವುದು ರಾಜಕೀಯ ಕಿರುಕುಳದ ಸ್ಪಷ್ಟ ಸಂಕೇತ ಎಂದು ಡಿಕೆಶಿ ಟ್ವೀಟ್ ಮಾಡಿದ್ದಾರೆ.
ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜುಲೈ 21 ರಂದು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿಗೆ ಜಾರಿ ನಿರ್ದೇಶನಾಲಯ (ಇಡಿ) ಸಮನ್ಸ್ ನೀಡಿದೆ. ಈ ಹಿಂದೆ ಸೋನಿಯಾ ಅವರಿಗೆ ಜುಲೈ 22ಕ್ಕೆ ನಾಲ್ಕು ವಾರಗಳ ಕಾಲಾವಕಾಶ ನೀಡಲಾಗಿತ್ತು.
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಈಗಾಗಲೇ ಸಮನ್ಸ್ ನೀಡಿರುವ ಹಿನ್ನೆಲೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಇಂದು ವಿಶೇಷ ಕೋರ್ಟ್ನಲ್ಲಿ ವಿಚಾರಣೆಗೆ ಹಾಜರಾಗಲಿದ್ದಾರೆ. ಆಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ.ಅಧಿಕಾರಿಗಳು ಇತ್ತೀಚೆಗಷ್ಟೇ ಚಾರ್ಜ್ಶೀಟ್ ಸಲ್ಲಿಸಿದ್ರು. ಅದರಂತೆ ಡಿ.ಕೆ.ಶಿವಕುಮಾರ್ ಸೇರಿ ಐವರಿಗೆ ನ್ಯಾಯಾಲಯವು ಸಮನ್ಸ್ ಜಾರಿ ಮಾಡಿತ್ತು. ಇಂದು ದೆಹಲಿಯ ರೋಸ್ ಅವೆನ್ಯೂ ಕೋರ್ಟ್ನಲ್ಲಿ ವಿಚಾರಣೆ ಆರಂಭವಾಗಲಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.