ಬಿಜೆಪಿ ಪ್ರಧಾನ ಕಾರ್ಯದರ್ಶಿ ಸುನೀಲ್ ಕುಮಾರ್ರಿಂದ ಪ್ರೊಟೆಸ್ಟ್. ನಾನು ಕರ ಸೇವಕ ಬಂಧಿಸಿ ಎಂದು ಮುಂದಾದ ಬಿಜೆಪಿ ನಾಯಕರು. ಶ್ರೀಕಾಂತ್ ಪೂಜಾರಿ ಬಿಡುಗಡೆಗೆ ಆಗ್ರಹಿಸಿ ಸುನೀಲ್ ಕುಮಾರ್ ಧರಣಿʼ.
ರಾಷ್ಟ್ರಭಕ್ತರಾದ ವೀರ್ ಸಾರ್ವರ್ಕರ್ ಮತ್ತು ಹೆಗ್ಡೇವಾರ್ ಅವರುಗಳ ಪಾಠಗಳನ್ನು ಪಠ್ಯ ಪುಸ್ತಕದಿಂದ ಕೈ ಬಿಟ್ಟಿರುವ ಕಾಂಗ್ರೆಸ್ ಸರ್ಕಾರ ಲೋಕಸಭೆ ಸ್ಥಾನದಿಂದ ಅನರ್ಹಗೊಂಡಿರುವ ವಿಫಲ ನಾಯಕನ ಹೆಸರಿನಲ್ಲಿ ಮಕ್ಕಳಿಗೆ ಪಠ್ಯ ರೂಪಿಸುತ್ತದೆಯೇ ? ಪ್ರಣಾಳಿಕೆಯ ಭರವಸೆ ಜಾರಿಗೆ ದಿನಾಂಕ ಗ್ಯಾರಂಟಿಯಾಗದ ಕಾರಣಕ್ಕೆ ಮತಾಂತರ ನಿಷೇಧ ಕಾಯಿದೆ ರದ್ದುಪಡಿಸಿ ಸಾರ್ವಜನಿಕರ ಗಮನ ಬೇರೆಡೆ ಸೆಳೆಯಲು ಯತ್ನಿಸುತ್ತಿದ್ದೀರಾ ? ಎಂದು ಮಾಜಿ ಸಚಿವ ವಿ ಸುನಿಲ್ ಕುಮಾರ್ ಪ್ರಶ್ನಿಸಿದ್ದಾರೆ.
ನುಡಿದಂತೆ ನಡೆಯುತ್ತೇವೆ ಎಂದು ಪುಗಸಟ್ಟೆ ಪ್ರಚಾರ ತೆಗೆದುಕೊಂಡು ಈಗ ಕೇಂದ್ರ ಸರ್ಕಾರ ಅಕ್ಕಿ ಕೊಡುವಲ್ಲಿ ರಾಜಕಾರಣ ಮಾಡುತ್ತಿದೆ ಎಂದು ಜಾರಿಕೊಳ್ಳುವ ಪ್ರಯತ್ನ ನಡೆಸುತ್ತೀರಾ ? ಎಂದು ಸಿಎಂ ಸಿದ್ದರಾಮಯ್ಯ ಅವರಿಗೆ ಮಾಜಿ ಸಚಿವ ವಿ ಸುನಿಲ್ ಕುಮಾರ್ ತಿರುಗೇಟು ನೀಡಿದ್ದಾರೆ.
ಅವತ್ತು ಇಲಾಖೆಗೆ ಸಿದ್ದರಾಮಯ್ಯ ಹೇರಿದ ಪಾಪದ ಕೂಸನ್ನು ನಾವು ಈಗ ಸರಿ ದೂಗಿಸುತ್ತಿದ್ದೇವೆ. ನಾನು ಅಧಿಕಾರ ವಹಿಸಿದಾಗ ಹೆಸ್ಕಾಂಗೆ ಸಂಬಳ ಕೊಡಲೂ ಹಣ ಇದ್ದಿಲ್ಲ. ಆ ದುಸ್ಥಿತಿ ಇತ್ತು. ಬೇರೆ ಇಲಾಖೆಗಳಿಂದ ಬರಬೇಕಾದ ಹಣವನ್ನೂ ಆರ್ಥಿಕ ಇಲಾಖೆಯಿಂದ ಸರಿದೂಗಿಸಿಲ್ಲ ಎಂದು ಇಂಧನ ಸಚಿವ ವಿ.ಸುನಿಲ್ ಕುಮಾರ್ ಆರೋಪಿಸಿದರು.
BJP ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸುನಿಲ್ ಕುಮಾರ್ ಹೆಸರು ಕೇಳಿ ಬರುತ್ತಿದ್ದು, ಪಕ್ಷ ಯಾವ ಜವಾಬ್ದಾರಿ ಕೊಟ್ಟರೂ ನಿಭಾಯಿಸುತ್ತೇನೆ ಎಂದು ಸಚಿವ ಸುನಿಲ್ ಕುಮಾರ್ ಹೇಳಿಕೆ ನೀಡಿದ್ದಾರೆ. ಇವತ್ತು ತಕ್ಷಣ ಬದಲಾವಣೆ ಆಗುತ್ತೆ ಎಂದು ಅನಿಸುತ್ತಿಲ್ಲ. ರಾಜ್ಯಾಧ್ಯಕ್ಷರಾಗಲು ನನ್ನಂಥಾ ಹತ್ತಾರು ಜನರಿಗೆ ಯೋಗ್ಯತೆ ಇದೆ ಎಂದಿದ್ದಾರೆ.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನಿಲ್ ಕುಮಾರ್ ಅವರಿಗೆ ಕೊರೊನಾ ಪಾಸಿಟಿವ್ ಇರುವುದು ಧೃಡಪಟ್ಟಿದೆ.ಈಗ ಸಂಗತಿಯನ್ನು ಅವರು ತಮ್ಮ ಅಧಿಕೃತ ಸಾಮಾಜಿಕ ಮಾಧ್ಯಮಗಳ ವೇದಿಕೆಯಲ್ಲಿ ಹಂಚಿಕೊಂಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.