ಸೋಷಿಯಲ್ ಮೀಡಿಯಾದಲ್ಲಿ ಸಿಗರೇಟ್ ಸೇದುವ ʼಕಾಳಿʼ ಸಾಕ್ಷಾ ಚಿತ್ರದ ಪೋಸ್ಟರ್ ಹಂಚಿಕೊಂಡು ವಿವಾದಕ್ಕೆ ಕಾರಣವಾಗಿದ್ದ ನಿರ್ದೇಶಕಿ ಲೀನಾ ಮಣಿಮೇಘಲೈ ಅವರನ್ನು ಸುಪ್ರೀಂಕೋರ್ಟ್ ಬಂಧಿಸದಂತೆ ತಡೆಯಾಜ್ಞೆ ಜಾರಿ ಮಾಡಿದೆ. ಕಳೆದ ವರ್ಷ ಜುಲೈ ತಿಂಗಳಲ್ಲಿ ಕಾಳಿ ಸಿನಿಮಾ ಪೋಸ್ಟರ್ ಮೂಲಕ ಲೀನಾ ಭಾರಿ ವಿವಾದ ಸೃಷ್ಟಿಸಿದ್ದರು.
ನ್ಯಾಯಮೂರ್ತಿ ಚಂದ್ರಚೂಡ್ ಅವರು ತಮ್ಮ ಇಬ್ಬರು ಸಾಕು ಹೆಣ್ಣು ಮಕ್ಕಳೊಂದಿಗೆ ಸಾರ್ವಜನಿಕ ಗ್ಯಾಲರಿಯ ಮೂಲಕ ನ್ಯಾಯಾಲಯವನ್ನು ಪ್ರವೇಶಿಸಿದರು ಮತ್ತು ಅವರಿಗೆ ನ್ಯಾಯಾಲಯದ ಕೊಠಡಿ ಮತ್ತು ಅವರ ಕೊಠಡಿಯ ದರ್ಶನ ನೀಡಿದರು
ಸಿನಿಮಾ ಹಾಲ್‌ಗಳಿಗೆ ಜನರು ಆಹಾರ ತೆಗೆದುಕೊಂಡು ಹೋಗಬಹುದೇ ಎಂಬ ಕುರಿತು ಇಂದು ಸುಪ್ರೀಂ ಕೋರ್ಟ್‌ನಲ್ಲಿ ನಡೆದ ವಿಚಾರಣೆಯಲ್ಲಿ ನ್ಯಾಯಾಧೀಶರು "ನಾವು ಚಲನಚಿತ್ರಗಳಿಗೆ ಜಿಲೇಬಿಗಳನ್ನು ತರಲು ಪ್ರಾರಂಭಿಸಬೇಕೇ?" ಎಂದು ಪ್ರಶ್ನಿಸಿದ್ದಾರೆ.
Supreme court on note ban : 2016ರಲ್ಲಿ 500 ಮತ್ತು 1000 ರೂಪಾಯಿ ನೋಟುಗಳನ್ನು ಅಮಾನ್ಯಗೊಳಿಸಿದ ಕೇಂದ್ರ ಸರ್ಕಾರದ ನಿರ್ಧಾರವನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ. ಕೇಂದ್ರ ಸರ್ಕಾರ ಕೈಗೊಂಡ ನೋಟು ರದ್ದತಿ ನಿರ್ಧಾರವನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ.
ಸುಪ್ರೀಂ ಕೋರ್ಟ್ ಕೊಲಿಜಿಯಂ ಮಾಡಿದ ಶಿಫಾರಸಿನ ಸುಮಾರು ಮೂರು ತಿಂಗಳ ನಂತರ, ಕೇಂದ್ರ ಸರ್ಕಾರವು ಬಾಂಬೆ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ದೀಪಂಕರ್ ದತ್ತಾ ಅವರನ್ನು ಸುಪ್ರೀಂ ಕೋರ್ಟ್‌ನ ನ್ಯಾಯಾಧೀಶರನ್ನಾಗಿ ನೇಮಿಸಲು ಅಧಿಸೂಚನೆ ಹೊರಡಿಸಿದೆ.
ಯೂಟ್ಯೂಬ್‌ನಲ್ಲಿನ ಜಾಹೀರಾತುಗಳಿಂದಲೇ ತಾವು ಪರೀಕ್ಷೆಯಲ್ಲಿ ಫೇಲ್ ಆಗಿದ್ದು ಎಂದು ಗೂಗಲ್ ಇಂಡಿಯಾದಿಂದ ₹ 75 ಲಕ್ಷ ರೂ. ಪರಿಹಾರವನ್ನು ಕೋರಿದ್ದ ಅರ್ಜಿದಾರರಿಗೆ ಸುಪ್ರೀಂ ಕೋರ್ಟ್ ಶುಕ್ರವಾರದಂದು ₹ 25,000 ದಂಡವನ್ನು ವಿಧಿಸಿದೆ.
ಮಹಾರಾಷ್ಟ್ರದ ಅರ್ಜಿ ಮೈಂಟೆನಬಲ್ ಅಲ್ಲ ಎನ್ನುವುದು ನಮ್ಮ ನಿಲುವು. ಅದನ್ನೇ ನಮ್ಮ ವಕೀಲರು ವಾದ ಮಂಡಿಸಿದ್ದಾರೆ. ನಮ್ಮ ನಿಲುವು ಸಂವಿಧಾನಬದ್ದ ಹಾಗೂ ಕಾನೂನಾತ್ಮಕವಾಗಿದೆ. ಎಲ್ಲಾ ಅಂಶಗಳ ಬಗ್ಗೆ ವಕೀಲರು ವಾದ ಮಾಡಲಿದ್ದಾರೆ- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಸುಪ್ರೀಂ ಕೋರ್ಟ್ ಮತ್ತು ನ್ಯಾಷನಲ್ ಇನ್ಫರ್ಮ್ಯಾಟಿಕ್ಸ್ ಸೆಂಟರ್ (ಎನ್‌ಐಸಿ) ಪ್ರಸ್ತುತ ಥರ್ಡ್ ಪಾರ್ಟಿ ಅಪ್ಲಿಕೇಶನ್ ಗಳಿಲ್ಲದೆ ನ್ಯಾಯಾಲಯದ ವಿಚಾರಣೆಗಳನ್ನು ಲೈವ್-ಸ್ಟ್ರೀಮ್ ಮಾಡಲು "ಸಾಕಷ್ಟು ತಾಂತ್ರಿಕ ಮತ್ತು ಮೂಲಸೌಕರ್ಯಗಳನ್ನು ಹೊಂದಿಲ್ಲ" ಎಂದು ಮಾಜಿ ಆರ್‌ಎಸ್‌ಎಸ್ ಸಿದ್ಧಾಂತವಾದಿ ಕೆ ಎನ್ ಗೋವಿಂದಾಚಾರ್ಯ ಅವರ ಮನವಿಗೆ ಉತ್ತರವಾಗಿ ಸುಪ್ರೀಂ ಕೋರ್ಟ್ ರಿಜಿಸ್ಟ್ರಿ ಹೇಳಿದೆ.
ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಜಾಮೀನು ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದ ಒಂದು ದಿನದ ನಂತರ, ಎಲ್ಗರ್ ಪರಿಷತ್-ಮಾವೋವಾದಿ ನಂಟು ಪ್ರಕರಣದ ಆರೋಪಿ, ಸಾಮಾಜಿಕ ಹೋರಾಟಗಾರ ಆನಂದ್ ತೇಲ್ತುಂಬ್ಡೆ ಅವರನ್ನು ತಲೋಜಾ ಕೇಂದ್ರ ಕಾರಾಗೃಹದಿಂದ ಬಿಡುಗಡೆ ಮಾಡಲಾಗಿದೆ ಎಂದು ನವಿ ಮುಂಬೈ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
CM Basavaraj Bommai : ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಸರ್ವೋಚ್ಛ ನ್ಯಾಯಾಲಯದಲ್ಲಿ ಕರ್ನಾಟಕದ ವಾದವನ್ನು ಮಂಡಿಸಲು ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ನಮ್ಮ ವಾದಕ್ಕೆ ಗಟ್ಟಿಯಾದ ಆಧಾರವೂ ಇದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಅಟಾರ್ನಿ ಜನರಲ್ ಆರ್.ವೆಂಕಟರಮಣಿ ಅವರು ಚುನಾವಣಾ ಆಯುಕ್ತ ಅರುಣ್ ಗೋಯಲ್ ಅವರ ನೇಮಕಕ್ಕೆ ಸಂಬಂಧಿಸಿದ ಕಡತವನ್ನು ನ್ಯಾಯಾಲಯದಲ್ಲಿ ಮಂಡಿಸಿದರು. ಕಡತ ನೋಡಿದ ನ್ಯಾಯಾಲಯ ಈ ನೇಮಕಾತಿಯಲ್ಲಿ ಸರ್ಕಾರ ತೋರಿದ ತರಾತುರಿಯನ್ನು ಪ್ರಶ್ನಿಸಿದೆ.
ಡಾ. ಶಿವರಾಮ ಕಾರಂತ್ ಬಡಾವಣೆ ಕುರಿತು ಭಾರತ ಸರ್ವೋಚ್ಛ ನ್ಯಾಯಾಲಯ ರಚಿಸಿರುವ ಸಮಿತಿ ಸಲ್ಲಿಸಿದ್ದ 26 ನೇ ವರದಿಯನ್ನು ಅಂಗೀಕರಿಸಿರುವ ಮಾನ್ಯ ಸರ್ವೋಚ್ಛ ನ್ಯಾಯಾಲಯ ಈವರೆಗೆ ಒಟ್ಟು 4,985 ಕಟ್ಟಡಗಳನ್ನು ಮಾನ್ಯ ಮಾಡಿದೆ.
1991ರಲ್ಲಿ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಆರು ಅಪರಾಧಿಗಳಲ್ಲಿ ಒಬ್ಬರಾದ ನಳಿನಿ ಶ್ರೀಹರನ್ 3 ದಶಕಗಳ ನಂತರ ಸುಪ್ರೀಂ ಕೋರ್ಟ್ ಆದೇಶದ ಮೇರೆಗೆ ಇಂದು ಬಿಡುಗಡೆ ಮಾಡಲಾಗಿದೆ.
Supreme Court Verdict on EWS: ನ್ಯಾಯಮೂರ್ತಿ ದಿನೇಶ್ ಮಾಹೇಶ್ವರಿ, ನ್ಯಾಯಮೂರ್ತಿ ಬೇಲಾ ತ್ರಿವೇದಿ, ಮುಖ್ಯ ನ್ಯಾಯಮೂರ್ತಿ ಯುಯು ಲಲಿತ್ ಮತ್ತು ನ್ಯಾಯಮೂರ್ತಿ ಜೆಬಿ ಪಾಸ್ಟೋರ್ವಾಲಾ ಸಾಮಾನ್ಯ ವರ್ಗದ ಜನರಿಗೆ ಆರ್ಥಿಕ ಆಧಾರದ ಮೇಲೆ ಮೀಸಲಾತಿ ನೀಡುವ ನಿರ್ಧಾರವನ್ನು ಸಮರ್ಥಿಸಿದರು.
ಭಾರತದ ರಾಷ್ಟ್ರಪತಿಯಾಗಿ ನೇಮಕಗೊಳ್ಳಲು ಕೋರಿರುವ ವ್ಯಕ್ತಿಯ ಮನವಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ತಿರಸ್ಕರಿಸಿದೆ ಮತ್ತು ಭವಿಷ್ಯದಲ್ಲಿ ಈ ವಿಷಯದ ಕುರಿತು ಅವರ ಮುಂದಿನ ಅರ್ಜಿಯನ್ನು ಪರಿಗಣಿಸದಂತೆ ಅದು ಸೂಚಿಸಿದೆ.
ಇಂತಹ ಹೇಳಿಕೆಗಳನ್ನು ಗಮನದಲ್ಲಿಟ್ಟುಕೊಂಡು ಪ್ರಕರಣ ದಾಖಲಿಸುವಂತೆ ದೆಹಲಿ, ಯುಪಿ ಮತ್ತು ಉತ್ತರಾಖಂಡ ಸರ್ಕಾರಗಳಿಗೆ ಸುಪ್ರೀಂ ಕೋರ್ಟ್ ಸೂಚಿಸಿದೆ. ಕ್ರಮ ಕೈಗೊಳ್ಳಲು ವಿಫಲವಾದರೆ ನ್ಯಾಯಾಲಯದ ನಿಂದನೆ ಎಂದು ಪರಿಗಣಿಸಲಾಗುವುದು. ಬಿಜೆಪಿ ಸಂಸದ ಪರ್ವೇಶ್ ವರ್ಮಾ ಮತ್ತು ಮುಸ್ಲಿಂ ಸಮುದಾಯದ ವಿರುದ್ಧದ ಉಳಿದ ಆಕ್ಷೇಪಾರ್ಹ ಹೇಳಿಕೆಗಳ ವಿರುದ್ಧ ಅಕ್ಟೋಬರ್ 9 ರಂದು ದೆಹಲಿ ಪೊಲೀಸರಿಂದ ಕ್ರಮ ಕೈಗೊಂಡ ವರದಿಯನ್ನು ನ್ಯಾಯಾಲಯವು ಕೇಳಿದೆ.
ಬಳ್ಳಾರಿ; ಹಿಜಾಬ್ ಪ್ರಕರಣ ವಿಚಾರದಲ್ಲಿ ಸುಪ್ರೀಂ ಕೋರ್ಟ್ ನ ಅಂತಿಮ ತೀರ್ಪು ಬಹಳ ಮುಖ್ಯವಾಗಿದೆ. ಇದು ಕರ್ನಾಟಕಕ್ಕೆ ಸೀಮಿತವಾಗಿಲ್ಲ.ಇಡೀ ದೇಶದಲ್ಲಿರುವ ವಿಚಾರ. ಹೀಗಾಗಿ ಅಂತಿಮ ತೀರ್ಪು ಬರುವವರೆಗೂ ನಾವು ಕಾದು ನೋಡಬೇಕಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಇಂದು ಬಳ್ಳಾರಿ ಜಿಲ್ಲೆಯ ಹೂವಿನ ಹಡಗಲಿಯಲ್ಲಿ ಮಾಧ್ಯಮದವರೊಂದಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾತನಾಡಿದರು.