ಪ್ರವೀಣ್ ನೆಟ್ಟಾರು, ಮಸೂದ್ ಹಾಗೂ ಫಾಝಿಲ್ ಕೊಲೆ ಪ್ರಕರಣದಲ್ಲಿ ಸರಿಯಾದ ರೀತಿ ತನಿಖೆ ಆಗದಿದ್ದರೆ, ಮೂರು ಪ್ರಕರಣಗಳಲ್ಲಿ ನೈಜ ಆರೋಪಿಗಳನ್ನು ಆಗಸ್ಟ್ 5 ರೊಳಗೆ ಬಂಧಿಸದಿದ್ದರೆ ಮರುದಿನದಿಂದ ಮಂಗಳೂರು ಜಿಲ್ಲಾಧಿಕಾರಿ ಕಚೇರಿ ಎದುರು ಶಾಂತಿಯುತ ಸತ್ಯಾಗ್ರಹ ಕೂರುವುದಾಗಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ರಾಜ್ಯ ಸರ್ಕಾರಕ್ಕೆ ಗಡುವು ನೀಡಿದ್ದಾರೆ.
ಸುರತ್ಕಲ್ನಲ್ಲಿ ನಡೆದ ಹತ್ಯೆ ಘಟನೆಯ ಹಿನ್ನೆಲೆಯಲ್ಲಿ ಶಾಂತಿ ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಮಂಗಳೂರು ನಗರ ಕಮಿಷನರೇಟ್ ವ್ಯಾಪ್ತಿಯಲ್ಲಿ ನಾಳೆಯವರೆಗೆ ವಿಧಿಸಲಾಗಿದ್ದ ನಿಷೇಧಾಜ್ಞೆಯನ್ನು ಆಗಸ್ಟ್ 1ರ ಬೆಳಗ್ಗೆ 8 ಗಂಟೆಯವರೆಗೆ ವಿಸ್ತರಿಸಲಾಗಿದೆ ಎಂದು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ತಿಳಿಸಿದ್ದಾರೆ.
ದಕ್ಷಿಣ ಕನ್ನಡದ ಇತ್ತೀಚಿನ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸಿದರೆ ಅಲ್ಲಿ ನಡೆಯುತ್ತಿರುವ ಸರಣಿ ಹತ್ಯೆಗಳಿಗೂ, ಸಂಘ ಪರಿವಾರದೊಳಗಿನ ಆಂತರಿಕ ಬಿಕ್ಕಟ್ಟುಗಳಿಗೂ ಸಂಬಂಧ ಇರುವಂತೆ ಕಾಣುತ್ತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.