Suryakumar Yadav: ಇನ್ನೊಂದೆಡೆ ರಾಹುಲ್ ತ್ರಿಪಾಠಿ 16 ಎಸೆತಗಳಲ್ಲಿ 2 ಸಿಕ್ಸರ್ ಮತ್ತು 5 ಬೌಂಡರಿಗಳ ಸಹಾಯದಿಂದ 35 ರನ್ ಗಳಿಸಿ ಬಿರುಸಿನ ಇನ್ನಿಂಗ್ಸ್ ಆಡಿದ್ದಾರೆ. ಅಕ್ಷರ್ ಪಟೇಲ್ 9 ಎಸೆತಗಳಲ್ಲಿ 21 ರನ್ ಮತ್ತು ಶುಭಮನ್ ಗಿಲ್ 36 ಎಸೆತಗಳಲ್ಲಿ 46 ರನ್ ಗಳಿಸಿದರು. ಇದಕ್ಕೆ ಉತ್ತರವಾಗಿ 229 ರನ್ಗಳ ಗುರಿ ಬೆನ್ನತ್ತಿದ ಶ್ರೀಲಂಕಾ ತಂಡ 137 ರನ್ಗಳಿಗೆ ಆಲೌಟ್ ಆಗಿದ್ದು, ಭಾರತ 91 ರನ್ಗಳ ದೊಡ್ಡ ಅಂತರದಿಂದ ಪಂದ್ಯವನ್ನು ಗೆದ್ದುಕೊಂಡಿತು. ಇದರೊಂದಿಗೆ ಭಾರತ ಈ ಸರಣಿಯನ್ನು 2-1 ಅಂತರದಿಂದ ವಶಪಡಿಸಿಕೊಂಡಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.