ರಿಯಾ ಪರ ವಕೀಲರು ಜಾರಿಗೊಳಿಸಿರುವ ಹೇಳಿಕೆಯಲ್ಲಿ, ರಿಯಾ ಚಕ್ರವರ್ತಿ ಮುಂಬೈ ಪೊಲೀಸರು ಹಾಗೂ ಇಡಿ ತನಿಖೆಯಲ್ಲಿ ಸಂಪೂರ್ಣ ಸಹಕಾರ ನೀಡುತ್ತಿದ್ದಾರೆ ಎಂದು ಹೇಳಿದ್ದಾರೆ. ಜೊತೆಗೆ ರಿಯಾ ಚಕ್ರವರ್ತಿ ಬಿಹಾರ ಪೊಲೀಸರ ತನಿಖೆಯನ್ನು ಪ್ರಶ್ನಿಸಿದ್ದು, ತಾವು ಏಕೆ ಸುಪ್ರೀಂ ಕೋರ್ಟ್ ಮೊರೆಹೋಗಿರುವುದಾಗಿ ಸ್ಪಷ್ಟಪಡಿಸಿದ್ದಾರೆ.
ದಿವಂಗತ ಬಾಲಿವುಡ್ ನಟ ಸುಶಾಂತ್ ಸಿಂಗ್ ರಾಜ್ಪುತ್ ಪ್ರಕರಣದಲ್ಲಿ ತಮ್ಮ ಹೆಸರು ಕೇಳಿ ಬಂದ ಬಳಿಕ ಮೌನ ಮುರಿದಿರುವ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಪುತ್ರ ಹಾಗೂ ಮಹಾರಾಷ್ಟ್ರ ಸರ್ಕಾರದಲ್ಲಿ ಸಚಿವರಾಗಿರುವ ಆದಿತ್ಯ ಠಾಕ್ರೆ ಸದ್ಯ ತಮ್ಮ ಮೌನ ಮುರಿದಿದ್ದಾರೆ.
ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಬಗ್ಗೆ ಸಿಬಿಐ ತನಿಖೆ ಆರಂಭಿಸಲು ಗೃಹ ಸಚಿವ ಅಮಿತ್ ಶಾ ಅವರ ನೆರವು ಕೋರಿ ನಟಿ ರಿಯಾ ಚಕ್ರವರ್ತಿ ಟ್ವಿಟರ್ ಮತ್ತು ಇನ್ಸ್ಟಾಗ್ರಾಂನಲ್ಲಿ ಸಂದೇಶಗಳನ್ನು ಪೋಸ್ಟ್ ಮಾಡಿದ್ದಾರೆ. ಜೂನ್ 14 ರಂದು 34 ನೇ ವಯಸ್ಸಿನಲ್ಲಿ ಸುಶಾಂತ್ ಆತ್ಮಹತ್ಯೆಯಿಂದ ನಿಧನರಾದರು. ಸಂದೇಶಗಳಲ್ಲಿ, ರಿಯಾ ತನ್ನನ್ನು ಸುಶಾಂತ್ ಗೆಳತಿ ಎಂದು ಗುರುತಿಸಿಕೊಂಡಿದ್ದಾಳೆ.
ಮೂಲಗಳು ನೀಡಿರುವ ಮಾಹಿತಿ ಪ್ರಕಾರ ಸುಶಾಂತ್ ದೀರ್ಘಕಾಲದಿಂದ ಒತ್ತಡದಿಂದ ಬಳಲುತ್ತಿದ್ದರು. ಕಳೆದ ಹಲವು ದಿನಗಳಿಂದ ಅವರು ಔತಣಕೂಟ ಹಾಗೂ ಮೇನ್ ಸ್ಟ್ರೀಮ್ ನಲ್ಲಿ ಕಾಣಿಸಿಕೊಳ್ಳುತ್ತಿರಲಿಲ್ಲ. ಕೆಲ ದಿನಗಳ ಹಿಂದೆಯೇ ಅವರ ಮಾಜಿ ಮ್ಯಾನೇಜರ್ ಕೂಡ ಆತ್ಮಹತ್ಯೆ ಮಾಡಿಕೊಂಡಿದ್ದರು ಎನ್ನಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.