ಪಠ್ಯ ಪರಿಷ್ಕರಣ ಸಮಿತಿಯನ್ನು ಹೊಸದಾಗಿ ರಚಿಸಬೇಕು ಮತ್ತು ಅದನ್ನು ನ್ಯಾಯಾಂಗದ ರೀತಿಯಲ್ಲಿ ಸ್ವಾತಂತ್ರ್ಯವಾಗಿ ಕೆಲಸ ಮಾಡಲು ಹಕ್ಕು ನೀಡಬೇಕು ಎಂದು ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಒತ್ತಾಯಿಸಿದ್ದಾರೆ.
'ಬಸವಣ್ಣನವರ ವಿಚಾರವೂ ಸೇರಿ ಆಕ್ಷೇಪ ವ್ಯಕ್ತವಾಗಿರುವ ಅಂಶಗಳನ್ನು ಪರಿಷ್ಕರಿಸಲಾಗುವುದು ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ. ಹಾಗಿದ್ದರೆ ಈಗಿನ ಪರಿಷ್ಕೃತ ಪಠ್ಯವನ್ನು ಕೈಬಿಡಲಾಗುವುದೇ? ಇದನ್ನು ಸಿಎಂ ಸ್ಪಷ್ಟಪಡಿಸಬೇಕು'
ಪಠ್ಯ ಪರಿಷ್ಕರಣೆ ವಿವಾದ ದಿನದಿಂದ ದಿನಕ್ಕೆ ಹೊಸ ಹೊಸ ತಿರುವು ಪಡೆದುಕೊಳ್ಳುತ್ತಿದೆ. ಹಲವು ವಿದ್ಯಾರ್ಥಿ ಸಂಘಟನೆಗಳು, ಸಾಹಿತಿಗಳು, ಪ್ರಗತಿಪರ ಹೋರಾಟಗಾರರು ಪಠ್ಯ ಪರಿಷ್ಕರಣೆಯ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ಈಗ ಪಠ್ಯ ಪರಿಷ್ಕರಣೆ ಸಮಿತಿ ವಿಸರ್ಜಿಸಿ ಸಿಎಂ ಬೊಮ್ಮಾಯಿ ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ.
ಇದರ ಹಿನ್ನೆಲೆಯಲ್ಲಿ ಪಠ್ಯಪರಿಷ್ಕರಣ ಸಮಿತಿಯ ಅಧ್ಯಕ್ಷ ರೋಹಿತ್ ಚಕ್ರತೀರ್ಥ ಹಾಗೂ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಒತ್ತಾಯಿಸಿದರು.
ಶಿಕ್ಷಣ ತಜ್ಞರು ಇರಬೇಕಾದ ಜಾಗದಲ್ಲಿ ಕೊಳಕು ಮಂಡಲ ಹಾವಿನಂತಹ ಕೊಳಕು ವಿಷಕಾರಿ ವ್ಯಕ್ತಿಯನ್ನು ಕೂರಿಸಿದ್ದು ಸರ್ಕಾರದ ಬೌದ್ಧಿಕ ದಿವಾಳಿತನ ತೋರಿಸುತ್ತದೆ ಎಂದು ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.