ರಾಜ್ಯದಲ್ಲಿ ಪಠ್ಯ ಪರಿಷ್ಕರಣೆ ವಿವಾದ ಬಿಸಿಬಿಸಿ ಚರ್ಚೆಯಲ್ಲಿರುವ ವಿಚಾರವಾಗಿದೆ. ಇದೇ ವಿಚಾರವಾಗಿ ಇಂದು ವಿಧಾನಸೌಧದಲ್ಲಿ ಕಂದಾಯ ಸಚಿವ ಆರ್.ಅಶೋಕ್ ಸುದ್ದಿಗೋಷ್ಠಿ ನಡೆಸಿದರು. ವಿಪಕ್ಷಗಳು ವಿನಾಕಾರಣ ವಿವಾದ ಮಾಡಿದವರು. ರಾಮನ ಹೆಸರು ಹೇಳಲು ಇಷ್ಟವಿಲ್ಲದ್ದಕ್ಕೆ ಈಗ ಈ ವಿವಾದ ಶರುವಾಗಿದೆ ಎಂದು ಆರೋಪಿಸಿದರು.
ರೋಹಿತ್ ಚಕ್ರತೀರ್ಥ ಅಧ್ಯಕ್ಷತೆಯ ಪಠ್ಯ ಪರಿಷ್ಕರಣಾ ಸಮಿತಿಯನ್ನ ರದ್ದು ಮಾಡುವಂತೆ ಹೊಸಪೇಟೆಯಲ್ಲಿ ಪ್ರಗತಿಪರ ಸಂಘಟನೆಗಳಿಂದ ಪ್ರತಿಭಟನೆ ನಡೆದಿದೆ. ವಿದ್ಯಾರ್ಥಿ, ಯುವಜನ, ಕಾರ್ಮಿಕ ಸಂಘಟನೆಗಳಿಂದ ಜಂಟಿ ಪ್ರತಿಭಟನೆ ನಡೆಸಿದ್ರು.
ಸಚಿವ ಬಿ.ಸಿ.ನಾಗೇಶ್ ಅವರ ವಿರುದ್ಧ ಟೀಕಾ ಪ್ರಹಾರ ನಡೆಸಿರುವ ವಿಧಾನ ಪರಿಷತ್ ವಿಪಕ್ಷದ ನಾಯಕ ಬಿ.ಕೆ ಹರಿಪ್ರಸಾದ್ 'ಇತಿಹಾಸದ ಬಗ್ಗೆ ನಂಬಿಕೆಯೂ ಇಲ್ಲದ, ಕನಿಷ್ಠ ಅದರ ತಿಳುವಳಿಕೆಯೂ ಇಲ್ಲದ ಶಿಕ್ಷಣ ಸಚಿವ ನಾಗೇಶ್ ಅವರು ಇತಿಹಾಸದ ಪಾಠ ಹೇಳಲು ಬರುತ್ತಿದ್ದಾರೆ.ಬಿ ಸಿ ನಾಗೇಶ್ ಅವರೇ ನಾನು ನಿಮ್ಮ ಹಾವಿನಪುರದಲ್ಲಿ ತರಬೇತಿ ಪಡೆದವನೂ ಅಲ್ಲ, ವಾಟ್ಸಪ್ ಫಾರ್ವರ್ಡ್ ಯುನಿವರ್ಸಿಟಿಯ ವಿದ್ಯಾರ್ಥಿಯೂ ಅಲ್ಲ' ಎಂದು ಹರಿಪ್ರಸಾದ್ ತಿರುಗೇಟು ನೀಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.