ದಿ ಡಿವೈನ್ ಬ್ಲಾಕ್ಬಸ್ಟರ್ ಕಾಂತಾರ ಸಿನಿಮಾದಲ್ಲಿ ನಟಿಸಿ ಪ್ಯಾನ್ ಇಂಡಿಯಾ ಲೆವೆಲ್‌ನಲ್ಲಿ ಮಿಂಚುತ್ತಿರುವ ಸಿಂಗಾರ ಸಿರಿ ನಟಿ ಸಪ್ತಮಿ ಗೌಡ ಬಾಲಿವುಡ್‌ಗೆ ಪಾದಾರ್ಪಣೆ ಮಾಡಲಿದ್ದಾರೆ. ʼದಿ ಕಾಶ್ಮೀರಿ ಫೈಲ್ಸ್ʼ ನಂತರ ಗ್ರೇಟ್ ಚಿತ್ರಗಳನ್ನು ನಿರ್ದೇಶಿಸಿ ದೇಶದ ಜನರ ಗಮನ ಸೆಳೆದಿದ್ದ ವಿವೇಕ್ ಅಗ್ನಿಹೋತ್ರಿ ನಿರ್ದೇಶನದ ʼದಿ ವ್ಯಾಕ್ಸಿನ್ ವಾರ್ʼ ಸಿನಿಮಾದಲ್ಲಿ ಸಪ್ತಮಿ ನಟಿಸಲಿದ್ದಾರೆ.
ಸಿನಿಮಾ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಖುಷಿ ವಿಚಾರವೊಂದನ್ನು ಹಂಚಿಕೊಂಡಿದ್ದಾರೆ. ತಮ್ಮ ಟ್ವಿಟರ್ ಖಾತೆಯಲ್ಲಿ ದೇಶಾದ್ಯಂತ ವ್ಯಾಪಕ ಮೆಚ್ಚುಗೆ ಪಡೆದ ಸಿನಿಮಾ ʼದಿ ಕಾಶ್ಮೀರ್ ಫೈಲ್ಸ್ʼ ಆಸ್ಕರ್ 2023ರ ರೇಸ್‌ಗೆ ಶಾರ್ಟ್‌ಲಿಸ್ಟ್ ಆಗಿರುವ ಕುರಿತು ಮಾಹಿತಿ ಹಂಚಿಕೊಂಡಿದ್ದಾರೆ. ಅಕಾಡೆಮಿಯ ಮೊದಲ ಪಟ್ಟಿಯಲ್ಲಿ 5 ಭಾರತದ ಚಲನಚಿತ್ರಗಳಲ್ಲಿ ಈ ಸಿನಿಮಾ ಒಂದಾಗಿದೆ. ನಾನು ಎಲ್ಲರಿಗೂ ಧನ್ಯವಾದಗಳನ್ನು ತಿಳಿಸುತ್ತೇನೆ ಎಂದು ಹೇಳಿದ್ದಾರೆ.
ಶಾರುಖ್ ಖಾನ್, ದೀಪಿಕಾ ಪಡುಕೋಣೆ ಮತ್ತು ಜಾನ್ ಅಬ್ರಹಾಂ ಅಭಿನಯದ ಪಠಾಣ್ ಈ ವರ್ಷದ ಜನವರಿಯಲ್ಲಿ ಬಿಡುಗಡೆಯಾಗಲಿದೆ. ಹಲವು ವರ್ಷಗಳ ನಂತರ ಕಿಂಗ್‌ಖಾನ್‌ನನ್ನು ತೆರೆಮೇಲೆ ನೋಡಲು ಅವರ ಅಭಿಮಾನಿಗಳು ಕಾತುರರಾಗಿದ್ದಾರೆ. ಈ ನಡುವೆ ಚಿತ್ರದ ʼಬೇಷರಂ ರಂಗ್ʼ ಹಾಡಿನಲ್ಲಿ ದೀಪಿಕಾ ಪಡುಕೋಣೆ ಧರಿಸಿದ್ದ ಬಟ್ಟೆಗೆ ಆಕ್ಷೇಪ ವ್ಯಕ್ತವಾಗಿತ್ತು. ಇದರಿಂದ ಚಿತ್ರ ದೊಡ್ಡ ವಿವಾದಕ್ಕೆ ಗುರಿಯಾಗಿತ್ತು. ಇದೀಗ ದಿ ಕಾಶ್ಮೀರ್ ಫೈಲ್ಸ್ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಕೂಡ ಪಠಾಣ್ ಸಾಂಗ್ ಕುರಿತು ವಿರೋಧ ವ್ಯಕ್ತಪಡಿಸಿದ್ದಾರೆ.
ನಿರ್ದೇಶಕ ವಿವೇಕ್ ರಂಜನ್ ಅಗ್ನಿಹೋತ್ರಿ ಅವರು ತಮ್ಮ ಮುಂದಿನ ಸಿನಿಮಾದ ಹೆಸರು 'ದಿ ವ್ಯಾಕ್ಸಿನ್ ವಾರ್' ಅಂತ ಘೋಷಣೆ ಮಾಡಿದಾಗಿನಿಂದ ಪ್ರೇಕ್ಷಕರಲ್ಲಿ ಕುತೂಹಲ ಕೆರಳಿಸಿದೆ. ಕಾಶ್ಮೀರಿ ಫೈಲ್ ನಂತರ ವಿವೇಕ್ ಅವರ ಸಿನಿಮಾಗಳ ಮೇಲೆ ಭಾರಿ ನಿರೀಕ್ಷೆ ಹುಟ್ಟುಕೊಂಡಿದ್ದು, ಇದೀಗ ದಿ ವಾಕ್ಸಿನ್ ವಾರ್ ಮೂಲಕ ಅಗ್ನಿಹೋತ್ರಿ ಮತ್ತೊಮ್ಮೆ ದಾಖಲೆ ಸೃಷ್ಟಿಸಲು ಮುಂದಾಗಿದ್ದಾರೆ ಎನ್ನಲಾಗುತ್ತಿದೆ.
Most Searched Movies 2022: 2022ನೇ ವರ್ಷದಲ್ಲಿ ಹಲವಾರು ಸೂಪರ್ ಹಿಟ್ ಸಿನಿಮಾಗಳು ಜನಮನ ರಂಜಿಸಿದವು. ಅದರಲ್ಲೂ ಕನ್ನಡ ಚಿತ್ರರಂಗದ ಹಲವಾರು ಸಿನಿಮಾಗಳು ದೊಡ್ಡಮಟ್ಟದಲ್ಲಿ ಸದ್ದು ಮಾಡಿದವು.
Nadav Lapid statement on The Kashmir Files: ಇಸ್ರೇಲಿ ಚಲನಚಿತ್ರ ನಿರ್ಮಾಪಕ ಮತ್ತು ಐಎಫ್‌ಎಫ್‌ಐ ಜ್ಯೂರಿ ಮುಖ್ಯಸ್ಥ ನಾಡವ್ ಲ್ಯಾಪಿಡ್ ‘ದಿ ಕಾಶ್ಮೀರ್ ಫೈಲ್ಸ್’ ಅನ್ನು 'ಅಸಭ್ಯ' ಚಿತ್ರ ಎಂದು ಹೇಳುತ್ತಿದ್ದಂತೆ ಇದರ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಅಷ್ಟೇ ಅಲ್ಲದೆ, ವಿಚಿತ್ರವಾದ ಕಾಮೆಂಟ್‌ಗಳು, ಪ್ರತಿಕ್ರಿಯೆಗಳು ವ್ಯಕ್ತವಾಗಿವೆ.
ಕನ್ನಡದ ದಿ ಡಿವೈನ್ ಬ್ಲಾಕ್‌ಬ್ಲಸ್ಟರ್ ಸಿನಿಮಾ ಕಾಂತಾರಗೆ ದೇಶಾದ್ಯಂತ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಸ್ಟಾರ್ ನಟರು, ನಿರ್ದೇಶಕರು, ರಾಜಕೀವ ಗಣ್ಯರು ರಿಷಬ್ ಶೆಟ್ಟಿ ಸಿನಿಮಾವನ್ನು ಹಾಡಿ ಹೊಗಳಿದ್ದಾರೆ. ಇದೀಗ ‘ದಿ ಕಾಶ್ಮೀರ್ ಫೈಲ್ಸ್’ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಅವರು ‘ಕಾಂತಾರ’ ಚಿತ್ರದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದು, ಈ ಕುರಿತ ವಿಡಿಯೋ ಒಂದನ್ನು ತಮ್ಮ ಟ್ಟಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
India's Official Entry To Oscars: ಈ ವರ್ಷದ ಎರಡು ಅತಿ ದೊಡ್ಡ ಚಿತ್ರಗಳಾದ 'ದಿ ಕಾಶ್ಮೀರ್ ಫೈಲ್ಸ್' ಹಾಗೂ ಆರ್.ಆರ್.ಆರ್ ಚಿತ್ರಗಳ ಮಧ್ಯ ಆಸ್ಕರ್ ಪ್ರವೇಶಕ್ಕಾಗಿ ತೀವ್ರ ಪೈಪೋಟಿ ನಡೆಯಲಿದೆ ಎಂದು ಭಾವಿಸಲಾಗಿತ್ತು. ಆದರೆ, ವಾಸ್ತವದಲ್ಲಿ ಈ ಎರಡೂ ಚಿತ್ರಗಳನ್ನು ಹಿಂದಿಕ್ಕಿ ಗುಜರಾತಿ ಚಲನಚಿತ್ರ Chhello Show ಬಾಜಿ ಹೊಡೆದಿದೆ.
ವಿವೇಕ್ ಅಗ್ನಿಹೋತ್ರಿ ನಿರ್ದೇಶನದ ದಿ ಕಾಶ್ಮೀರ ಫೈಲ್ಸ್ ZEE5 ಸ್ಟ್ರೀಮಿಂಗ್ ಪ್ಲಾಟ್‌ಫಾರ್ಮ್‌ನಲ್ಲಿ ಲಭ್ಯವಿದೆ. ಮಾರ್ಚ್ ತಿಂಗಳಲ್ಲಿ ದೇಶಾದ್ಯಂತ ಬಿಡುಗಡೆಯಾದ ಈ ಚಿತ್ರವು ಕೋವಿಡ್-19 ಸಾಂಕ್ರಾಮಿಕ ರೋಗದ ನಂತರದಲ್ಲಿ 300 ಕೋಟಿ ರೂಪಾಯಿಗಳನ್ನು ದಾಟಿದ ಮೊದಲ ಚಲನಚಿತ್ರವಾಗಿದೆ. ವಿವೇಕ್ ಅಗ್ನಿಹೋತ್ರಿ ಅವರ ದಿ ಕಾಶ್ಮೀರ್ ಫೈಲ್ಸ್ ಬಿಡುಗಡೆಯಾದಾಗಿನಿಂದಲೂ ಒಂದಲ್ಲ ಒಂದು ಕಾರಣಕ್ಕಾಗಿ ಸುದ್ದಿಯಲ್ಲಿದೆ.
ಶನಿವಾರದಂದು ಕಾಶ್ಮೀರಿ ಪಂಡಿತ್ ಸರ್ಕಾರಿ ನೌಕರನನ್ನು ಭಯೋತ್ಪಾದಕರು ಕೊಂದ ಪ್ರಕರಣದ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ 'ಪ್ರಧಾನಿ ಮೋದಿ ಅವರಿಗೆ ಕಾಶ್ಮೀರಿಗಳ ನರಮೇಧದ ಬಗ್ಗೆ ಮಾತನಾಡುವುದಕ್ಕಿಂತ ಹೆಚ್ಚಾಗಿ ಚಲನಚಿತ್ರದ ಬಗ್ಗೆ ಮಾತನಾಡುವುದು ಅವರಿಗೆ ಮುಖ್ಯವಾಗಿದೆ' ಎಂದು ಹೇಳಿದರು.
The Kashmir Files: 2022 ರ ಪ್ರಸಿದ್ಧ ಚಲನಚಿತ್ರ 'ದಿ ಕಾಶ್ಮೀರ್ ಫೈಲ್ಸ್' ಶೀಘ್ರದಲ್ಲೇ OTT ನಲ್ಲಿ ಬಿಡುಗಡೆಯಾಗಲಿದೆ. ಈ ಚಿತ್ರ ಬಿಡುಗಡೆಯಾದಾಗಿನಿಂದ, ಅಭಿಮಾನಿಗಳು ಅದರ OTT ಬಿಡುಗಡೆಗಾಗಿ ಕಾಯುತ್ತಿದ್ದರು.
Vivek Agnihotri in Bhopal controversy: 'ದಿ ಕಾಶ್ಮೀರ್ ಫೈಲ್ಸ್' ಚಿತ್ರದ ನಿರ್ದೇಶಕ ವಿವೇಕ್ ಅಗ್ನಿಹೋತ್ರಿಗೆ ಹೊಸ ಸಂಕಷ್ಟ ಎದುರಾಗಿದೆ. ಈ ವಿವಾದದ ಬಳಿಕ ಅವರ ಮೇಲೆ ದೂರು ದಾಖಲಾಗಿದೆ.
The Kashmir Files Box Office Collection: 'ದಿ ಕಾಶ್ಮೀರ್ ಫೈಲ್ಸ್ ನ ಒಟ್ಟು ಗಲ್ಲಾ ಪೆಟ್ಟಿಗೆಯ ಕಲೆಕ್ಷನ್ 200.13 ಕೋಟಿ ರೂ. ತಲುಪಿದೆ (The Kashmir Files Box Office). ಈ ಚಲನಚಿತ್ರ ಬಾಲಿವುಡ್ ಮುಂದೆ ಒಂದು ಹೊಸ ಮೈಲುಗಲ್ಲನ್ನೇ ಸ್ಥಾಪಿಸಿದೆ ಎಂದರೆ ಅತಿಶಯೋಕ್ತಿಯಾಗಲಾರದು.
The Kashmir Files:ಭಾರತದ ಮೇಲಿನ ಅಭಿಮಾನದಿಂದ ಒಬ್ಬರೇ ಚಿತ್ರ ವೀಕ್ಷಿಸಿದ ಅಪರೂಪದ ಪ್ರಸಂಗ ಪಾಂಡವಪುರ ಪಟ್ಟಣದ ಖಾಸಗಿ ಬಸ್ ನಿಲ್ದಾಣ ಆವರಣದಲ್ಲಿರುವ ಕೋಕಿಲ ಚಿತ್ರಮಂದಿರದಲ್ಲಿ ನಡೆದಿದೆ.
The Kashmir Files Collection: ಕಾಶ್ಮೀರ ಫೈಲ್ಸ್ (The Kashmir Files) ಬಿಡುಗಡೆಯಾದ ಎಂಟನೇ ದಿನಕ್ಕೆ 19.15 ಕೋಟಿ ಗಳಿಕೆ ಮಾಡಿ, 100 ಕೋಟಿ ಕ್ಲಬ್ ಗೆ (Hundred Crore Club) ಲಗ್ಗೆ ಇಟ್ಟಿದೆ.
‘ದಿ ಕಾಶ್ಮೀರ್ ಫೈಲ್ಸ್’ ಚಿತ್ರದ ನಿರ್ದೇಶಕ ವಿವೇಕ್ ಅಗ್ನಿಹೋತ್ರಿಗೆ ಭಾರತದಾದ್ಯಂತ CRPF ರಕ್ಷಣೆಯೊಂದಿಗೆ ‘Y’ ಕೆಟಗರಿ ಭದ್ರತೆಯನ್ನು ನೀಡಲಾಗಿದೆ. ಇತ್ತೀಚಿನ ದಿನಗಳಲ್ಲಿ ಈ ಚಿತ್ರ ಸಾಕಷ್ಟು ಚರ್ಚೆಯಲ್ಲಿದೆ.
‘ದಿ ಕಾಶ್ಮೀರ್ ಫೈಲ್ಸ್’ ಬಾಕ್ಸ್ ಆಫೀಸ್: ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರದ ಗಳಿಕೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಬಾಕ್ಸ್ ಆಫೀಸ್‌ನಲ್ಲಿ ಈ ಚಿತ್ರದ ಗಳಿಕೆಯ ಗ್ರಾಫ್ ವೇಗವಾಗಿ ಏರುತ್ತಿದೆ. ಹಳೆಯ ದಾಖಲೆಗಳನ್ನು ಮುರಿದು ಈ ಚಿತ್ರ ಹೊಸ ದಾಖಲೆಗಳನ್ನು ಸೃಷ್ಟಿಸುತ್ತಿದೆ.
"ದಿ ಕಾಶ್ಮೀರ್ ಫೈಲ್ಸ್" ಸಿನಿಮಾ ಪುಷ್ಕರ್‌ನಾಥ್ ಪಂಡಿತ್ ಎಂಬಾ ಕಾಶ್ಮೀರಿ ಪಂಡಿತನ ಸುತ್ತ ಸುತ್ತುವ ಕಥೆಯಾಗಿದ್ದು, ಪುಷ್ಕರ್‌ನಾಥ್ ಪಂಡಿತ್ ಪಾತ್ರವನ್ನ ಸ್ವತಃ ಕಾಶ್ಮೀರಿ ಪಂಡಿತ್ ಆಗಿರುವ ನಟ ಅನುಪಮ್ ಖೇರ್ ಮಾಡಿದ್ದಾರೆ. ಪಾತ್ರಕ್ಕೆ ಜೀವ ತುಂಬಿ ನ್ಯಾಯ ಒದಗಿಸಿದ್ದಾರೆ.
‘ದಿ ಕಾಶ್ಮೀರಿ ಫೈಲ್ಸ್’ ಸಿನಿಮಾ ಕುರಿತು ಕಾಂಗ್ರೆಸ್ ನಾಯಕರು ಉಡಾಫೆಯ ಮಾತುಗಳನ್ನಾಡುವ ಮೂಲಕ ಕಾಶ್ಮೀರದಲ್ಲಿ ಹತ್ಯೆಯಾದ ಕಾಶ್ಮೀರಿ ಪಂಡಿತರ, ದಲಿತರ, ಮುಸಲ್ಮಾನರ ಹತ್ಯೆಯನ್ನು ತುಚ್ಛವಾಗಿಸುತ್ತಿದ್ದಾರೆ.