ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರು 20 ಸದಸ್ಯರ ಹೊಸ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯನ್ನು ರಚಿಸಿದ್ದಾರೆ ಎಂದು ಪಕ್ಷದ ನಾಯಕ ಪಾರ್ಥ ಚಟರ್ಜಿ ಶನಿವಾರ ಮಾಹಿತಿ ನೀಡಿದ್ದಾರೆ.
ಆಘಾತಕಾರಿ ಘಟನೆಗಳಲ್ಲಿ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ - ಗುರುವಾರ (ಡಿಸೆಂಬರ್ 9) ನಾಡಿಯಾ ಜಿಲ್ಲೆಯ ಆಡಳಿತಾತ್ಮಕ ಪರಿಶೀಲನಾ ಸಭೆಯನ್ನು ನಡೆಸುತ್ತಿದ್ದಾಗ - ಕೃಷ್ಣನಗರ ಕ್ಷೇತ್ರದ ಪಕ್ಷದ ಸಂಸದೆ ಮಹುವಾ ಮೊಯಿತ್ರಾ ಅವರ ಮೇಲೆ ತೀವ್ರವಾಗಿ ವಾಗ್ದಾಳಿ ನಡೆಸಿದರು.
Mamata Banerjee: ರಾಷ್ಟ್ರಗೀತೆಗೆ ಅಗೌರವ (Disrespecting the national anthem) ತೋರಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee)ವಿರುದ್ಧ ದೂರು ದಾಖಲಾಗಿದೆ.
ತೃಣಮೂಲ ಕಾಂಗ್ರೆಸ್ ಸೇರಿದ ಎರಡು ದಿನಗಳ ನಂತರ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯನ್ನು ಭೇಟಿಯಾದ ಮಾಜಿ ಬಿಜೆಪಿ ಸಚಿವ ಬಾಬುಲ್ ಸುಪ್ರಿಯೋ ಅವರು ದೀದಿ ಜೊತೆಗಿನ ಮಾತುಕತೆ ಸಂಗೀತದಂತೆ ಇತ್ತು ಎಂದು ಹೇಳಿದ್ದಾರೆ.
ಬಿಜೆಪಿ ತೊರೆದು ತೃಣಮೂಲ ಕಾಂಗ್ರೆಸ್ಗೆ ಸೇರಿದ ಬಾಬುಲ್ ಸುಪ್ರಿಯೋಗೆ ನೀಡಲಾಗಿದ್ದ ಕೇಂದ್ರೀಯ ಅರೆಸೇನಾ ಕಮಾಂಡೋಗಳ ಸಶಸ್ತ್ರ ಭದ್ರತೆಯನ್ನು ಕೇಂದ್ರ ಸರ್ಕಾರ ಕಡಿತಗೊಳಿಸಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ತೃಣಮೂಲ ಕಾಂಗ್ರೆಸ್ ಭಾನುವಾರದಂದು ಪಶ್ಚಿಮ ಬಂಗಾಳದಲ್ಲಿ ಮುಂಬರುವ ಉಪಚುನಾವಣೆ ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳ ಪಟ್ಟಿಯನ್ನು ಘೋಷಿಸಿದ್ದು,ಮಮತಾ ಬ್ಯಾನರ್ಜಿ ಭಬನಿಪುರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎನ್ನಲಾಗಿದೆ.
ತ್ರಿಪುರಾ ಕಾಂಗ್ರೆಸ್ ನಾಯಕ ಪಿಜುಶ್ ಕಾಂತಿ ಬಿಸ್ವಾಸ್ ಅವರು ಪಕ್ಷದ ರಾಜ್ಯ ಘಟಕದ ಮುಖ್ಯಸ್ಥ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.ಈಗ ಬಿಸ್ವಾಸ್ ಅವರ ರಾಜೀನಾಮೆಯು ಈಶ್ಯಾನ್ಯ ರಾಜ್ಯಗಳಲ್ಲಿ ಕಾಂಗ್ರೆಸ್ಗೆ ಮತ್ತೊಂದು ಹೊಡೆತವಾಗಿದೆ.
ಅಖಿಲ ಭಾರತ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಮತ್ತು ಸಿಲ್ಚಾರ್ನ ಮಾಜಿ ಸಂಸದೆ ಸುಶ್ಮಿತಾ ದೇವ್ ಅವರು ಕಾಂಗ್ರೆಸ್ಗೆ ರಾಜೀನಾಮೆ ನೀಡಿದ್ದಾರೆ.ಅವರು ಸಾರ್ವಜನಿಕ ಸೇವೆಯ ಹೊಸ ಅಧ್ಯಾಯವನ್ನು ಆರಂಭಿಸುತ್ತಿರುವುದಾಗಿ ಹೇಳಿದ್ದಾರೆ.ಅವರ ಆಪ್ತ ಮೂಲಗಳ ಪ್ರಕಾರ ತೃಣಮೂಲ ಕಾಂಗ್ರೆಸ್ ಪಕ್ಷಕ್ಕೆ ಸೇರಲಿದ್ದಾರೆ ಎನ್ನಲಾಗಿದೆ.
ಕೋವಿಡ್ ಪರಿಸ್ಥಿತಿ ಗಣನೀಯವಾಗಿ ಸುಧಾರಿಸಿರುವುದರಿಂದ ಪಶ್ಚಿಮ ಬಂಗಾಳದ ಏಳು ವಿಧಾನಸಭಾ ಸ್ಥಾನಗಳಿಗೆ ಉಪಚುನಾವಣೆ ನಡೆಸುವಂತೆ ಒತ್ತಾಯಿಸಲು ತೃಣಮೂಲ ಕಾಂಗ್ರೆಸ್ ನಿಯೋಗ ಜುಲೈ 15 ರಂದು ಚುನಾವಣಾ ಆಯೋಗದ ಅಧಿಕಾರಿಗಳನ್ನು ಭೇಟಿ ಮಾಡಲಿದೆ.
ತೃಣಮೂಲ ಕಾಂಗ್ರೆಸ್ ಸಂಸದೆ ಮಿಮಿ ಚಕ್ರವರ್ತಿ ನಾಲ್ಕು ದಿನಗಳ ಹಿಂದೆ ನಕಲಿ ಕೋವಿಡ್ ಲಸಿಕೆ ತೆಗೆದುಕೊಂಡಿದ್ದರಿಂದಾಗಿ ಶನಿವಾರದಂದು ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದಾರೆ ಎಂದು ಪಿಟಿಐ ವರದಿ ತಿಳಿಸಿದೆ.
ಆಡಳಿತ ಪಕ್ಷ ಟಿಎಂಸಿಯ ಸ್ಥಳೀಯ ನಾಯಕರು ಸ್ಯಾನಿಟೈಸರ್ ಸಿಂಪಡಿಸಿದ ನಂತರ ಸುಮಾರು 150 ಬಿಜೆಪಿ ಕಾರ್ಯಕರ್ತರನ್ನು ಬಂಗಾಳದ ಬಿರ್ಭುಮ್ ಜಿಲ್ಲೆಯಲ್ಲಿ ಗುರುವಾರ ಟಿಎಂಸಿಗೆ ಬರಮಾಡಿಕೊಂಡಿದ್ದಾರೆ.
ಮುಕುಲ್ ರಾಯ್ ಇಂದು ಮಮತಾ ಬ್ಯಾನರ್ಜಿ ಅವರನ್ನು ಭೇಟಿ ಆಗುತ್ತಿರುವುದರಿಂದ ಅವರಿಗೆ ಟಿಎಂಸಿ ಬಾಗಿಲು ತೆರೆಯಬಹುದು ಎಂದು ಹೇಳಲಾಗುತ್ತಿದೆ. ಈ ನಡುವೆ ಚುನಾವಣಾ ಸಮಯದಲ್ಲಿ ಪಕ್ಷ ಬಿಟ್ಟು ಹೋದವರನ್ನು ಮತ್ತೆ ಸೇರಿಸಿಕೊಳ್ಳಬಾರದೆಂಬ ಕೂಗು ಟಿಎಂಸಿಯಲ್ಲಿ ಕೇಳಿಬರುತ್ತಿದೆ. ರಾಜಕಾರಣದಲ್ಲಿ ಏನು ಬೇಕಾದರೂ ಆಗಬಹುದು. ಕಾದುನೋಡಬೇಕು.
ಮೇ 5 ರಂದು ಕೇವಲ ಮಮತಾ ಬ್ಯಾನರ್ಜಿ ಮಾತ್ರ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಮರುದಿನ ಅಂದರೆ ಮೇ 6 ರಂದು ಸಂಪುಟದ ಉಳಿದ ಸಚಿವರು ಅಧಿಕಾರದ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ದೇಶದಲ್ಲಿ ಬಿಜೆಪಿಯ ಅವನತಿ ಪರ್ವ ಶುರುವಾಗಿದೆ. ಪಶ್ಚಿಮ ಬಂಗಾಳದಲ್ಲಿ ದುಡ್ಡು, ಅಧಿಕಾರ ಮತ್ತು ತೋಳ್ಬಲದ ವಾಮಮಾರ್ಗದ ಮೂಲಕ ಸ್ವಲ್ಪಮಟ್ಟಿಗೆ ಬಲವನ್ನು ಹೆಚ್ಚಿಸಿಕೊಂಡರೂ ಗೆಲುವಿನ ದಡದ ಸಮೀಪಕ್ಕೆ ಬರಲಾಗದೆ ಮುಖ ಭಂಗ ಅನುಭವಿಸಿದೆ ಎಂದು ರಾಜ್ಯ ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ಹೇಳಿದ್ದಾರೆ.
ಅರವಿಂದ್ ಕೇಜ್ರಿವಾಲ್ ಟ್ವೀಟ್ ಮಾಡಿ ಮಮತಾ ಬ್ಯಾನರ್ಜಿಗೆ ಅಭಿನಂದಿಸಿದ್ದಾರೆ. ಭರ್ಜರಿ ಗೆಲುವು ಸಾಧಿಸಿದ್ದಕ್ಕಾಗಿ ಶುಭ ಕೋರಿದ್ದಾರೆ. ಇದೇ ವೇಳೆ ಪಶ್ಚಿಮ ಬಂಗಾಳದ ಜನತೆಗೂ ಅಭಿನಂದನೆ ಸಲ್ಲಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.