ಚುನಾವಣಾ ಚಿಹ್ನೆ (ಮೀಸಲಾತಿ ಮತ್ತು ಹಂಚಿಕೆ) ಆದೇಶ, 1968 ರ ಪ್ರಕಾರ, ರಾಜಕೀಯ ಪಕ್ಷವು ರಾಷ್ಟ್ರೀಯ ಪಕ್ಷದ ಸ್ಥಾನಮಾನವನ್ನು ಪಡೆಯುತ್ತದೆ, ಅದರ ಅಭ್ಯರ್ಥಿಗಳು ಲೋಕಸಭೆ ಅಥವಾ ವಿಧಾನಸಭಾ ಚುನಾವಣೆಗಳಲ್ಲಿ ನಾಲ್ಕು ಅಥವಾ ಹೆಚ್ಚಿನ ರಾಜ್ಯಗಳಲ್ಲಿ ಕನಿಷ್ಠ ಆರು ಶೇಕಡಾ ಮತಗಳನ್ನು ಪಡೆದರೆ ಮಾತ್ರ ಈ ಸ್ಥಾನಮಾನ ಸಿಗುತ್ತದೆ.
ಸಿಪಿಎಂ, ಕಾಂಗ್ರೆಸ್ ಮತ್ತು ತೃಣಮೂಲ ಕಾಂಗ್ರೆಸ್ ಪಕ್ಷಕ್ಕೆ ಸೇರಿದ ಪಶ್ಚಿಮ ಬಂಗಾಳದ 107 ಶಾಸಕರು ಶೀಘ್ರದಲ್ಲೇ ಬಿಜೆಪಿಗೆ ಸೇರಲಿದ್ದಾರೆ ಎಂದು ಬಿಜೆಪಿ ನಾಯಕ ಮುಕುಲ್ ರಾಯ್ ಹೇಳಿದ್ದಾರೆ.
ಇತರ ರಾಜ್ಯಗಳಲ್ಲಿ ಅನೇಕ ಹಿಂಸಾಚಾರಗಳು ನಡೆದಿದ್ದರೂ ಪಶ್ಚಿಮ ಬಂಗಾಳವನ್ನು ಸಂಸತ್ತಿನಲ್ಲಿ ಅನಗತ್ಯವಾಗಿ ಗುರಿಯಾಗಿಸಲಾಗುತ್ತಿದೆ ಎಂದು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮಂಗಳವಾರ ಹೇಳಿದೆ.
ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯ ಬಂಡೆಲ್ ಜಂಕ್ಷನ್ ರೈಲ್ವೆ ನಿಲ್ದಾಣದಲ್ಲಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ನಾಯಕಿ ನೀತು ರಾಮ್ ಅವರ ಪತಿ ದಿಲೀಪ್ ರಾಮ್ ಅವರನ್ನು ಅಪರಿಚಿತ ದುಷ್ಕರ್ಮಿಗಳು ಶನಿವಾರ ಗುಂಡಿಕ್ಕಿ ಕೊಂದಿದ್ದಾರೆ.ರೈಲ್ವೆ ನಿಲ್ದಾಣದ ಐದನೇ ಪ್ಲಾಟ್ಫಾರ್ಮ್ನಲ್ಲಿ ಈ ಘಟನೆ ಸಂಭವಿಸಿದೆ.
ಬೆಂಗಾಲಿ ನಟಿ ನುಸ್ರತ್ ಜಹಾನ್ ಇದೇ ಮೊದಲ ಬಾರಿಗೆ ಲೋಕಸಭೆಗೆ ಆಯ್ಕೆಯಾಗಿದ್ದು ಇತ್ತೀಚಿಗೆ ಮುಖ್ಯಾಂಶಗಳಲ್ಲಿದ್ದಾರೆ. ಈಗ ಮೊದಲ ಬಾರಿಗೆ ಅವರು ಪತಿ ನಿಖಿಲ್ ಜೈನ್ ಅವರೊಂದಿಗೆ ಕೆಲವು ರೋಮ್ಯಾಂಟಿಕ್ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.
ಇತ್ತೀಚೆಗೆ ನಡೆದ ಲೋಕಸಭಾ ಚುನಾವಣೆಯಲ್ಲಿ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಎರಡನೇ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ಹಿನ್ನಲೆಯಲ್ಲಿ ಈಗ ಪಶ್ಚಿಮ ಬಂಗಾಳದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜೀ ಬಿಜೆಪಿ ವಿರುದ್ಧ ಜೊತೆಯಾಗಿ ಹೋರಾಡಲು ಕಾಂಗ್ರೆಸ್ ಮತ್ತು ಸಿಪಿಎಂಗೆ ಮನವಿ ಮಾಡಿದ್ದಾರೆ.
ನೂತನವಾಗಿ ಚುನಾಯಿತರಾದ ತೃಣಮೂಲ ಕಾಂಗ್ರೆಸ್ ಸಂಸತ್ ಸದಸ್ಯರಾದ ನುಸ್ರತ್ ಜಹಾನ್ ರುಹಿ ಮತ್ತು ಮಿಮಿ ಚಕ್ರವರ್ತಿ ಅವರು ಮಾಧ್ಯಮದವರು ತಮ್ಮ ಹೇಳಿಕೆ ಮತ್ತು ಫೋಟೋ ಕೇಳಿದ್ದಕ್ಕೆ ಸಂಸತ್ತಿನ ಹೊರಗೆ ತಾಳ್ಮೆ ಕಳೆದುಕೊಂಡಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ ಇತ್ತೀಚೆಗೆ ನಡೆದ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಪಕ್ಷವು18 ಸ್ಥಾನಗಳನ್ನು ಗಳಿಸಿರುವುದು ಈಗ ತೃಣಮೂಲ ಪಕ್ಷದ ಮೇಲೆ ಭಾರಿ ಪ್ರಭಾವ ಬಿರಿದೆ. ಇದಕ್ಕೆ ಪೂರಕವೆನ್ನುವಂತೆ ಸುಮಾರು 20 ಮಹಿಳಾ ಕೌನ್ಸಿಲರ್ಗಳು ಈಗ ಬಿಜೆಪಿಗೆ ಸೇರ್ಪಡೆಯಾಗಲು ಸಿದ್ದರಾಗಿದ್ದಾರೆ ಎಂದು ತಿಳಿದುಬಂದಿದೆ.
ಉತ್ತರಪ್ರದೇಶದ ಮವುನಲ್ಲಿ ಏರ್ಪಡಿಸಿದ್ದ ಚುನಾವಣಾ ಪ್ರಚಾರ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಮೋದಿ, ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ ನಾಯಕರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.