ಹೊಸಪೇಟೆಯ ತುಂಗಭದ್ರಾ ಜಲಾಶಯದ 19ನೇ ಗೇಟ್ ಕೊಚ್ಚಿ ಹೋಗಿರುವ ಹಿನ್ನೆಲೆ ಇಂದು ಜಲಾಶಯಕ್ಕೆ ಡಿಸಿಎಂ ಡಿಕೆಶಿವಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿ, ಗೇಟ್ ದುರಸ್ತಿಗೆ ತ್ವರಿತವಾಗಿ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ತುರ್ತು ಸಂದರ್ಭದಲ್ಲಿ ಸಹಾಯಕ್ಕಾಗಿ ಸಹಾಯವಾಣಿ ಸ್ಥಾಪನೆ; ಜಿಲ್ಲಾಧಿಕಾರಿಗಳ ಕಚೇರಿ 08192-234034, 1077, ಎಸ್ಡಿಆರ್ಎಫ್ ಘಟಕ, ದೇವರಬೆಳೆಕೆರೆ 7411308591, ದಾವಣಗೆರೆ ಅಗ್ನಿಶಾಮಕ ಇಲಾಖೆ 08192-258101, 112, ದಾವಣಗೆರೆ ಮಹಾನಗರ ಪಾಲಿಕೆ 08192-234444, 8277234444, ದಾವಣಗೆರೆ ತಾ; ಕಚೇರಿ 9036396101, ಹರಿಹರ 08192-272959, ಜಗಳೂರು 08196-227242, ಹೊನ್ನಾಳಿ 08188-252108, ನ್ಯಾಮತಿ 8073951245, ಚನ್ನಗಿರಿ 7892481962 ದೂರವಾಣಿ, ಮೊಬೈಲ್ ಸಂಖ್ಯೆಗೆ ಕರೆ ಮಾಡಲು ಕೋರಲಾಗಿದೆ.
ತುಂಗಭದ್ರಾ ಎಡದಂಡೆ ಕಾಲುವೆ ಭಾಗದ ಅನ್ನದಾತರಿಗೆ ನೀರಿನ ಸಮಸ್ಯೆ ಬಗೆಹರಿತಿಲ್ಲ.. ಇತ್ತ ಮಳೆ ಕೂಡ ಕೈಕೊಟ್ಟಿದೆ. ಆಗಸ್ಟ್ ಮೊದಲನೇ ವಾರದಲ್ಲಿ ಸುರಿದ ಮಳೆಯಿಂದ ಬರೋಬ್ಬರಿ ಜಲಾಶಯದಲ್ಲಿ 80 ಟಿಎಂಸಿ ನೀರು ಸಂಗ್ರಹಣೆ ಆಗಿತ್ತು. ಇನ್ನೂ ಎಡದಂಡೆಯ ಮೂಲಕ ಕಾಲುವೆ ನೀರು ಹರಿಸಿ ರೈತರು ಬೆಳೆ ಬೆಳೆಯಲು ಸರ್ಕಾರ ಅನುಕೂಲ ಕಲ್ಪಿಸಿತ್ತು. ಆದರೆ ಕಾಲುವೆಗೆ ನೀರು ಹರಿಸಿ 20 ದಿನಗಳಾದ್ರೂ ಸಹ ಆ ಜಿಲ್ಲೆಯ ರೈತರ ಜಮೀನಿಗೆ ನೀರು ಸಿಗ್ತಾ ಇಲ್ಲ. ಇದ್ರಿಂದ ಸಿಎಂ ಆದೇಶ ಮೇರೆಗೆ ಆ ಸಚಿವರೋಬ್ಬರು ರಿಯಾಲಿಟಿ ಚೆಕ್ ನಡಿಸಿದ್ರು.. ಅದು ಎಲ್ಲಿ ಅಂತೀರಾ ಈ ಸ್ಟೋರಿ ನೋಡಿ.
ಹಾವೇರಿಯಲ್ಲಿ ಮುಂದುವರೆದ ಮಳೆರಾಯನ ಆರ್ಭಟ
ಅಪಾಯ ಮಟ್ಟ ಮೀರಿ ಹರಿಯುತ್ತಿರೋ ತುಂಗಭದ್ರಾ ನದಿ
ನದಿಯಲ್ಲಿ ಕೈ ಕಾಲು ತೊಳೆಯಲು ಹೋಗಿದ್ದ ಯುವಕ ನಾಪತ್ತೆ
ಕಾಲು ಜಾರಿ ಬಿದ್ದು ನೀರಿನಲ್ಲಿ ತೇಲಿ ಹೋದ ಯುವಕ
ರಾಣಿಬೆನ್ನೂರು ತಾ. ಮಾಕನೂರು ಗ್ರಾಮದ ಬಳಿ ಘಟನೆ
ತುಂಗಭದ್ರಾ ಡ್ಯಾಂನಿಂದ ನೀರು ಬಿಡಲಾಗಿದೆ ಆದರೆ ಮಂತ್ರಾಲಯಕ್ಕೆ ಅದರಿಂದ ಯಾವುದೇ ಪ್ರವಾಹವಾಗಿಲ್ಲ ಆ ನೀರು ಸೀಮಿತ ಮಟ್ಟದಲ್ಲೇ ಹರಿಯುತ್ತಿದೆ ಭಕ್ತರ ಆತಂಕ ಪಡದೇ ರಾಯರ ದರ್ಶನಕ್ಕೆ ಆಗಮಿಸಬಹುದು
ತುಂಗಾಭದ್ರಾ ಜಲಾಶಯ ಭರ್ತಿಯಾಗಿದ್ದು, ಹಂಪಿ ಬಳಿಯ ತುಂಗಾಭದ್ರಾ ನದಿಯಲ್ಲೂ ನೀರು ನಾಯಿಗಳು ಕಾಣಿಸಿಕೊಳ್ಳುತ್ತಿವೆ. ಜನರಿಲ್ಲದ ವೇಳೆ ತುಂಗಾಭದ್ರಾ ದಡದ ಮೇಲೆ ನೀರು ನಾಯಿಗಳು ಬರುತ್ತಿದ್ದು, ಕ್ಯಾಮರಾದಲ್ಲಿ ಸೆರೆಯಾಗಿದೆ..
ನಿರೀಕ್ಷೆಗೂ ಮುನ್ನವೇ ಈ ಬಾರಿ ತುಂಗಭದ್ರಾ ಜಲಾಶಯ ಸಂಪೂರ್ಣ ಭರ್ತಿಯಾಗಿದ್ದು, ಪ್ರಸಕ್ತ ವರ್ಷ ರೈತರಿಗೆ ಎರಡೂ ಹಂಗಾಮಿಗೂ ನೀರಿನ ಕೊರತೆಯಾಗದೆ ಸಮರ್ಪಕವಾಗಿ ಲಭ್ಯವಾಗುವ ಎಲ್ಲ ಸಾಧ್ಯತೆಗಳಿವೆ ಎಂದು ಪ್ರವಾಸೋದ್ಯಮ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವ ಆನಂದ್ ಸಿಂಗ್ ಅವರು ಹೇಳಿದರು.
ಸಂಪೂರ್ಣ ಭರ್ತಿಯಾಗಿರುವ ತುಂಗಭದ್ರಾ ಜಲಾಶಯಕ್ಕೆ ಗುರುವಾರದಂದು ಬಾಗಿನ ಸಮರ್ಪಿಸಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಕೊಪ್ಪಳ, ವಿಜಯನಗರ, ರಾಯಚೂರು ಹಾಗೂ ಬಳ್ಳಾರಿ ಜಿಲ್ಲೆಗಳ ಜೀವನಾಡಿಯಾಗಿರುವ ತುಂಗಭದ್ರಾ ಜಲಾಶಯ, ಸುಮಾರು 40 ವರ್ಷದ ಬಳಿಕ ಇದೇ ಮೊದಲ ಬಾರಿಗೆ ಜುಲೈ ತಿಂಗಳಿನಲ್ಲಿಯೇ ಅಂದರೆ ಅವಧಿಗೂ ಮುನ್ನವೇ ಭರ್ತಿಯಾಗಿದ್ದು, ರೈತರು, ಜನಪ್ರತಿನಿಧಿಗಳು ಹಾಗೂ ಈ ಭಾಗದ ಜನರಲ್ಲಿ ಹರ್ಷವನ್ನು ಉಂಟುಮಾಡಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.