Udhayanidhi Stalin on Bjp : ಸನಾತನ ಧರ್ಮವನ್ನು ನಿರ್ಮೂಲನೆ ಮಾಡಬೇಕು ಎನ್ನುವ ಕುರಿತು ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಹೇಳಿಕೆ ನೀಡಿದ್ದರು. ಇದರ ಬೆನ್ನಲೇ ಬಿಜೆಪಿ ವಿರುದ್ಧ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
" ಪ್ರಧಾನಿ ನರೇಂದ್ರ ಮೋದಿ ಕರೆ ಅತ್ಯಂತ ಪ್ರಚೋದನಕಾರಿಯಾದುದು ಮಾತ್ರವಲ್ಲ ಸಂವಿಧಾನ ವಿರೋಧಿಯಾದುದು"-ಸಿಎಂ ಸಿದ್ದರಾಮಯ್ಯ
ಬೆಂಗಳೂರು: ‘‘ಸನಾತನ ಧರ್ಮದ ಬಗೆಗಿನ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಹೇಳಿಕೆಗೆ ತಕ್ಕ ಪ್ರತ್ಯುತ್ತರ ನೀಡಿ’’ ಎಂಬ ಪ್ರಧಾನಿ ನರೇಂದ್ರ ಮೋದಿ ಕರೆ ಅತ್ಯಂತ ಪ್ರಚೋದನಕಾರಿಯಾದುದು ಮಾತ್ರವಲ್ಲ ಸಂವಿಧಾನ ವಿರೋಧಿಯಾದುದು. ಈ ಪ್ರಚೋದನಕಾರಿ ಹೇಳಿಕೆಯನ್ನು ಹಿಂದಕ್ಕೆ ಪಡೆಯಬೇಕೆಂದು ಆಗ್ರಹಿಸುತ್ತೇನೆ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ನೂತನ ಸಂಸತ್ ಕಟ್ಟಡದ ಉದ್ಘಾಟನೆಗೆ ಕೇಂದ್ರ ಸರ್ಕಾರ ಆಹ್ವಾನಿಸದಿರುವುದು 'ಸನಾತನ ಧರ್ಮದ ಅಡಿಯಲ್ಲಿ ಇರುವ ತಾರತಮ್ಯಕ್ಕೆ ಉದಾಹರಣೆಯಾಗಿದೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರ ಪುತ್ರ ಉದಯನಿಧಿ ಮಂಗಳವಾರ ರಾತ್ರಿ ಸುದ್ದಿಗಾರರಿಗೆ ತಿಳಿಸಿದರು.
ತಮಿಳುನಾಡು ಡಿಎಂಕೆ ಸಚಿವ ಉದಯನಿಧಿ ಸ್ಟಾಲಿನ್ ಸನಾತನ ಧರ್ಮದ ಕುರಿತು ನೀಡಿರುವ ಹೇಳಿಕೆ ಖಂಡನೀಯವಾಗಿದ್ದು, ಅವರ ಹೇಳಿಕೆ ಅವರ ಹಿಟ್ಲರ್ ಮನಸ್ಥಿತಿ ತೋರಿಸುತ್ತದೆ. ಚುನಾವಣೆಯಲ್ಲಿ ಒಂದು ವರ್ಗವನ್ನು ಸೆಳೆಯಲು ಈ ರೀತಿ ಮಾಡುತ್ತಾರೆ. ಸಂವಿಧಾನ ವಿರೋಧಿ ಹೇಳಿಕೆ ನೀಡಿರುವ ಉದಯನಿಧಿ ಅವರನ್ನು ತಕ್ಷಣ ಸಂಪುಟದಿಂದ ಕೈಬಿಡಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ.
ಸನಾತನ ಧರ್ಮದ ಬಗ್ಗೆ ಅವಹೇಳನಕಾರಿಯಾಗಿ ಹೇಳಿಕೆ ನೀಡಿರುವ ತಮಿಳುನಾಡಿನ ಸಚಿವ ಉದಯನಿಧಿ ಅವರನ್ನು ಬಂಧಿಸಿ, ಮೊಕದ್ದಮೆ ದಾಖಲಿಸಬೇಕು ಎಂದು ಕನ್ನಡಪರ ಹೋರಾಟಗಾರ ಚಾ.ರಂ.ಶ್ರೀನಿವಾಸಗೌಡ ಆಗ್ರಹಿಸಿದರು.
ತಮಿಳುನಾಡಿನ ಸಚಿವ ಉದಯನಿಧಿ ಸ್ಟಾಲಿನ್ ನಾಲಿಗೆ ಹರಿಬಿಟ್ಟಿದ್ದಾರೆ.. ಭಾಷಣ ಮಾಡುತ್ತಾ ಸನಾತನ ಧರ್ಮದ ನಿರ್ಮೂಲನೆಗೆ ಕರೆ ನೀಡಿದ್ದಾರೆ.. ಉದಯನಿಧಿ ಹೇಳಿಕೆ ನೀಡ್ತಿದ್ದಂತೆ ಇಂಡಿಯಾ ಮೈತ್ರಿಕೂಟದ ವಿರುದ್ಧ ಬಿಜೆಪಿ ನಾಯಕರು ಮುಗಿಬಿದ್ದಿದ್ದಾರೆ.. ಅಷ್ಟಕ್ಕೂ ಉದಯನಿಧಿ ಸ್ಟಾಲಿನ್ ನೀಡಿರೋ ಆ ಹೇಳಿಕೆ ಏನು..? ಇಲ್ಲಿದೆ ನೋಡಿ..
By accepting cookies, you agree to the storing of cookies on your device to enhance site navigation, analyze site usage, and assist in our marketing efforts.