ಬೈಂದೂರು ತಾಲೂಕಿನ ಬಿಜೂರು ಗ್ರಾಮದ ಕಬ್ಸೆಯ ಶಮಿತ್ - ಸಮನ್ವಿ ನಿಲಯದ ನಿವಾಸಿ ಸುಪ್ರೀತಾ ಪೂಜಾರಿ ಎಂಬುವರ ಮಗಳು ಉಪ್ಪುಂದದ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಒಂದನೇ ತರಗತಿ ವಿದ್ಯಾರ್ಥಿನಿ ಸಮನ್ವಿ (6) ಎಂಬಾಕೆಯೇ ದಾರುಣವಾಗಿ ಸಾವನ್ನಪ್ಪಿದ ನತದೃಷ್ಟೆ ಬಾಲಕಿ.
ಕರಾವಳಿ ಜಿಲ್ಲೆಗಳಲ್ಲಿ ವರುಣನ ಆರ್ಭಟ ಹೆಚ್ಚಾಗಿದೆ. ನಿರಂತರ ಮಳೆಯಿಂದಾಗಿ ಉಡುಪಿ ಜಿಲ್ಲೆಯಲ್ಲಿ ಜಲಪ್ರಳಯವೇ ಸೃಷ್ಟಿ ಆಗಿದೆ. ಜಿಲ್ಲೆಯಲ್ಲಿನ ನದಿಗಳು ಉಕ್ಕಿ ಹರಿಯುತ್ತಿದ್ದು, ನದಿ ಪಾತ್ರದಲ್ಲಿನ ಮನೆಗಳು ಸಂಪೂರ್ಣ ಜಲಾವೃತವಾಗಿವೆ.
ಕೊರೊನಾ ಆಯ್ತು ಈಗ ಟೊಮೆಟೋ ಪ್ಲೂ.. ಕೇರಳದಲ್ಲಿ ಆತಂಕ ಸೃಷ್ಟಿಸಿರೋ ಈ ಫ್ಲೂ ಕರ್ನಾಟಕದ ರಾಜ್ಯದಲ್ಲೂ ಕಾಣಿಸಿಕೊಂಡಿದೆ. ಕೇರಳ ಗಡಿ ಮಂಗಳೂರು ಬಳಿ ಮಗುವೊಂದಕ್ಕೆ ಸೋಂಕು ಕಾಣಿಸಿಕೊಂಡಿದ್ದು ಪೋಷಕರನ್ನು ಕಂಗೆಡಿಸಿದೆ.
ಮಲ್ಪೆಯ ತೇಲು ಸೇತುವೆ ಎರಡೇ ದಿನಕ್ಕೆ ಢಮಾರ್ .. ಮಲ್ಪೆಯಲ್ಲಿ 80 ಲಕ್ಷ ಖರ್ಚು ಮಾಡಿ ನಿರ್ಮಿಸಿದ್ದ ತೇಲು ಸೇತುವೆ ಕೇವಲ ಎರಡೇ ದಿನಕ್ಕೆ ಢಮಾರ್ ಆಗಿದ್ದು ಜನ ಬಿಜೆಪಿ ಸರ್ಕಾರ ಮತ್ತು ಉಡುಪಿ ಜಿಲ್ಲಾಡಳಿತಕ್ಕೂ ಹಿಡಿಶಾಪ ಹಾಕ್ತಿದ್ದಾರೆ.
ಉಡುಪಿ ಮಲ್ಪೆ ಬೀಚ್ನಲ್ಲಿ ಪ್ರವಾಸಿಗರ ಆಕರ್ಷಣೆಗೋಸ್ಕರ ನಿರ್ಮಾಣವಾಗಿರುವ ತೇಲುವ ಸೇತುವೆಯನ್ನು ಶಾಸಕ ರಘುಪತಿ ಭಟ್ ಉದ್ಘಾಟಿಸಿದರು. ರಾಜ್ಯದಲ್ಲಿ ಮೊದಲ ಬಾರಿಗೆ ಮಲ್ಪೆ ಬೀಚಿನಲ್ಲಿ ಈ ತೇಲುವ ಸೇತುವೆ ನಿರ್ಮಾಣವಾಗಿದೆ..
ಸಂತೋಷ್ ಪಾಟೀಲ್ ಎಂಬ ಗುತ್ತಿಗೆದಾರನ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಧ್ಯಮ ಹೇಳಿಕೆ ನೀಡಿರುವ ಅವರು, ಗುತ್ತಿಗೆದಾರ ಹಾಗೂ ಬಿಜೆಪಿ ಕಾರ್ಯಕರ್ತನೊಬ್ಬ ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ ಅವರಿಗೆ ಕಮೀಷನ್ ನೀಡಿ ರಸ್ತೆ ಕಾಮಗಾರಿಯನ್ನು ಗುತ್ತಿಗೆ ಪಡೆದಿದ್ದರು.
Hijab Row: ಹಿಜಾಬ್ ಪ್ರಕರಣದ ಕುರಿತು ಕರ್ನಾಟಕ ಹೈಕೋರ್ಟ್ (Karnataka High Court) ತೀರ್ಪು ನೀಡಿದ್ದು, ಹಿಜಾಬ್ ಇಸ್ಲಾಂ ಧರ್ಮದ ಅತ್ಯಗತ್ಯ ಭಾಗವಲ್ಲ ಎಂದು ಹೇಳಿದೆ. ಅದರ ನಂತರ AIMIM ಮುಖ್ಯಸ್ಥ ಮತ್ತು ಸಂಸದ ಅಸಾದುದ್ದೀನ್ ಓವೈಸಿ (Asaduddin Owaisi) ಕರ್ನಾಟಕ ಹೈಕೋರ್ಟ್ನ ತೀರ್ಪನ್ನು ಒಪ್ಪಲು ನಿರಾಕರಿಸಿದ್ದಾರೆ. ಕರ್ನಾಟಕ ಹೈಕೋರ್ಟ್ ನೀಡಿರುವ ತೀರ್ಪನ್ನು ತಾವು ಒಪ್ಪುವುದಿಲ್ಲ ಎಂದು ಓವೈಸಿ ಹೇಳಿದ್ದಾರೆ.
ಬುಧವಾರ ಬೆಳಗಿನ ಜಾವ 4.30ರ ಸುಮಾರಿಗೆ ಮಣಿಪಾಲದಲ್ಲಿ ಬಸ್ಗೆ ಬೆಂಕಿ ಹೊತ್ತಿಕೊಂಡ ಘಟನೆ ನಡೆದಿದೆ. ಬಸ್ ಚಾಲಕನ ಸಮಯ ಪ್ರಜ್ಞೆಯಿಂದ ಅದೃಷ್ಟವಷಾತ್ ಬಸ್ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.