ಇದೇ ತಿಂಗಳ ಮೂರನೇ ತಾರೀಕಿನಂದು ಬೆಂಗಳೂರಿನ ಕೋರಮಂಗಲದ ಕ್ರೈಸ್ಟ್ ಯೂನಿವರ್ಸಿಟಿಯ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ನೆರವೇರಿದೆ. ಅದರಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ಅರ್ಚನಾ ಪಾಲಿಗೆ ಅತ್ಯಂತ ಅರ್ಥಪೂರ್ಣವಾದ ಕಾರ್ಯಕ್ರಮದಲ್ಲಿ, ಕನ್ನಡದ ಹಬ್ಬದಲ್ಲಿ ಭಾಗಿಯಾದ ಖುಷಿ ಸಿಕ್ಕಿದೆ.
ಸದಾ ಒಂದಿಲ್ಲೊಂದು ವಿಚಾರದಲ್ಲಿ ಸುದ್ದಿಯಲ್ಲಿರುವ ಕರ್ನಾಟಕ ವಿಶ್ವ ವಿದ್ಯಾಲಯದ ಮೇಲೆ ಮತ್ತೊಂದು ಆರೋಪ ಕೇಳಿಬಂದಿದೆ.. ಎಸ್ಸಿ ಎಸ್ಟಿ ವಿದ್ಯಾರ್ಥಿಗಳಿಗೆ ಕಲಿಕೆಯಲ್ಲಿ ಮೀಸಲಾತಿ ನೀಡಬೇಕು ಅಂತ ಸರ್ಕಾರ ಆದೇಶ ಹೊರಡಿಸಿದೆ. ಆದ್ರೆ ಈ ವಿಶ್ವವಿದ್ಯಾಲಯದಲ್ಲಿ ಮಾತ್ರ ಸರ್ಕಾರದ ಆದೇಶ ಪತ್ರವೇ ಸಿಕ್ಕಿಲ್ಲವಂತೆ.
ಸೂಕ್ತ ಸ್ಥಳ ಗುರುತಿಸದೇ ಬೆಂಗಳೂರು ವಿವಿ ಆವರಣದಲ್ಲಿ ದೇವಾಲಯ ನಿರ್ಮಾಣ ಮಾಡಲಾಗ್ತಿದ್ದು, ಬೆಂಗಳೂರು ವಿ.ವಿ ವಿದ್ಯಾರ್ಥಿಗಳ ಆಕ್ರೋಶ ಮುಂದುವರೆದಿದೆ. ಕೂಡಲೇ ಕಾಮಗಾರಿಯನ್ನ ನಿಲ್ಲಿಸುವಂತೆ ವಿದ್ಯಾರ್ಥಿಗಳು ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ.
ಕಾಲೇಜುಗಳಲ್ಲಿ ಶೈಕ್ಷಣಿಕ ವರ್ಷದ ಪಾಠ ಪ್ರವಚನಗಳು ಪೂರ್ಣಗೊಳ್ಳದ ಹಿನ್ನೆಲೆಯಲ್ಲಿ ಪರೀಕ್ಷೆ ಯಾವಾಗ, ಹೇಗೆ ನಡೆಸಬೇಕು ಎಂಬ ಬಗ್ಗೆ ಕುಲಪತಿಗಳ ಸಲಹೆ ಕೇಳಲಾಗಿದೆ. ಆನ್ಲೈನ್ ಮೂಲಕ ಪಾಠ ಪೂರ್ಣಗೊಳಿಸಿ ಪರೀಕ್ಷೆ ನಡೆಸಬೇಕೇ ಅಥವಾ ತರಗತಿಗಳು ಆರಂಭವಾದ ನಂತರ ತಡವಾಗಿ ಪರೀಕ್ಷೆ ನಡೆಬೇಕೇ ಎಂಬ ಬಗ್ಗೆ ಮಾಹಿತಿ ಕೋರಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಾ. ಅಶ್ವತ್ಥನಾರಾಯಣ ತಿಳಿಸಿದ್ದಾರೆ.
ಯುಜಿಸಿ ಮಾನ್ಯತೆ ಪಡೆದ ಡೀಮ್ಡ್(ಸ್ವಾಯತ್ತ) ಶಿಕ್ಷಣ ಸಂಸ್ಥೆಗಳು ಇನ್ನು ಮುಂದೆ ತಮ್ಮ ಹೆಸರಿನ ಮುಂದೆ ಯುನಿವರ್ಸಿಟಿ(ವಿಶ್ವವಿದ್ಯಾನಿಲಯ) ಪದ ಬಳಸದಂತೆ ಯುಜಿಸಿ ದೇಶಾದ್ಯಂತ ಒಟ್ಟು 29 ಶಿಕ್ಷಣ ಸಂಸ್ಥೆಗಳಿಗೆ ಯುಜಿಸಿ ಆದೇಶ ನೀಡಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.