ಮೈಸೂರು ಜಿಲ್ಲೆಯ ಚುನಾವಣಾ ಕದನ ಕಣ ರಂಗೇರಿದೆ. ಒಂದೆಡೆ ವರುಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸೋಮಣ್ಣ ಮೈಸೂರಲ್ಲಿ ಸಂಚಾರ ಜೋರಾಗಿದೆ.. ಸಿದ್ದರಾಮಯ್ಯ ಹಾಗೂ ಸೋಮಣ್ಣ ಇಬ್ಬರೂ ಸುತ್ತೂರು ಶ್ರೀಗಳ ಆಶೀರ್ವಾದ ಪಡೆದಿದ್ದು ಭರ್ಜರಿ ಪ್ರಚಾರ ನಡೆಸ್ತಿದ್ದಾರೆ..
ಬಿಜೆಪಿ ಅಧಿಕಾರಕ್ಕೆ ಬರೋದು ಮುಖ್ಯ. ಮುಂದಿನ ಸಿಎಂ ಯಾರು ಅನ್ನೋದನ್ನ ಪಕ್ಷದ ವರಿಷ್ಠರು ತೀರ್ಮಾನ ಮಾಡ್ತಾರೆ. 19 ರಂದು ನಾನು ನಾಮಪತ್ರ ಸಲ್ಲಿಕೆ ಮಾಡ್ತೀನಿ. ನಾವು ಮೆಜಾರಿಟಿ ಬಂದೇ ಬರ್ತೀವಿ ಎಂದು ಶಿಕಾರಿಪುರ ವಿಧಾನಸಭಾ ಕ್ಷೇತ್ರ ಬಿಜೆಪಿ ಅಭ್ಯರ್ಥಿ ಬಿ.ವೈ.ವಿಜಯೇಂದ್ರ ಭರವಸೆ ವ್ಯಕ್ತಪಡಿಸಿದರು.
ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಪ್ರಬಲ ಸ್ಪರ್ಧೆ ಒಡ್ಡಲು ಬಿಜೆಪಿ ವಿ. ಸೋಮಣ್ಣ ಅವರಿಗೆ ಟಿಕೆಟ್ ಕೊಟ್ಟಿದೆ. ಆದರೆ, ವರುಣಗೆ ಸೋಮಣ್ಣ ಹೋಗಲಾರದೇ ಚಾಮರಾಜನಗರದಲ್ಲೇ ಕಟ್ಟಿಹಾಕಲು ಕಾಂಗ್ರೆಸ್ ಮುಂದಾಗಿದ್ದು ಇದಕ್ಕೇ ಬಿಜೆಪಿ ಬಂಡಾಯವೇ ಬಂಡವಾಳವಾಗಿದೆ. ಸೋಮಣ್ಣಗೆ ಚಾಮರಾಜನಗರದ ಟಿಕೆಟ್ ಘೋಷಣೆಯಾಗುತ್ತಿದ್ದಂತೆ ಭಿನ್ನಮತ ಸ್ಪೋಟವಾಗಿದೆ.
Karnataka Assembly Election: ಪಕ್ಷ ಸಂಘಟನೆಗೆ ಕರೆದರೇ ನನಗೂ ಬಿಜೆಪಿಗೂ ಸಂಬಂಧವಿಲ್ಲ, ನಾನು ಸರ್ಕಾರದ ಸಚಿವ ಎಂದು ಹೇಳುತ್ತಿದ್ದರು. ಪಕ್ಷದಿಂದ ಒಂದು ಹೆಜ್ಜೆ ಹೊರಗೆ ಇಟ್ಟಿದ್ದ ಸೋಮಣ್ಣ ಅವರು ಕೆಲ ಷರತ್ತುಗಳಿಂದ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ. ಚಾಮರಾಜನಗರದಲ್ಲಿ ಕಳೆದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಸೋಲಲು ಸೋಮಣ್ಣ ಅವರು ಕಾರಣ, ಈಗ ಸೋಮಣ್ಣ ಅವರೇ ಅಭ್ಯರ್ಥಿಯಾಗಿರುವುದು ವಿಪರ್ಯಾಸ- ಚಾಮರಾಜನಗರ ಬಿಜೆಪಿ ಟಿಕೆಟ್ ಆಕಾಂಕ್ಷಿ ರುದ್ರೇಶ್
ಜಗದೀಶ್ ಶೆಟ್ಟರ್, ಕೆಎಸ್ ಈಶ್ವರಪ್ಪ, ಲಕ್ಷ್ಮಣ್ ಸವದಿ ಅವರಿಗೆ ಬಿಜೆಪಿ ಟಿಕೆಟ್ ನೀಡದೇ ಶಾಕ್ ನೀಡಿದೆ. ಇದರ ಬೆನ್ನಲ್ಲೇ ಪಕ್ಷದ ಮೇಲೆ ಈ ಮೂವರು ನಾಯಕರು ಹರಿಹಾಯ್ದಿದ್ದಾರೆ. ಇದರ ನಡುವೆ ಹೊಸ ವಿಚಾರವೊಂದು ಮುನ್ನೆಲೆಗೆ ಬಂದಿದೆ. ಒಂದು ವೇಳೆ ಗಾಲಿ ಜನಾರ್ಧನ ರೆಡ್ಡಿ ನೇತೃತ್ವದ ಕಲ್ಯಾಣ ರಾಜ್ಯ ಪ್ರಗತಿ ಪಕ್ಷಕ್ಕೆ ಈ ಮೂವರು ದಿಗ್ಗಜರು ಸೇರಿದಂತೆ ಅಸಮಾಧಾನಿತ ಬಿಜೆಪಿ ನಾಯಕರು ಸಾಥ್ ನೀಡಿದ್ರೆ, ಈ ಭಾಗದಲ್ಲಿ ಬಿಜೆಪಿ ಗೆಲ್ಲುವು ಕಷ್ಟಕರವಾಗಲಿದೆ.
189 ಕ್ಷೇತ್ರಗಳಿಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಹೆಸರನ್ನು ಪ್ರಕಟಗೊಳಿಸಿದೆ. ಅಲ್ಲದೆ, ಈ ಬಾಗಿ ಬರೋಬ್ಬರಿ 52 ಹೊಸ ಮುಖಗಳಿಗೆ ಕಮಲ ಪಾಳಯ ಮಣೆ ಹಾಕಿದೆ. ಇದರ ನಡುವೆ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಸ್ಥಾನ ತುಂಬಿದ್ದ ದಿಗ್ಗಜ ನಾಯಕರಿಗೆ ಟಿಕೆಟ್ ನೀಡದೇ ಹೈಕಮಾಂಡ್ ಶಾಕ್ ನೀಡಿದೆ.
ಬಿಜೆಪಿಯವರು ಬರೀ ಸುಳ್ಳು ಹೇಳಿಕೊಂಡು ರಾಜಕಾರಣ ಮಾಡಿದ್ದಾರೆ, ಕಾಂಗ್ರೆಸ್ ಅಭಿವೃದ್ಧಿ ಪರದ ಸರ್ಕಾರ ನೋಡಿದ್ದಾರೆ ಆದ್ದರಿಂದ ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಸೋಲಲಿದ್ದು ಕಾಂಗ್ರೆಸ್ ಗೆಲ್ಲಲಿದೆ ಎಂದು ಚಾಮರಾಜನಗರ ಕಾಂಗ್ರೆಸ್ ಅಭ್ಯರ್ಥಿ ಸಿ. ಪುಟ್ಟರಂಗಶೆಟ್ಟಿಯವರು ಹೇಳಿದರು.
Karnataka Assembly Election: ನೀತಿ ಸಂಹಿತೆ ಘೋಷಣೆಯಾದ ಬಳಿಕ ಸೋಮಣ್ಣ ಜಿಲ್ಲೆಗೆ ಅವರ ಮೊದಲ ಬೇಟಿ ಇದಾಗಿದ್ದು ಅವರ ಅಭಿಮಾನಿಗಳು ಜಿಲ್ಲೆಯ ನಾಲ್ಕೈದು ಕಡೆ ಪಟಾಕಿ ಸಿಡಿಸಿ, ಹೂಗಳನ್ನು ಎರಚಿ ಸ್ವಾಗತ ಕೋರಿರುವುದು ಸೋಮಣ್ಣ ಚಾಮರಾಜನಗರಕ್ಕೆ ಬರುತ್ತಾರೆ ಎಂಬ ಊಹಾಪೋಹಕ್ಕೆ ಇಂಬು ಕೊಟ್ಟಿದೆ.
Karnataka Assembly Eelection: ಟಿಕೆಟ್ ಸಂಬಂಧ ನಡೆದ ಕೋರ್ ಕಮಿಟಿ ಸಭೆಯಲ್ಲಿ ಸಚಿವ ವಿ. ಸೋಮಣ್ಣ ಅವರ ಹೆಸರು ಪ್ರಬಲವಾಗಿ ಕೇಳಿಬಂದಿದೆ. ಜೊತೆಗೆ, ಟಿಕೆಟ್ ಗಾಗಿ ಓಡಾಡುತ್ತಿದ್ದ ವಿಜಯೇಂದ್ರ ಆಪ್ತ ರುದ್ರೇಶ್ ಹೆಸರು ಪ್ರಸ್ತಾಪ ಆಗಿಲ್ಲದಿರುವುದು ಗಡಿಜಿಲ್ಲೆ ರಾಜಕೀಯದ ಹೊಸ ಟರ್ನಿಂಗ್ ಪಾಯಿಂಟಾಗಿದ್ದು ವರಿಷ್ಠರ ಸಭೆಯಲ್ಲಿ ರುದ್ರೇಶ್ ಹೆಸರು ಪ್ರಸ್ತಾಪ ಆಗದಿರುವುದರಿಂದ ಅವರಿಗೆ ಟಿಕೆಟ್ ನೀಡುವ ಸಾಧ್ಯತೆ ಕಡಿಮೆ ಎನ್ನಲಾಗಿದೆ.
ಇದೇ 26 ಇಲ್ಲವೇ 27 ಕ್ಕೆ ಸಚಿವ ಸೋಮಣ್ಣ ಗ್ರಾಮದ ದೇಗುಲಕ್ಕೆ ಬಂದು ಕೊಟ್ಟ ಮಾತಿನಂತೆ ರಥ ನಿರ್ಮಿಸಿಕೊಡಬೇಕು ಇಲ್ಲದಿದ್ದರೇ ಗೋ ಬ್ಯಾಕ್ ಸೋಮಣ್ಣ ಹೋರಾಟ ಮಾಡುತ್ತೇವೆ. ಜೊತೆಗೆ, ಚುನಾವಣೆಯನ್ನೂ ಬಹಿಷ್ಕರಿಸುತ್ತೇವೆ ಎಂದು ಗ್ರಾಮದ ಮುಖಂಡರುಗಳು ಎಚ್ಚರಿಕೆ ಕೊಟ್ಟಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.