ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ತೆರೆದುಕೊಂಡ ಮೊದಲ ಹಗರಣ ಅಂದ್ರೆ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಬೆಳಕಿಗೆ ಬಂದ 187 ಕೋಟಿ ರೂಪಾಯಿ ಹಗರಣ. ಚಂದ್ರಶೇಖರ್ ಎಂಬ ಅಧಿಕಾರಿಯ ಆತ್ಮಹತ್ಯೆಯ ಮೂಲಕ ಬೆಳಕಿಗೆ ಬಂದ ಈ ಹಗರಣ ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿತ್ತು. ಈ ಪ್ರಕರಣದಲ್ಲಿ 89 ಕೋಟಿ ದುರ್ಬಳಕೆ ಕೇಸ್ ಗೆ ಸಂಬಂಧಪಟ್ಟಂತೆ ಇಂದು ಮಹತ್ವದ ತೀರ್ಪು ಹೊರಬೀಳುವ ಸಾಧ್ಯತೆಗಳಿದೆ.
ಪ್ರಕರಣದ ದೂರುದಾರ ಕಲ್ಲೇಶ್ ಬಿ ನ್ಯಾಯಾಲಯಕ್ಕೆ ಮೆಮೊ ಸಲ್ಲಿಸಿ ದೂರನ್ನು ಮತ್ತಷ್ಟು ಮುಂದುವರೆಸಲು ಇಚ್ಚಿಸುವುದಿಲ್ಲ ಎಂಬುದಾಗಿ ತಿಳಿಸಿದ್ದಾರೆ. ಹೀಗಾಗಿ ಪ್ರಕರಣವನ್ನು ಮುಂದುವರೆಸುವ ಅಗತ್ಯವಿಲ್ಲ ಎಂದು ನ್ಯಾಯಪೀಠ ತನ್ನ ಆದೇಶದಲ್ಲಿ ತಿಳಿಸಿದೆ.
ನಾನು ಬಿಚ್ಚೋಕ್ಕೆ ಹೋದ್ರೆ ನಿಮ್ಮದು ಪುಟಗಟ್ಟಲೆ ಇದೆ. ಅಜ್ಜಯ್ಯನ ಬಗ್ಗೆ ಈ ಡಿ.ಕೆ.ಶಿವಕುಮಾರ್ ಗೆ ಭಕ್ತಿ ಗೌರವ ಇದ್ದರೆ ಪ್ರಮಾಣ ಮಾಡಲಿ. ಅಜ್ಜಯ್ಯನ ಬಗ್ಗೆ ನನಗೆ ಗೌರವ, ಭಕ್ತಿ ಎರಡೂ ಇದೆ. ನಾನು ಪ್ರಾಮಾಣಿಕವಾಗಿ ಬೆಳೆದು ಬಂದಿದೇನೆ ಎಂದು ಅವರ ಮೇಲೆ ಪ್ರಮಾಣ ಮಾಡಿ. ನಾನೂ ಪ್ರಮಾಣ ಮಾಡುತ್ತೇನೆ ಎಂದು ಕೇಂದ್ರ ಸಚಿವರ ಹೆಚ್.ಡಿ.ಕುಮಾರಸ್ವಾಮಿ ಡಿಸಿಎಂ ಹೆಚ್ಡಿ ಕುಮಾರಸ್ವಾಮಿ ವಿರುದ್ಧ ಕಿಡಿಕಾರಿದರು..
ರಾಜ್ಯ ಬಿಜೆಪಿ ವರಿಷ್ಠ ಬಿ. ಎಸ್.ಯಡಿಯೂರಪ್ಪ ಅವರ ನೇತೃತ್ವದಲ್ಲಿ ನಡೆದ ಸಂಸದೀಯ ಮಂಡಳಿ ಮತ್ತು ಚುನಾವಣಾ ಸಮಿತಿ ಸದಸ್ಯರ ಸಭೆಯಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರಗಳ ವಿರುದ್ಧ ಹೋರಾಟ ನಡೆಸುವ ಸಂಬಂಧ ಚರ್ಚಿಸಿ ನಿರ್ಧರಿಸಲಾಗಿದೆ ಎಂದು ಕೇಂದ್ರ ಸಚಿವರ ಜೋಶಿ ತಿಳಿಸಿದರು.
ವಾಲ್ಮೀಕಿ ನಿಗಮದಲ್ಲಿ ನಡೆದ ಭ್ರಷ್ಟಾಚಾರ ಹಗರಣದಲ್ಲಿ 189 ಕೋಟಿ ರೂ.ಗಳನ್ನು ವರ್ಗಾವಣೆ ಮಾಡಬೇಕಿತ್ತು. ಆರಂಭದಲ್ಲಿ 89 ಕೋಟಿ ರು.ವರ್ಗಾವಣೆ ಮಾಡಲಾಗಿದೆ. ಇದು ಬಹಳ ದೊಡ್ಡ ಹಗರಣವಾಗಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದರು.
ನಾನು ರಾಜ್ಯಕ್ಕೆ ಬರುವುದನ್ನೇ ಸಹಿಸಲ್ಲ ಅಂದರೆ ನನ್ನಿಂದ ಏನು ನಿರೀಕ್ಷೆ ಮಾಡುತ್ತಾರೆ ಇವರು..? ನಾನು ಬರಲೇಬಾರದು ಎನ್ನುವ ರೀತಿ ಸಿಎಂ, ಡಿಸಿಎಂ ಹಾಗೂ ಸಚಿವರು ಹೇಳಿಕೆಗಳನ್ನು ನೀಡುತ್ತಿದ್ದಾರೆ. ಸ್ಥಳ ಪರಿಶೀಲನೆ ಮಾಡುವುದು ಜನಪ್ರತಿನಿಧಿಯಾಗಿ ನನ್ನ ಧರ್ಮ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಕಿಡಿಕಾರಿದರು.
ಬಿಜೆಪಿಗರ ಕಾಲದಲ್ಲಿ ಜಾರಿ ನಿರ್ದೇಶನಾಲಯ ಮಧ್ಯ ಪ್ರವೇಶ ಮಾಡಲಿಲ್ಲ. ಭೋವಿ ಅಭಿವೃದ್ಧಿ ನಿಗಮದಲ್ಲಿ 60 ಕೋಟಿ ರೂ.ಗಳನ್ನು ನುಂಗಿಹಾಕಿದ್ದಾರೆ. ದೇವರಾಜ ಅರಸ್ ಟ್ರಕ್ ಟರ್ಮಿನಲ್ ನಲ್ಲಿ 47 ಕೋಟಿ ರೂ.ಗಳಿಗೂ ಹೆಚ್ಚು ಹಣ ತಿಂದು ಜೈಲಿಗೆ ಹೋದವರು ಯಾವ ಪಕ್ಷವರು ? ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣವನ್ನು ಮುಚ್ಚಿಹಾಕುವ ಸ್ಪಷ್ಟ ತೀರ್ಮಾನವನ್ನು ಕಾಂಗ್ರೆಸ್ ಮಾಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮುಖವಾಡ ಕಳಚಿ ಬಿದ್ದಿದ್ದು, ಅವರೆಷ್ಟು ಶುದ್ಧ ಹಸ್ತರು ಎಂದು ಬಯಲಾಗಿದೆ ಎಂದು ವಿಪಕ್ಷ ನಾಯಕ ಆರ್. ಅಶೋಕ್ ಕಿಡಿಕಾರಿದರು..
ಸದನದಲ್ಲಿ ಸದಸ್ಯರು ಮಾತನಾಡುವಾಗ ಅವರನ್ನು ಒತ್ತಾಯಪೂರ್ವಕವಾಗಿ ಸ್ಪೀಕರ್ ಕೂರಿಸುತ್ತಿದ್ದಾರೆ. ಇದು ಸದನಕ್ಕೆ ಅಥವಾ ಸ್ಪೀಕರ್ಗೆ ಗೌರವ ತರುವುದಿಲ್ಲ. ಕರ್ನಾಟಕದ ಇತಿಹಾಸದಲ್ಲಿ ಈ ರೀತಿ ಸದನ ನಡೆದಿಲ್ಲ. ಸ್ಪೀಕರ್ ಸದನ ನಡೆಸಲು ಸಂಪೂರ್ಣ ವಿಫಲರಾಗಿದ್ದಾರೆ ಎಂದು ವಿಪಕ್ಷ ನಾಯಕ ಆರ್. ಅಶೋಕ್ ಹೇಳಿದರು..
By accepting cookies, you agree to the storing of cookies on your device to enhance site navigation, analyze site usage, and assist in our marketing efforts.